Just In
- 11 hrs ago
ಹೊಸ ಫೀಚರ್ಸ್ಗಳನ್ನು ಪಡೆಯಲಿದೆ ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ
- 13 hrs ago
ಫೋರ್ಡ್ ಮುಸ್ಟಾಂಗ್ ಕಾರಿನಂತೆ ಮಾಡಿಫೈಗೊಂಡ ಬಲೆನೊ ಸೆಡಾನ್ ಕಾರು
- 15 hrs ago
ವಾರದ ಸುದ್ದಿ: ಸಿಟ್ರನ್ ಕಾರು ಬಿಡುಗಡೆ, ಹೊಸ ವಾಹನ ಬೆಲೆ ಹೆಚ್ಚಳ, ಅಲ್ಕಾಜರ್ ಅನಾವರಣ, ಯುಗಾದಿ ಆಫರ್ ಘೋಷಣೆ!
- 1 day ago
ಎಕ್ಸ್ಯುವಿ700 ಎಸ್‌ಯುವಿ ಕಾರಿನ ಮತ್ತಷ್ಟು ಹೊಸ ಮಾಹಿತಿ ಹಂಚಿಕೊಂಡ ಮಹೀಂದ್ರಾ
Don't Miss!
- Sports
ಐಪಿಎಲ್ 2021: ಕೊಲ್ಕತ್ತಾ ವಿರುದ್ಧದ ಸೋಲಿಗೆ ಕಾರಣ ಹೇಳಿದ ಡೇವಿಡ್ ವಾರ್ನರ್
- News
ಕರ್ಫ್ಯೂ ನಡುವೆಯೂ ಮೋಜು ಮಸ್ತಿ! ಪಾರ್ಟಿ ಮಾಡುತ್ತಿದ್ದ ಗ್ಯಾಂಗ್ ಕಂಬಿ ಹಿಂದೆ..!
- Movies
ಸೋನು ಸೂದ್ಗೆ ವಿಶೇಷ ಗೌರವ ನೀಡಿದ ಪಂಜಾಬ್ ಸರ್ಕಾರ
- Finance
ಟಾಪ್ 10ರಲ್ಲಿ 4 ಕಂಪನಿಗಳ ಮೌಲ್ಯ 1.14 ಲಕ್ಷ ಕೋಟಿ ರುಗೇರಿಕೆ
- Lifestyle
ವಾರ ಭವಿಷ್ಯ:ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲಿ ಹೊಸ ಮಧ್ಯಮ ಗಾತ್ರದ ಸೆಡಾನ್ ಬಿಡುಗಡೆಗೆ ಸಿದ್ದವಾದ ಸ್ಕೋಡಾ
ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್ ಕಂಪನಿ ಜೊತೆಗೂಡಿ ಭಾರತದಲ್ಲಿ ಹಲವು ಹೊಸ ಯೋಜನೆಗಳನ್ನು ಆರಂಭಿಸಿದ್ದು, ಸಿ ಸೆಗ್ಮೆಂಟ್ ಸೆಡಾನ್ ಮತ್ತು ಬಿ ಸೆಗ್ಮೆಂಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಉತ್ಪನ್ನಗಳೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಸಿದ್ದತೆಯಲ್ಲಿದೆ.

ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ಉತ್ತಮ ಮಾರಾಟ ಸೌಲಭ್ಯ ಹೊಂದಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹೊಸ ಕಾರು ಉತ್ಪನ್ನಗಳೊಂದಿಗೆ ಪ್ರಬಲ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ. ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕುಶಾಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಸ್ಕೋಡಾ ಕಂಪನಿಯು ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಸ್ಥಗಿತಗೊಳಿಸಿ ರ‍್ಯಾಪಿಡ್‌ಗಿಂತಲೂ ಉತ್ತಮ ವಿನ್ಯಾಸದ ಮತ್ತೊಂದು ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಸ್ಕೋಡಾ ರ‍್ಯಾಪಿಡ್ ಮಾತ್ರವಲ್ಲದೆ ಫೋಕ್ಸ್‌ವ್ಯಾಗನ್ ವೆಂಟೊ ಕಾರು ಮಾದರಿಯು ಕೂಡಾ ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ವೆಂಟೊ ಸ್ಥಾನಕ್ಕೆ ಮತ್ತೊಂದು ಹೊಸ ವಿನ್ಯಾಸ ಮತ್ತು ಪವರ್‌ಫುಲ್ ಎಂಜಿನ್ ಆಯ್ಕೆ ಹೊಸ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಕಾರು ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಮಾರಾಟದಿಂದ ಸ್ಥಗಿತಗೊಳಿಸುವ ಬಗೆಗೆ ಈಗಾಗಲೇ ಮಾಹಿತಿ ಹಂಚಿಕೊಂಡಿರುವ ಸ್ಕೋಡಾ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ರ‍್ಯಾಪಿಡ್ ಸ್ಥಾನದಲ್ಲಿ ಸಂಪೂರ್ಣವಾಗಿ ಹೊಸ ಮಾದರಿಯೊಂದನ್ನು ಸಿದ್ದಪಡಿಸುತ್ತಿದೆ.

ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಳ್ಳುತ್ತಿರುವ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಹೊಸ ಸೆಡಾನ್ ಕಾರು ಮಾದರಿಯು ತಾಂತ್ರಿಕವಾಗಿ ಮತ್ತು ಎಂಜಿನ್ ಆಯ್ಕೆಯಲ್ಲಿ ಬಹುತೇಕ ಒಂದೇ ಆಗಿರಲಿದ್ದು, ವಿನ್ಯಾಸದಲ್ಲಿ ತುಸು ಬದಲಾವಣೆಯೊಂದಿಗೆ ತಮ್ಮದೇ ಆದ ಗ್ರಾಹಕ ವರ್ಗವನ್ನು ಸೆಳೆಯಲಿವೆ. ಹೊಸ ಸೆಡಾನ್ ಕಾರನ್ನು ಸ್ಕೋಡಾ ಕಂಪನಿಯು ಈಗಾಗಲೇ ಭಾರತದಲ್ಲಿ ಎಎನ್‌ಬಿ ಕೋಡ್ ನೆಮ್ ಮೂಲಕ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್‌ಗಿಂತಲೂ ಆಕರ್ಷಕ ವಿನ್ಯಾಸದೊಂದಿಗೆ ಲಾಂಗ್‌ವೀಲ್ಹ್ ಬೆಸ್ ಪಡೆದುಕೊಂಡಿದೆ.

ಹಾಗೆಯೇ ಹೊಸ ಕಾರಿನಲ್ಲಿ 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಜೋಡಣೆ ಮಾಡುವ ನೀರಿಕ್ಷೆಯಲ್ಲಿದ್ದು, ಹೊಸ ಎಂಜಿನ್ ಆಯ್ಕೆಯ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಯಾದ ಹೋಂಡಾ ಸಿಟಿ ಕಾರಿಗೆ ಭರ್ಜರಿ ಪೈಪೋಟಿ ನೀಡಲಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಸದ್ಯ ಮಾರುಕಟ್ಟೆಯಲ್ಲಿನ ರ‍್ಯಾಪಿಡ್ ಕಾರು ಸಿಂಗಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.29 ಲಕ್ಷ ಬೆಲೆ ಹೊಂದಿದ್ದು, ಹೊಸ ಸೆಡಾನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

ಪ್ರತಿಸ್ಪರ್ಧಿ ಹೋಂಡಾ ಸಿಟಿ ಕಾರು ಸದ್ಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.03 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.88 ಲಕ್ಷ ಬೆಲೆ ಹೊಂದಿದ್ದು, ಸಿಟಿ ಕಾರಿಗೆ ಪೈಪೋಟಿಯಾಗಿ ಸ್ಕೋಡಾ ಕಂಪನಿಯು ಹೊಸ ಕಾರನ್ನು ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಒಟ್ಟಿನಲ್ಲಿ ಹೊಸ ಸೆಡಾನ್ ಕಾರಿನೊಂದಿಗೆ ಹೋಂಡಾ ಸಿಟಿಗೆ ಪ್ರಬಲ ಪೈಪೋಟಿ ನೀಡಲು ನಿರ್ಧರಿಸಿರುವ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು ಸ್ಕೋಡಾ ಕಾರು ಮಾರಾಟ ಸಂಖ್ಯೆಯಲ್ಲಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಲಿವೆ.