ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆ ಪರಿಚಯಿಸಿದ ಸ್ಕೋಡಾ

ಸೆಡಾನ್ ಕಾರು ಮಾದರಿಯಾದ ರ‍್ಯಾಪಿಡ್ ಆವೃತ್ತಿಯ ಪ್ರಮುಖ ವೆರಿಯೆಂಟ್‍ಗಳಲ್ಲಿ ಸ್ಕೋಡಾ ಕಂಪನಿಯು ಹಲವು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಹೊಸ ತಾಂತ್ರಿಕ ಅಂಶಗಳ ಜೋಡಣೆ ಹೊರತಾಗಿ ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ತಂದಿಲ್ಲ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ರ‍್ಯಾಪಿಡ್ ಸೆಡಾನ್ ಮಾದರಿಯನ್ನು ಸದ್ಯ ಹೊಸ ಎಮಿಷನ್‌ ನಿಯಮಾನುಸಾರವಾಗಿ ಮಾರಾಟ ಮಾಡಲಾಗುತ್ತಿದ್ದು, ಹೊಸ ಕಾರು ರೈಡರ್, ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳನ್ನು ಹೊಂದಿದೆ. ಸ್ಕೋಡಾ ಕಂಪನಿಯು ಗ್ರಾಹಕರ ಬೇಡಿಕೆ ಆಧಾರ ಮೇಲೆ ಕಳೆದ ತಿಂಗಳು ಆರಂಭಿಕ ಮಾದರಿಯಾದ ರೈಡರ್ ಆವೃತ್ತಿಯ ಮಾರಾಟವನ್ನು ಪುನಾರಂಭಿಸಲಾಗಿದ್ದು, ಜೊತೆಗೆ ಮಾಂಟೆ ಕಾರ್ಲೊ, ಆನೆಕ್ಸ್ ಮಾದರಿಗಳಲ್ಲಿ ಕೆಲವು ಹೊಸ ಬದಲಾವಣೆ ಪರಿಚಯಿಸಲಾಗಿದೆ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಮಾಂಟೆ ಕಾರ್ಲೊ, ಆನೆಕ್ಸ್ ಮಾದರಿಗಳು ರ‍್ಯಾಪಿಡ್ ಕಾರಿನ ಟಾಪ್ ಮಾದರಿಗಳಾಗಿದ್ದು, ಹೊಸ ಆವೃತ್ತಿಗಳಲ್ಲಿ ಗ್ರಾಹಕರ ಬೇಡಿಕೆ ಕೆಲವು ಪ್ರಮುಖ ತಾಂತ್ರಿಕ ಅಂಗಳನ್ನು ಉನ್ನತೀಕರಿಸಲಾಗಿದೆ. ಉನ್ನತೀಕರಿಸಲಾದ ಮಾದರಿಗಳಲ್ಲಿ ಹೊಸದಾಗಿ ಸಿಲ್ವರ್ ಕೊಟಿಂಗ್ ಹೊಂದಿರುವ ಸೈಡ್ ಸ್ಪಾಯ್ಲರ್, ರಿಯರ್ ಸ್ಪಾಯ್ಲರ್ ಜೊತೆ ಡಿಸ್‌ಫ್ಯೂಸರ್, ಗ್ಲಾಸ್ ಬ್ಲ್ಯಾಕ್ ಹೊಂದಿರುವ ರಿಯರ್ ವ್ಯೂ ಮಿರರ್ ಜೋಡಿಲಾಗಿದೆ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಹಾಗೆಯೇ ಉನ್ನತೀಕರಿಸಲಾದ ಮಾದರಿಗಳಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಅಲಾಯ್ ವೀಲ್ಹ್, ಗ್ರಿಲ್ ಸುತ್ತಲು ಕ್ರೊಮ್, ಫ್ರಂಟ್ ಲಿಪ್ ಸ್ಪಾಯ್ಲರ್ ಜೊತೆಗೆ ಕಾರಿನ ಒಳಭಾಗದಲ್ಲಿ ಬ್ಲ್ಯಾಕ್ ಅಂಡ್ ಸಿಲ್ವರ್ ಬಣ್ಣದ ಆಸನಗಳನ್ನು ಜೋಡಿಸಲಾಗಿದ್ದು, ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಸ್ಕೋಡಾ ರ‍್ಯಾಪಿಡ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.79 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯ ಬೆಲೆಯ ರೂ. 13.29 ಲಕ್ಷಕ್ಕೆ ಮಾರಾಟಗೊಳ್ಳುತ್ತಿದ್ದು, ತಾಂತ್ರಿಕ ಅಂಶಗಳ ಬದಲಾವಣೆ ನಂತರವೂ ಮಾಂಟೆ ಕಾರ್ಲೊ, ಆನೆಕ್ಸ್ ವೆರಿಯೆಂಟ್‌ಗಳ ಬೆಲೆಯಲ್ಲಿ ಕಂಪನಿಯು ಯಾವುದೇ ಬದಲಾವಣೆ ಮಾಡಿಲ್ಲ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಇನ್ನು ಬಿಎಸ್-6 ಎಮಿಷನ್‌ನಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಹೊಸದಾಗಿ ಪರಿಚಯಿಸಿರುವ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

1.0-ಲೀಟರ್(999 ಸಿಸಿ) ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು 16.24 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರ‍್ಯಾಪಿಡ್ ಸೆಡಾನ್ ಮಾದರಿಯ ಪ್ರಮುಖ ವೆರಿಯೆಂಟ್‌ಗಳಲ್ಲಿ ಹೊಸ ಬದಲಾವಣೆಗಳನ್ನು ಪರಿಚಯಿಸಿದ ಸ್ಕೋಡಾ

ಕೆಲವು ಮಾಹಿತಿಗಳ ಪ್ರಕಾರ ಈ ವರ್ಷಾಂತ್ಯದವರೆಗೆ ಮಾತ್ರವೇ ಖರೀದಿಗೆ ಲಭ್ಯವಿರಲಿರುವ ರ‍್ಯಾಪಿಡ್ ಕಾರು ಸ್ಕೋಡಾ ಕಂಪನಿಯ ಹೊಸ ಸೆಡಾನ್ ಬಿಡುಗಡೆ ನಂತರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ. ಹೊಸ ಸೆಡಾನ್ ಮಾದರಿಯಾಗಿ ಈಗಾಗಲೇ ಸಿದ್ದತೆ ನಡೆಸಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು 2022ರ ಆರಂಭದಲ್ಲಿ ಬಿಡುಗಡೆ ಮಾಡಬಹುದಾಗಿದ್ದು, ಹೊಸ ಸೆಡಾನ್ ಕಾರು ರ‍್ಯಾಪಿಡ್ ಕಾರಿಗಿಂತಲೂ ಹೆಚ್ಚು ಬಲಿಷ್ಠವಾದ ಎಂಜಿನ್ ಆಯ್ಕೆ ಮತ್ತು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Rapid Monte Carlo & Onyx Variants Get Minor Cosmetic Updates. Read in Kannada.
Story first published: Thursday, April 22, 2021, 15:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X