Just In
- 11 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸಂಸ್ಕೃತದ ಹೆಸರಿಗೆ ಬಹುಪರಾಕ್ ಹೇಳಿದ ಸ್ಕೋಡಾ
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ವಿಷನ್ ಇನ್ ಕಾನ್ಸೆಪ್ಟ್ ಆಧರಿಸಿದ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಈ ಹೊಸ ಸ್ಕೋಡಾ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯ ಬಿಡುಗಡೆಗೊಳಿಸಲು ಸ್ಕೋಡಾ ಕಂಪನಿಯು ಸಜ್ಜಾಗುತ್ತಿದೆ.

ಈ ವಿಷನ್ ಇನ್ ಕಾನ್ಸೆಪ್ಟ್ ಕಾಂಪ್ಯಾಕ್ಟ್ ಅಧರಿಸಿದ ಎಸ್‍ಯುವಿಗೆ ಸ್ಕೋಡಾ ಅಂತಿಮವಾಗಿ ಹೆಸರನ್ನು ಬಹಿರಂಗಪಡಿಸಿದೆ. ಈ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯು ಸ್ಕೋಡಾ ಕುಶಾಕ್' ಎಂಬ ಹೆಸರನ್ನು ನೀಡಲಾಗಿದೆ. ಇದು ಪ್ರಾಚೀನ ಭಾರತೀಯ ಭಾಷೆಯಾದ ಸಂಸ್ಕೃತದಿಂದ ಬಂದಿದೆ ಎಂದು ಕಂಪನಿ ಹೇಳುತ್ತದೆ. ಕುಶಾಕ್ ಎಂಬ ಪದವು ರಾಜ ಅಥವಾ ಚಕ್ರವರ್ತಿ ಎಂಬ ಅರ್ಥವನ್ನು ಹೊಂದಿದೆ.

ಜಾಗತಿಕವಾಗಿ ಸ್ಕೋಡಾ ಹೆಸರು ಕೆ ಅಕ್ಷರದಿಂದ ಪ್ರಾರಂಭಿಸಿ ಕ್ಯೂ ಅಕ್ಷರದೊಂದಿಗೆ ಕೊನೆಗೊಳ್ಳವಂತಿರುತ್ತದೆ. ಕುತೂಹಲಕಾರಿಯಾಗಿ ಕಂಪನಿಯು ಅಂತರರಾಷ್ಟ್ರೀಯ ಮಾರುಕಟ್ತೆಯಲ್ಲಿ ಕೊನಾರ್ಕ್, ಕ್ಲಿಕ್, ಕಾರ್ಮಿಕ್, ಮತ್ತು ಕೊಸ್ಮಿಕ್ ಎಂಬ ಹೆಸರುಗಳಿಗೆ ಟ್ರೇಡ್‌ಮಾರ್ಕ್ ಅನ್ನು ಸಹ ಸಲ್ಲಿಸಿತು.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಸ್ಕೋಡಾ ಇಂಡಿಯಾ ವಿಡಬ್ಲ್ಯೂ ಎಂಕ್ಯೂಬಿ ಎಒ ಇನ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿ ಈ ಹೊಸ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಅಭಿವೃದ್ದಿಪಡಿಸಿದೆ. ಈ ಕಾಂಪ್ಯಾಕ್ಟ್ ಎಸ್‍ಯುವಿಯು ತನ್ನ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍ಯುವಿಯ ಮಾದರಿಯಲ್ಲಿದೆ.

ಹೊಸ ಸ್ಕೊಡಾ ಕುಶಾಕ್ ಕಾಂಪ್ಯಾಕ್ಟ್ ಎಸ್‍ಯುವಿಯ ಮುಂಭಾಗ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಬಂಪರ್ ಅನ್ನು ಹೊಂದಿದೆ. ಇನ್ನು ಮುಂಭಾಗದ ಡ್ಯುಯಲ್ ಹೆಡ್‍ಲ್ಯಾಂಪ್, ಏರ್ ಇನ್‍ಟೆಕ್ ಮತ್ತು ಬಂಪರ್‍ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍ಯುವಿಯ ಎರಡು ಬದಿಗಳು ಮತ್ತು ಹಿಂಭಾಗ ಪೊಫೈಲ್ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಈ ಎಸ್‍ಯುವಿಯ ಸೈಡ್ ಪ್ರೊಫೈಲ್‍ನಲ್ಲಿ ಶಾರ್ಪ್ ಲೈನ್‍ಗಳಿವೆ. ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೇಲ್‍ಲೈಟ್‍ಗಳು ಮತ್ತು ರೂಫ್ ಮೌಂಟಡ್ ಸ್ಪಾಯ್ಲರ್ ಎಸ್‍ಯುವಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.

ಇನ್ನು ಇದರ ಇಂಟಿರಿಯರ್ ಆಕರ್ಷಕವಾಗಿದೆ. ಇನ್ನೂ ಇಂಟಿರಿಯರ್‍ನಲ್ಲಿ ಮಲ್ಟಿ ಲೇಯರ್ಡ್ ಡ್ಯಾಶ್‍ಬೋರ್ಡ್ ಮತ್ತು ಅನೇಕ ಬಣ್ಣಗಳನ್ನು ಹೊಂದಿರುವ ಡ್ಯಾಶ್‍ಬೋರ್ಡ್‍ಗಳಿವೆ. ಸ್ಕೋಡಾ ಕಾನ್ಸೆಪ್ಟ್ ಇಂಟಿರಿಯರ್ ಸ್ಪೋರ್ಟಿ ಥೀಮ್ ಅನ್ನು ಹೊಂದಿದೆ. ಈ ಎಸ್‍ಯುವಿಯಲ್ಲಿ ಚಾಲಕನ ಸೀಟ್ ಸ್ವಲ್ಪ ಎತ್ತರವನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇಂಟಿರಿಯರ್‍ಲ್ಲಿ ಸೆಂಟರ್ ಕನ್ಸೋಲ್, ಫ್ಲಾಟ್ ಬಾಟಮ್ ಸ್ಟೀಯರಿಂಗ್ ವ್ಹೀಲ್ ಮತ್ತು ದೊಡ್ಡ 12 ಇಂಚಿನ ಟಚ್‍ಸ್ಕ್ರೀನ್ ಡಿಸ್‍ಪ್ಲೇಯನ್ನು ಅಳವಡಿಸಲಾಗಿದೆ. ವರ್ಚುವಲ್ ಕಾಕ್‍ಪಿಟ್, ಕಾನ್ಫಿಗರ್ ಮಾಡಬಹುದಾದ ಟಿಎಫ್‍ಟಿ ಇನ್ಸ್ ಟ್ರೂಮೆಂಟ್ ಪ್ಯಾನೆಲ್ ಅನ್ನು ಹೊಂದಿದೆ.

ಈ ಕಾಂಪ್ಯಾಕ್ಟ್ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಈ ಸ್ಕೋಡಾ ಕುಶಾಕ್ ಕಾಂಪ್ಯಾಕ್ಟ್ ಎಸ್‍ಯುವಿಯು ಈ ವರ್ಷದ ಮಧ್ಯಾಂತರ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊಸ ಕುಶಾಕ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ನೇರ ಪೈಪೋಟಿಯನ್ನು ನೀಡಲಿದೆ.