ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಕ್ರಾಂತಿಯನ್ನುಂಟು ಮಾಡುವ ದೇಶಿಯ ಉತ್ಪನ್ನವನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಾಗುವುದು ಎಂದು ವರದಿಯಾಗಿದೆ. ಎಲೆಕ್ಟ್ರಿಕ್ ಕಾರುಗಳ ಸ್ಟಾರ್ಟ್ ಅಪ್ ಕಂಪನಿಯಾದ ಓಝೋನ್ ತನ್ನ ಮೊದಲ ಎಲೆಕ್ಟ್ರಿಕ್ ಕಾರನ್ನು ದೇಶದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಓಝೋನ್ ಕಂಪನಿಯ ಹೊಸ ಕಾರು ಇನ್ನು ಕೆಲವೇ ದಿನಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ. ಆಲಿಸ್ ಎಂಬ ಹೆಸರಿನಲ್ಲಿ ಬಿಡುಗಡೆಯಾಗಲಿರುವ ಈ ಎಲೆಕ್ಟ್ರಿಕ್ ಕಾರು ಎಲೆಕ್ಟ್ರಿಕ್ ವಾಹನಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಜ್ಜಾಗಿದೆ.

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಸಾಮಾನ್ಯವಾಗಿ ಎಲೆಕ್ಟ್ರಿಕ್ ಕಾರುಗಳು ಪೂರ್ತಿಯಾಗಿ ಚಾರ್ಜ್ ಆಗಲು ಹೆಚ್ಚು ಸಮಯ ಕಾಯಬೇಕಾಗುತ್ತದೆ. ಜೊತೆಗೆ ಎಲೆಕ್ಟ್ರಿಕ್ ಕಾರುಗಳು ದುಬಾರಿ ಬೆಲೆಯನ್ನು ಹೊಂದಿರುತ್ತವೆ. ಆಲಿಸ್ ಕಾರು ಈ ಸಂಗತಿಗಳನ್ನು ದೂರ ಮಾಡಲಿದೆ ಎಂದು ಹೇಳಲಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಓಝೋನ್ ಕಂಪನಿಯು ತನ್ನ ಆಲಿಸ್ ಅರ್ಬನ್ ಎಲೆಕ್ಟ್ರಿಕ್ ಕಾರಿನ ಟೀಸರ್ ಚಿತ್ರಗಳನ್ನು ಬಿಡುಗಡೆಗೊಳಿಸಿದೆ. ಈ ಎಲೆಕ್ಟ್ರಿಕ್ ಕಾರಿನ ಪರಿಚಯದ ಮೂಲಕ ಜನರನ್ನು ಆಕರ್ಷಿಸುವ ಉದ್ದೇಶದಿಂದ ಟೀಸರ್ ಅನ್ನು ಬಿಡುಗಡೆಗೊಳಿಸಲಾಗಿದೆ.

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಆಲಿಸ್ ಎಲೆಕ್ಟ್ರಿಕ್ ಕಾರು ಹೇಗಿರಲಿದೆ ಎಂಬುದನ್ನು ತಿಳಿಯಲು ಈ ಟೀಸರ್'ನಿಂದ ಸಾಧ್ಯವಾಗಲಿದೆ. ಆಲಿಸ್ ಅರ್ಬನ್ ಎಲೆಕ್ಟ್ರಿಕ್ ಕಾರು ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ವಾಹನವೆಂದು ಈ ಟೀಸರ್'ನಿಂದ ಖಚಿತವಾಗಿದೆ. ಈ ಟೀಸರ್ ಮೂಲಕ ಕಾರಿನ ಏರೋಡೈನಾಮಿಕ್ ವಿನ್ಯಾಸದ ಮಾಹಿತಿಯೂ ಬಹಿರಂಗವಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಇತರ ಕಂಪನಿಯ ಐಷಾರಾಮಿ ಕಾರುಗಳ ರೀತಿಯಲ್ಲಿ ಆಲಿಸ್ ಕಾರು ಸಹ ಡಿ ಶೇಪಿನ ಡಿಆರ್‌ಎಲ್ ಹಾಗೂ ಗ್ರಿಲ್‌ನ ಮಧ್ಯಭಾಗದಲ್ಲಿ ಲೋಗೋ ಹಾಗೂ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಈ ಕಾರಿನ ಶ್ರೇಣಿ ಹಾಗೂ ಬ್ಯಾಟರಿ ಸಾಮರ್ಥ್ಯದ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಿಲ್ಲ.

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಈ ಕಾರು ಪೂರ್ತಿಯಾಗಿ ಚಾರ್ಜ್ ಆದ ನಂತರ 150 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಹಾಗೂ ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 70 ಕಿ.ಮೀಗಳಾಗಿದೆ ಎಂದು ತಿಳಿದು ಬಂದಿದೆ. ಈ ಕಾರನ್ನು ಕೈಗೆಟುಕುವ ಬೆಲೆಗೆ ಮಾರಾಟ ಮಾಡುವ ನಿರೀಕ್ಷೆಗಳಿವೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಸದ್ಯಕ್ಕೆ ಟಾಟಾ ಮೋಟಾರ್ಸ್ ಕಂಪನಿಯ ಟಿಗೋರ್ ಎಲೆಕ್ಟ್ರಿಕ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಕೈಗೆಟುಕುವ ದರದಲ್ಲಿ ಮಾರಾಟವಾಗುವ ಎಲೆಕ್ಟ್ರಿಕ್ ಕಾರ್ ಆಗಿದೆ. ಈ ಕಾರ್ ಅನ್ನು ಕಮರ್ಷಿಯಲ್ ವೆಹಿಕಲ್ ಸೆಗ್'ಮೆಂಟಿನಲ್ಲಿ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ.

ಕೈಗೆಟುಕುವ ಬೆಲೆಯಲ್ಲಿ ಮಾರಾಟವಾಗಲಿದೆ ಓಝೋನ್ ಕಂಪನಿಯ ಎಲೆಕ್ಟ್ರಿಕ್ ಕಾರು

ಟಾಟಾ ಟಿಗೋರ್ ಎಲೆಕ್ಟ್ರಿಕ್ ಕಾರಿನ ಬೆಲೆ ರೂ. 9.58 ಲಕ್ಷದಿಂದ ರೂ.9.90 ಲಕ್ಷಗಳಾಗಿದೆ. ಹೊಸ ಓಝೋನ್ ಆಲಿಸ್ ಅರ್ಬನ್ ಎಲೆಕ್ಟ್ರಿಕ್ ಕಾರಿನ ಬೆಲೆ ಇದಕ್ಕಿಂತ ಕಡಿಮೆಯಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Start up company Ozone teases Alice electric car ahead of launch. Read in Kannada.
Story first published: Thursday, January 28, 2021, 17:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X