Just In
- 14 min ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 31 min ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 1 hr ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 1 hr ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Movies Shrirasthu Shubhamasthu:ದೀಪಿಕಾಗೆ ಉತ್ತರ ಕೊಡೋಕೆ ಆಗ್ತಿಲ್ಲ; ಇತ್ತ ಹೆಂಡತಿಗೆ ಸಮಾಧಾನ ಮಾಡೋಕೆ ಆಗ್ತಿಲ್ಲ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಾವರಣವಾಯ್ತು ಬಹುನಿರೀಕ್ಷಿತ 2021ರ ಸ್ಕೋಡಾ ಕೊಡಿಯಾಕ್ ಫೇಸ್ಲಿಫ್ಟ್ ಎಸ್ಯುವಿ
ಸ್ಕೋಡಾ ಕಂಪನಿಯು ಜಾಗತಿಕ ಮಾರುಕಟ್ಟೆಗಳಲ್ಲಿ ತನ್ನ 2021ರ ಕೊಡಿಯಾಕ್ ಫೇಸ್ಲಿಫ್ಟ್ ಎಸ್ಯುವಿಯನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. 2021ರ ಸ್ಕೋಡಾ ಕೊಡಿಯಾಕ್ ಫೇಸ್ಲಿಫ್ಟ್ ಎಸ್ಯುವಿಯು ಹಲವಾರು ಕಾಸ್ಮೆಟಿಕ್ ವಿನ್ಯಾಸ ಬದಲಾವಣೆಗಳನ್ನು ಪಡೆದುಕೊಂಡಿದೆ.
ಸ್ಕೋಡಾ ಕಂಪನಿಯು ಫೇಸ್ಲಿಫ್ಟ್ ಎಸ್ಯುವಿಯನ್ನು ಮೊದಲ ಬಾರಿಗೆ 2016ರಲ್ಲಿ ಪರಿಚಯಿಸಲಾಯಿತು ಮತ್ತು ಕಳೆದ 5 ವರ್ಷಗಳಲ್ಲಿ ಪ್ರಪಂಚದಾದ್ಯಂತ 6 ಲಕ್ಷಕ್ಕೂ ಹೆಚ್ಚು ಯುನಿಟ್ ಗಳನ್ನು ಮಾರಾಟ ಮಾಡಲಾಗಿದೆ. ಇನ್ನು ಅನಾವರಣಗೊಂಡ ಹೊಸ ಕೊಡಿಯಾಕ್ ಫೇಸ್ಲಿಫ್ಟ್ ಎಸ್ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದರಲ್ಲಿ ಪರಿಷ್ಕೃತ ಗ್ರಿಲ್ ಅನ್ನು ಹೊಂದಿದೆ. ಇದು ಹೆಚ್ಚು ನೇರವಾದ ಪ್ರೊಫೈಲ್ ನೀಡುತ್ತದೆ. ಗ್ರಿಲ್ ಅನ್ನು ಸ್ಲಿಮ್ಮರ್ ಹೆಡ್ಲ್ಯಾಂಪ್ ಯುನಿಟ್ ನಿಂದ ಸುತ್ತುವರಿಯಲಾಗುತ್ತದೆ.
ಈ ಯುನಿಟ್ ಅಡಿಯಲ್ಲಿ ಪ್ರತ್ಯೇಕ ಎಲ್ಇಡಿ ಮಾಡ್ಯೂಲ್ ಇದೆ. ಹೊಸ ಹೆಡ್ಲ್ಯಾಂಪ್ ಸೆಟಪ್ ಹೊಸ ಫೋರ್-ಹೈಡ್ ಲುಕ್ ಅನ್ನು ಹೊಂದಿದೆ. ಈ ಎಸ್ಯುವಿ ಕ್ರಿಸ್ಟಲ್ ಎಫೆಕ್ಟ್ ಹೊಂದಿರುವ ಎಲ್ಇಡಿ ಟೈಲ್-ಲ್ಯಾಂಪ್ ಗಳನ್ನು ಕೂಡ ಪಡೆಯುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಈ ಹೊಸ ಕೊಡಿಯಾಕ್ ಫೇಸ್ಲಿಫ್ಟ್ ಎಸ್ಯುವಿಯು ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ರೂಪಾಂತರಗಳಲ್ಲ ಬಿಡುಗಡೆಯಾಗಲಿದೆ. ಇದು ಸ್ಪೋರ್ಟ್ ಅಲ್ಯೂಮಿನಿಯಂ-ಎಫೆಕ್ಟ್ ಮುಂಭಾಗ ಮತ್ತು ಹಿಂಭಾಗದ ಏಪ್ರನ್ನಲ್ಲಿ ಟ್ರಿಮ್ ಮಾಡುತ್ತದೆ.
ಹೊಸ ಈ ಎಸ್ಯುವಿಯಲ್ಲಿ 20 ಇಂಚಿನ ಹೊಸ ಅಲಾಯ್ ವ್ಹೀಲ್ ಗಳನ್ನು ಪಡೆಯುತ್ತದೆ. ಈ ಎಸ್ಯುವಿ ಗ್ಲೋಸ್ ಬ್ಲ್ಯಾಕ್ನಲ್ಲಿ ಹೊಸ ರಿಯರ್ ಸ್ಪಾಯ್ಲರ್ ಅನ್ನು ಸಹ ಪಡೆಯುತ್ತದೆ, ಇದು ಬ್ರೇಕ್ ಲೈಟ್ಗಳೊಂದಿಗೆ ಸಂಯೋಜಿಸಲ್ಪಟ್ಟಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300
2021ರ ಕೊಡಿಯಾಕ್ ಮಾದರಿಯ ಕ್ಯಾಬಿನ್ ಒಳಗೆ ಹೊಸ ಅಲಂಕಾರಿಕ ಸ್ಟ್ರೀಪ್ ಗಳನ್ನು ಪಡೆಯುತ್ತದೆ. ಇನ್ನು ಡ್ಯಾಶ್ಬೋರ್ಡ್ ಮತ್ತು ಡೋರ್ ಪ್ಯಾನೆಲ್ಗಳಲ್ಲಿ ಸ್ಟ್ರೀಚಿಂಗ್ ಅನ್ನು ಕೂಡ ಪಡೆಯುತ್ತದೆ. ಕೊಡಿಯಾಕ್ ಮಾದರಿಯು 7-ಸೀಟರ್ ಮಾದರಿಯಾಗಿದೆ.
ಇದರಲ್ಲಿ ವೆಂಟಿಲೆಟಡ್ ಸೀಟುಗಳು ಸೇರಿದಂತೆ ಮಸಾಜ್ ಫಂಕ್ಷನ್ ಅನ್ನು ಹೊಂದಿದೆ. ಇದು ದೂರ ಪ್ರಯಾಣ ಮಾಡುವಾಗ ಹೆಚ್ಚು ಸಹಕಾರಿಯಾಗುವ ಕೂಲ್ ಫೀಚರ್ ಇದಾಗಿದೆ. ಮೊದಲ ಬಾರಿಗೆ ಹೊಸ ಕೊಡಿಯಾಕ್ ಮಲ್ಟಿ-ವೇ ಎಲೆಕ್ಟ್ರಿಕ್ ಸೀಟ್ ಹೊಂದಾಣಿಕೆಯ ಜೊತೆ ಮಸಾಜ್ ಫಂಕ್ಷನ್ ಪಡೆದುಕೊಂಡಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
ಕ್ಯಾಂಟನ್ ಸೌಂಡ್ ಸಿಸ್ಟಂ ಮತ್ತು ಈಗ ಹತ್ತು ಸ್ಪೀಕರ್ಗಳನ್ನು ನೀಡುತ್ತದೆ. ಈ ಎಸ್ಯುವಿಯಲ್ಲಿ ವರ್ಚುವಲ್ ಕಾಕ್ಪಿಟ್ನಲ್ಲಿ 10.25-ಇಂಚಿನ ಡಿಸ್ ಪ್ಲೇ ಮತ್ತು ಇದು ನಾಲ್ಕು ವಿಭಿನ್ನ ವಿನ್ಯಾಸಗಳಿವೆ. ವಿದೇಶದಲ್ಲಿ ಕೊಡಿಯಾಕ್ ಆರ್ಎಸ್ ಮತ್ತು ಕೊಡಿಯಾಕ್ ಸ್ಪೋರ್ಟ್ಲೈನ್ ಎಂಬ ಮಾದರಿಗಳಲ್ಲಿ ಲಭ್ಯವಿರುತ್ತದೆ.
ಟಾಪ್-ಆಫ್-ಲೈನ್ ಸ್ಕೋಡಾ ಕೊಡಿಯಾಕ್ ಆರ್ಎಸ್ ರೂಪಾಂತರದಲ್ಲಿ ಹೊಸ 2.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 245 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಇದು ಹಿಂದಿನ ಬಿಟುರ್ಬೊ ಡೀಸೆಲ್ ಎಂಜಿನ್ ಗಿಂತ 5 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಟಿಡಿಐ ಎಂಜಿನ್ ಗಿಂತ 60 ಕೆಜಿಗಿಂತ ಹೆಚ್ಚು ಹಗುರವಾಗಿದೆ.
ಇನ್ನು ಇತರ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳು ಕೂಡ ಲಭ್ಯವಿದೆ. ಇದರಲ್ಲಿ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ, ಇನ್ನು 2.0-ಲೀಟರ್ ಟಿಎಸ್ಐ ಎಂಜಿನ್ ಅನ್ನು ಕೂಡ ಹೊಂದಿದೆ.
ಭಾರತದಲ್ಲಿ ಬಿಡುಗಡೆಯಾಗಲಿರುವ ಕೊಡಿಯಾಕ್ ಎಸ್ಯುವಿಯಲ್ಲಿ 2.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 190 ಬಿಹೆಚ್ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 7-ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಹೊಂದಿರುತ್ತದೆ.
ಈ ಎಸ್ಯುವಿಯು ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಕೂಡ ಹೊಂದಿರಲಿದೆ. ಈ ಹೊಸ ಸ್ಕೋಡಾ ಕೊಡಿಯಾಕ್ ಫೇಸ್ಲಿಫ್ಟ್ ಎಸ್ಯುವಿಯು ಭಾರತದಲ್ಲಿ ಇದೇ ವರ್ಷದಲ್ಲಿ ಬಿಡುಗಡೆಯಾಗಲಿದೆ. ಈ ಮಾದರಿಯು ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್ಯುವಿಗಳಲ್ಲಿ ಒಂದಾಗಿದೆ.