ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಸ್ಕೋಡಾ ಇಂಡಿಯು ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹಲವು ಹೊಸ ಯೋಜನೆಗಳನ್ನು ಆರಂಭಿಸಿದ್ದು, ಸಿ ಸೆಗ್ಮೆಂಟ್ ಸೆಡಾನ್ ಮತ್ತು ಬಿ ಸೆಗ್ಮೆಂಟ್ ಎಸ್‌ಯುವಿ ವಿಭಾಗದಲ್ಲಿ ಹೊಸ ಉತ್ಪನ್ನಗಳೊಂದಿಗೆ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಸಿದ್ದತೆಯಲ್ಲಿದೆ.

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ವಿವಿಧ ಕಾರು ಮಾದರಿಗಳ ಮಾರಾಟದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಸ್ಕೋಡಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಉತ್ಪನ್ನಗಳೊಂದಿಗೆ ಪ್ರಬಲ ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ತವಕದಲ್ಲಿದೆ. ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಕುಶಾಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುತ್ತಿರುವ ಸ್ಕೋಡಾ ಕಂಪನಿಯು ಸಿ ಸೆಗ್ಮೆಂಟ್ ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಸ್ಥಗಿತಗೊಳಿಸಿ ರ‍್ಯಾಪಿಡ್‌ಗಿಂತಲೂ ಉತ್ತಮ ವಿನ್ಯಾಸದ ಮತ್ತೊಂದು ಕಾರು ಮಾದರಿಯೊಂದನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಸ್ಕೋಡಾ ರ‍್ಯಾಪಿಡ್ ಮಾತ್ರವಲ್ಲದೆ ಮಾತೃಸಂಸ್ಥೆಯ ಫೋಕ್ಸ್‌‌ವ್ಯಾಗನ್ ವೆಂಟೊ ಕಾರು ಮಾದರಿಯು ಕೂಡಾ ಮಾರಾಟದಿಂದ ಸ್ಥಗಿತಗೊಳ್ಳುತ್ತಿದ್ದು, ರ‍್ಯಾಪಿಡ್ ಮತ್ತು ವೆಂಟೊ ಸ್ಥಾನಕ್ಕೆ ಹೊಸ ವಿನ್ಯಾಸ ಮತ್ತು ಪವರ್‌ಫುಲ್ ಎಂಜಿನ್ ಆಯ್ಕೆ ಹೊಸ ಸೆಡಾನ್ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿವೆ.

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್ ಕಾರು ಮಾದರಿಯನ್ನು ಮುಂದಿನ ಕೆಲವೇ ದಿನಗಳಲ್ಲಿ ಮಾರಾಟದಿಂದ ಸ್ಥಗಿತಗೊಳಿಸುವ ಬಗೆಗೆ ಈಗಾಗಲೇ ಮಾಹಿತಿ ಹಂಚಿಕೊಂಡಿರುವ ಸ್ಕೋಡಾ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ರ‍್ಯಾಪಿಡ್ ಸ್ಥಾನದಲ್ಲಿ ಸಂಪೂರ್ಣವಾಗಿ ಹೊಸ ಮಾದರಿಯೊಂದನ್ನು ಸಿದ್ದಪಡಿಸುತ್ತಿದೆ.

