ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಬಹುನೀರಿಕ್ಷಿತ ಸ್ಕೋಡಾ ಕುಶಾಕ್ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಜ್ಜಾಗುತ್ತಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಹಾಗೂ ಪವರ್‌ಫುಲ್ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಕುಶಾಕ್ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಸದ್ಯ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವ ಸ್ಕೋಡಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿ ಮಾರಾಟ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲು ಸಿದ್ದತೆಯಲ್ಲಿದ್ದು, ಹೊಸ ಕಾರು ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿಯ ಟೈಗನ್ ಕಾರು ಮಾದರಿಯೊಂದಿಗೂ ಹಲವು ತಾಂತ್ರಿಕ ಅಂಶಗಳನ್ನು ಎರವಲು ಪಡದುಕೊಳ್ಳಲಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ತಾಂತ್ರಿಕವಾಗಿ ಫೋಕ್ಸ್‌ವ್ಯಾಗನ್ ನಿರ್ಮಾಣದ ಟೈಗನ್ ಕಾರು ಮಾದರಿಗಿಂತಲೂ ಐಷಾರಾಮಿ ಫೀಚರ್ಸ್ ಪಡೆದುಕೊಳ್ಳಲಿರುವ ಸ್ಕೋಡಾ ಕುಶಾಕ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍‍ಯುವಿಯ ಮಾದರಿಯನ್ನು ಆಧರಿಸಿ ಹೊಸ ಕಾರು ಅಭಿವೃದ್ದಿಗೊಂಡಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಹೊಸ ಎಸ್‍‍ಯುವಿ ಕಾರಿನ ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಜೋಡಣೆ ಹೊಂದಿದ್ದು, ಡ್ಯುಯಲ್ ಹೆಡ್‍‍ಲ್ಯಾಂಪ್‍, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ವಿನ್ಯಾಸ ಹೊಂದಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಕುಶಾಕ್ ಎಸ್‍‍ಯುವಿಯ ಎರಡು ಬದಿಯಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲಿ ಸ್ಪೋರ್ಟಿ ಥೀಮ್ ನೀಡಲಾಗಿದ್ದು, ಹೊಸ ಎಸ್‍‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍‍‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್, ಆರಾಮದಾಯಕ ವೆಂಟೆಲೆಟೆಡ್ ಆಸನಗಳು, ವೈರ್‌ಲೆಸ್ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್‌ಪ್ಲೇ, 360 ಡಿಗ್ರಿ ಕ್ಯಾಮೆರಾ, ಸನ್‌ರೂಫ್ ಸೌಲಭ್ಯವಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಹೊಸ ಕಾರಿನಲ್ಲಿ ತಾಂತ್ರಿಕ ಅಂಶಗಳು ಜೋಡಣೆಯಾಗಲಿದ್ದು, ಹೊಸ ಕಾರಿನಲ್ಲಿ ಸುರಕ್ಷತೆಗಾಗಿ ಬೆಸ್ ವೆರಿಯೆಂಟ್‌ನಲ್ಲಿ 4 ಏರ್‌ಬ್ಯಾಗ್, ಟಾಪ್ ಎಂಡ್ ಮಾದರಿಯಲ್ಲಿ 6 ಏರ್‌ಬ್ಯಾಗ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಇಎಸ್‌ಪಿ ಸೇರಿದಂತೆ ಹಲವಾರು ಸೇಫ್ಟಿ ಫೀಚರ್ಸ್‌ಗಳಿವೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಸ್ಕೋಡಾ ಕಂಪನಿಯು ಹೊಸ ಕುಶಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು ಮೂರು ಸಿಲಿಂಡರ್ ಸೌಲಭ್ಯದೊಂದಿಗೆ 120-ಬಿಎಚ್‌ಪಿ ಉತ್ಪದನೆ ಮಾಡಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮಾದರಿಯು ನಾಲ್ಕು ಸಿಲಿಂಡರ್ ಸೌಲಭ್ಯದೊಂದಿಗೆ 150-ಬಿಎಚ್‍‌ಪಿ ಉತ್ಪಾದನೆಯೊಂದಿಗೆ ಕಂಪ್ಯಾಕ್ಟ್ ಎಸ್‌‌ಯುವಿ ಕಾರಿನಲ್ಲಿಯೇ ಪವರ್‍‌ಫುಲ್ ಕಾರು ಮಾದರಿಯಾಗಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಎಂಜಿನ್ ಆಯ್ಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗುತ್ತಿದ್ದು, ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಬಹುದಾಗಿದೆ.

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿಯು ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕುಶಾಕ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಅತ್ಯುತ್ತಮ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಸ್ಕೋಡಾ ಕುಶಾಕ್ ಎಸ್‌ಯುವಿ

ಹೊಸ ಕಾರು ಎಂಜಿನ್ ಮತ್ತು ಬೆಲೆಗೆ ಆಧರಿಸಿ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಇದು ಭರ್ಜರಿ ಪೈಪೋಟಿ ನೀಡಲಿದ್ದು, ಈ ತಿಂಗಳಾಂತ್ಯಕ್ಕೆ ಅಥವಾ ಮಾರ್ಚ್ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.

Article Published On: Saturday, February 6, 2021, 13:05 [IST]
English summary
Skoda Kushaq Mid Size SUV Will Offer 2 Engine And 3 Gearbox Options. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+