ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಸ್ಕೋಡಾ ತನ್ನ ಬಹುನಿರೀಕ್ಷಿತ 2021ರ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಮಹಾರಾಷ್ಟ್ರದ ರಂಗಾಬಾದ್‌ನಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಈ ಸ್ಕೋಡಾ ಕಂಪನಿಯು ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಮೊದಲ ಬಾರಿಗೆ 2016ರಲ್ಲಿ ಪರಿಚಯಿಸಲಾಯಿತು ಮತ್ತು ಕಳೆದ 5 ವರ್ಷಗಳಲ್ಲಿ ಪ್ರಪಂಚದಾದ್ಯಂತ 6 ಲಕ್ಷಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟ ಮಾಡಲಾಗಿತ್ತು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಆಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ. ಈ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರಲ್ಲಿ ಪರಿಷ್ಕೃತ ಗ್ರಿಲ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಇದು ಹೆಚ್ಚು ನೇರವಾದ ಪ್ರೊಫೈಲ್ ನೀಡುತ್ತದೆ. ಗ್ರಿಲ್ ಅನ್ನು ಸ್ಲಿಮ್ಮರ್ ಹೆಡ್‌ಲ್ಯಾಂಪ್ ಯುನಿಟ್ ನಿಂದ ಸುತ್ತುವರಿಯಲಾಗುತ್ತದೆ. ಈ ಯುನಿಟ್ ಅಡಿಯಲ್ಲಿ ಪ್ರತ್ಯೇಕ ಎಲ್ಇಡಿ ಮಾಡ್ಯೂಲ್ ಇದೆ.ಇದರ ಹೊಸ ಹೆಡ್‌ಲ್ಯಾಂಪ್ ಸೆಟಪ್ ಹೊಸ ಫೋರ್-ಹೈಡ್ ಲುಕ್ ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಸ್‍ಯುವಿ ಕ್ರಿಸ್ಟಲ್ ಎಫೆಕ್ಟ್ ಹೊಂದಿರುವ ಎಲ್ಇಡಿ ಟೈಲ್-ಲ್ಯಾಂಪ್ ಗಳನ್ನು ಕೂಡ ಪಡೆಯುತ್ತದೆ. ಈ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಕೊಡಿಯಾಕ್ ಎಸ್‍ಯುವಿಯಲ್ಲಿ 20 ಇಂಚಿನ ಹೊಸ ಅಲಾಯ್ ವ್ಹೀಲ್ ಗಳನ್ನು ಪಡೆಯುತ್ತದೆ. ಗ್ಲೋಸ್ ಬ್ಲ್ಯಾಕ್‌ನಲ್ಲಿ ಹೊಸ ರೇರ್ ಸ್ಪಾಯ್ಲರ್ ಅನ್ನು ಸಹ ಪಡೆಯುತ್ತದೆ, ಇದು ಬ್ರೇಕ್ ಲೈಟ್‌ಗಳೊಂದಿಗೆ ಸಂಯೋಜಿಸಲ್ಪಟ್ಟಿದೆ. ಈ ಹೊಸ ಮಾದರಿಯ ಕ್ಯಾಬಿನ್ ಒಳಗೆ ಹೊಸ ಅಲಂಕಾರಿಕ ಸ್ಟ್ರೀಪ್ ಗಳನ್ನು ಪಡೆಯುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಇದರ ಡ್ಯಾಶ್‌ಬೋರ್ಡ್ ಮತ್ತು ಡೋರ್ ಪ್ಯಾನೆಲ್‌ಗಳಲ್ಲಿ ಸ್ಟ್ರೀಚಿಂಗ್ ಅನ್ನು ಕೂಡ ಪಡೆಯುತ್ತದೆ. ಕೊಡಿಯಾಕ್ ಮಾದರಿಯು 7-ಸೀಟರ್ ಮಾದರಿಯಾಗಿದ್ದು, ಇದರಲ್ಲಿ ವೆಂಟಿಲೆಟಡ್ ಸೀಟುಗಳು ಸೇರಿದಂತೆ ಮಸಾಜ್ ಫಂಕ್ಷನ್ ಅನ್ನು ಹೊಂದಿರಲಿದೆ. ಇದು ದೂರ ಪ್ರಯಾಣಗಳಲ್ಲಿ ಹೆಚ್ಚು ಸಹಕಾರಿಯಾಗುವ ಕೂಲ್ ಫೀಚರ್ ಎಂದು ಹೇಳಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಮೊದಲ ಬಾರಿಗೆ ಕೊಡಿಯಾಕ್ ಎಸ್‍ಯುವಿಯು ಮಲ್ಟಿ-ವೇ ಎಲೆಕ್ಟ್ರಿಕ್ ಸೀಟ್ ಹೊಂದಾಣಿಕೆಯ ಜೊತೆ ಮಸಾಜ್ ಫಂಕ್ಷನ್ ಪಡೆದುಕೊಂಡಿದೆ. ಕ್ಯಾಂಟನ್ ಸೌಂಡ್ ಸಿಸ್ಟಂ ಮತ್ತು ಈಗ ಹತ್ತು ಸ್ಪೀಕರ್‌ಗಳನ್ನು ನೀಡುತ್ತದೆ. ಈ ಮಾದರಿಯಲ್ಲಿ ವರ್ಚುವಲ್ ಕಾಕ್‌ಪಿಟ್‌ನಲ್ಲಿ 10.25-ಇಂಚಿನ ಡಿಸ್ ಪ್ಲೇಯನ್ನು ಕೂಡ ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಟಾಪ್-ಆಫ್-ಲೈನ್ ಸ್ಕೋಡಾ ಕೊಡಿಯಾಕ್ ಆರ್‌ಎಸ್ ರೂಪಾಂತರದಲ್ಲಿ ಹೊಸ 2.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ.ಈ ಎಂಜಿನ್ 188 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಎಂಜಿನ್ ನೊಂದಿಗೆ 7 ಸ್ಪೀಡ್ ಡಿಎಸ್‌ಜಿಗೇರ್ ಬಾಕ್ಸ್ ಅನ್ನು ಜೋಡಿಸಬಹುದು. ಇತರ ಎಂಜಿನ್ ಆಯ್ಕೆಗಳನ್ನು ಕೂಡ ನೀಡುವ ಸಾಧ್ಯತೆಗಳಿದೆ.ಒಟ್ಟಿನಲ್ಲಿ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಬರುತ್ತಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

Article Published On: Wednesday, July 28, 2021, 17:27 [IST]
English summary
Skoda Kodiaq Facelift Spied. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+