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಸಹಭಾಗಿತ್ವ ಯೋಜನೆ ಅಡಿ ಅಭಿವೃದ್ದಿಗೊಳ್ಳುತ್ತಿರುವ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಹೊಸ ಸೆಡಾನ್ ಕಾರು ಮಾದರಿಯು ತಾಂತ್ರಿಕವಾಗಿ ಮತ್ತು ಎಂಜಿನ್ ಆಯ್ಕೆಯಲ್ಲಿ ಬಹುತೇಕ ಒಂದೇ ಆಗಿರಲಿದ್ದು, ವಿನ್ಯಾಸದಲ್ಲಿ ತುಸು ಬದಲಾವಣೆಯೊಂದಿಗೆ ತಮ್ಮದೇ ಆದ ಗ್ರಾಹಕ ವರ್ಗವನ್ನು ಸೆಳೆಯಲಿವೆ. ಹೊಸ ಸೆಡಾನ್ ಕಾರನ್ನು ಸ್ಕೋಡಾ ಕಂಪನಿಯು ಈಗಾಗಲೇ ಭಾರತದಲ್ಲಿ ಎಎನ್‌ಬಿ ಕೋಡ್ ನೆಮ್ ಮೂಲಕ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ರ‍್ಯಾಪಿಡ್‌ಗಿಂತಲೂ ಆಕರ್ಷಕ ವಿನ್ಯಾಸದೊಂದಿಗೆ ಲಾಂಗ್‌ವೀಲ್ಹ್ ಬೆಸ್ ಪಡೆದುಕೊಂಡಿದೆ.

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಹಾಗೆಯೇ ಹೊಸ ಕಾರಿನಲ್ಲಿ 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯನ್ನು ಜೋಡಣೆ ಮಾಡುವ ನೀರಿಕ್ಷೆಯಲ್ಲಿದ್ದು, ಹೊಸ ಎಂಜಿನ್ ಆಯ್ಕೆಯ ಮೂಲಕ ಪ್ರತಿಸ್ಪರ್ಧಿ ಕಾರು ಮಾದರಿಯಾದ ಹೋಂಡಾ ಸಿಟಿ ಕಾರಿಗೆ ಭರ್ಜರಿ ಪೈಪೋಟಿ ನೀಡಲಿವೆ.

MOST READ: ಭಾರತದಲ್ಲಿ ಮಾರಾಟವಾಗುವ ಹೆಚ್ಚು ಮೈಲೇಜ್ ನೀಡುವ ಎಂಪಿವಿಗಳಿವು!

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಸದ್ಯ ಮಾರುಕಟ್ಟೆಯಲ್ಲಿನ ರ‍್ಯಾಪಿಡ್ ಕಾರು ಸಿಂಗಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.29 ಲಕ್ಷ ಬೆಲೆ ಹೊಂದಿದ್ದು, ಹೊಸ ಸೆಡಾನ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.9 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ಸಾಧ್ಯತೆಗಳಿವೆ.

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಪ್ರತಿಸ್ಪರ್ಧಿ ಹೋಂಡಾ ಸಿಟಿ ಕಾರು ಸದ್ಯ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.03 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.88 ಲಕ್ಷ ಬೆಲೆ ಹೊಂದಿದ್ದು, ಸಿಟಿ ಕಾರಿಗೆ ಪೈಪೋಟಿಯಾಗಿ ಸ್ಕೋಡಾ ಕಂಪನಿಯು ಹೊಸ ಕಾರನ್ನು ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್‌ನೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಚ್ಚ ಹೊಸ ಸಿ ಸೆಗ್ಮೆಂಟ್ ಸೆಡಾನ್ ಕಾರಿನ ರೋಡ್ ಟೆಸ್ಟಿಂಗ್ ಆರಂಭಿಸಿದ ಸ್ಕೋಡಾ

ಒಟ್ಟಿನಲ್ಲಿ ಹೊಸ ಸೆಡಾನ್ ಕಾರಿನೊಂದಿಗೆ ಹೋಂಡಾ ಸಿಟಿಗೆ ಪ್ರಬಲ ಪೈಪೋಟಿ ನೀಡಲು ನಿರ್ಧರಿಸಿರುವ ಸ್ಕೋಡಾ ಮತ್ತು ಫೋಕ್ಸ್‌ವ್ಯಾಗನ್ ಕಂಪನಿಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು ಸ್ಕೋಡಾ ಕಾರು ಮಾರಾಟ ಸಂಖ್ಯೆಯಲ್ಲಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಲಿವೆ.

Most Read Articles

Kannada
Read more on ಸ್ಕೋಡಾ skoda
English summary
Skoda Upcoming Car Spied Testing For The First Time. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X