Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸುಧಾರಿತ ಬ್ಯಾಟರಿ ಪ್ಯಾಕ್ ಹೊಂದಿರುವ ಎನ್ಯಾಕ್ ಸ್ಪೋರ್ಟ್‌ಲೈನ್ ಇವಿ ಅನಾವರಣಗೊಳಿಸಿದ ಸ್ಕೋಡಾ
ಜೆಕ್ ಕಾರು ಉತ್ಪಾದನಾ ಕಂಪನಿಯಾಗಿರುವ ಸ್ಕೋಡಾ ತನ್ನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿದೆ.

ಯುರೋಪ್ ಮಾರುಕಟ್ಟೆಗಾಗಿ ಈಗಾಗಲೇ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯ ಬಿಡುಗಡೆಯ ಕುರಿತಂತೆ ನೆಮ್ ಪ್ಲೇಟ್ ಟೀಸರ್ ಒಂದನ್ನು ಬಿಡುಗಡೆ ಮಾಡಿರುವ ಸ್ಕೋಡಾ ಕಂಪನಿಯು ಇದೀಗ ಉತ್ಪಾದನಾ ಆವೃತ್ತಿಯನ್ನು ಅನಾವರಣಗೊಳಿಸಿದೆ. ಸ್ಕೋಡಾ ಹೊಸ ಇವಿ ಕಾರು ಎನ್ಯಾಕ್(ENYAQ) ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಲಾಂಗ್ ವೀಲ್ಹ್ ಬೆಸ್‌ನೊಂದಿಗೆ ಹೊಸ ಕ್ರಾಸ್ ಓವರ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಜಾಗತಿಕ ಮಾರುಕಟ್ಟೆಗಳಲ್ಲಿ ಬಿಡುಗಡೆಗೊಳ್ಳಲಿದೆ

ಮಾಹಿತಿಗಳ ಪ್ರಕಾರ, ಹೊಸ ಎನ್ಯಾಕ್ ಕಾರು ಮುಂಬರುವ ಮಾರ್ಚ್ ವೇಳೆಗೆ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಗೊಳ್ಳಲಿದ್ದು, ಭಾರತದಲ್ಲಿ ಈ ಹೊಸ ಕಾರು 2022ರ ವೇಳೆಗೆ ಬಿಡುಗಡೆಗೊಳ್ಳುವ ನೀರಿಕ್ಷೆಯಿದೆ.

ಆಧುನಿಕ ತಂತ್ರಜ್ಞಾನ ಪ್ರೇರಿತ ಹಲವು ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಎನ್ಯಾಕ್ ಎಸ್‌ಯುವಿ ಕಾರು ಡೈನಾಮಿಕ್ ಡಿಸೈನ್‌ನೊಂದಿಗೆ ಅಭಿವೃದ್ದಿಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಬ್ಯಾಟರಿ ಪ್ಯಾಕ್‌ನೊಂದಿಗೆ ಅತ್ಯುತ್ತಮ ಮೈಲೇಜ್ ಪ್ರೇರಣೆ ಹೊಂದಿದೆ.

ಎಸ್‌ಯುವಿ ಕಾರುಗಳಲ್ಲೇ ಹೊಸ ಮಾದರಿಯ ವಿನ್ಯಾಸ ಹೊಂದಿರುವ ಎನ್ಯಾಕ್ ಕಾರು 4,648-ಎಂಎಂ ಉದ್ದ, 1,877-ಎಂಎಂ ಅಗಲ, 1,618-ಎಂಎಂ ಎತ್ತರದೊಂದಿಗೆ ಉತ್ತಮ ಒಳಾಂಗಣ ವಿನ್ಯಾಸ ಹೊಂದಿದ್ದು, ಹೊಸ ಕಾರು ಬ್ಯಾಟರಿ ಪ್ಯಾಕ್‌ಗೆ ಅನುಗುಣವಾಗಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದೆ.

ಎನ್ಯಾಕ್ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 60 ಐವಿ, 80 ಐವಿ, 80ಎಕ್ಸ್ ಐವಿ ಮತ್ತು ಸ್ಪೋರ್ಟ್‌ಲೈನ್ ವೆರಿಯೆಂಟ್‌ಗಳಲ್ಲಿ ಬಿಡುಗಡೆಗೊಳ್ಳಲಿದ್ದು, 60ಐವಿ ಕಾರಿನಲ್ಲಿ 62kWh, 80 ಐವಿ ಕಾರಿನಲ್ಲಿ 82kWh 80ಎಕ್ಸ್ ಐವಿ(ಆಲ್ ವೀಲ್ಹ್ ಡ್ರೈವ್) ಕಾರಿನಲ್ಲಿ 82kWh ಮತ್ತು ಹೈ ಎಂಡ್ ಮಾದರಿಯಾದ ಸ್ಪೋರ್ಟ್‌ಲೈನ್‌ನಲ್ಲಿ 82kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ.
MOST READ: ಮುಖೇಶ್ ಅಂಬಾನಿ ಭದ್ರತೆಗಾಗಿಯೇ ಬಂತು ಮೂರು ಕೋಟಿ ಬೆಲೆಯ ಕಾರು

ಹೊಸ ಎಲೆಕ್ಟ್ರಿಕ್ ಕಾರು ಪ್ರತಿ ಚಾರ್ಜ್‌ಗೆ ಆರಂಭಿಕ ಆವೃತ್ತಿಯಾದ 60 ಐವಿ ಮಾದರಯು 389ಕಿ.ಮೀ, ಮಧ್ಯಮ ಕ್ರಮಾಂಕದ ಕಾರು ಮಾದರಿಗಳಾದ 80 ಐವಿ 509 ಕಿ.ಮೀ ಮತ್ತು 80ಎಕ್ಸ್ ಐವಿ ಮಾದರಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 459ಕಿ.ಮೀ ಮೈಲೇಜ್ ನೀಡುತ್ತವೆ.

ಹೈ ಎಂಡ್ ಮಾದರಿಯಲ್ಲಿ ಸ್ಪೋರ್ಟ್‌ಲೈನ್ ಮಾದರಿಯು ಉಳಿದ ಮೂರು ಮಾದರಿಗಿಂತಲೂ ವಿಭಿನ್ನವಾದ ವಿನ್ಯಾಸ ಮತ್ತು ಹೆಚ್ಚುವರಿ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಚಾರ್ಚ್‌ಗೆ 500 ಕಿ.ಮೀ ಅಧಿಕ ಮೈಲೇಜ್ ಹಿಂದಿರುಗಿಸಲಿದ್ದು, ಮೊದಲ ಮೂರು ಮಾದರಿಗಳಿಂತಲೂ ಹೈ ಎಂಡ್ ಮಾದರಿಯು ಹೆಚ್ಚಿನ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸ್ಪೋರ್ಟ್‌ಲೈನ್ ರೂಪಾಂತರವನ್ನು ವಿಶೇಷವಾಗಿ ಅಧಿಕ ಮಟ್ಟದ ಪ್ರೀಮಿಯಂ ಫೀಚರ್ಸ್, ಉತ್ತಮ ಪರ್ಫಾಮೆನ್ಸ್ ಜೊತೆಗೆ ಹೆಚ್ಚಿನ ಮಟ್ಟದ ಮೈಲೇಜ್‌ಗಾಗಿ ಅಭಿವೃದ್ದಿಗೊಳಿಸಲಾಗಿದ್ದು, ಹೊಸ ಕಾರು ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾಗಲಿದೆ.