Just In
- 25 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಶಾಕ್ ನೀಡಿದ ಸುಪ್ರೀಂ ಕೋರ್ಟ್
ವಿಶ್ವದಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳಿಗೆ ದಿನೇ ದಿನೇ ಬೇಡಿಕೆ ಹೆಚ್ಚಾಗುತ್ತಿದೆ. ಆದರೆ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗಿರುವವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ಸುಪ್ರೀಂ ಕೋರ್ಟ್ ಇ-ರಿಕ್ಷಾಗಳ ನೋಂದಣಿಗೆ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಕಾರ್ ಅಂಡ್ ಬೈಕ್ ವೆಬ್ ಸೈಟ್ ವರದಿ ಪ್ರಕಟಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಕನಿಷ್ಕಾ ಸಿನ್ಹಾ ಎಂಬ ವಕೀಲರು ಎಲೆಕ್ಟ್ರಿಕ್ ವಾಹನಗಳಿಗಾಗಿ ಪೇಟೆಂಟ್ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅವರು 20 ವರ್ಷಗಳ ಕಾಲ ಪೇಟೆಂಟ್ ಹೊಂದಿದ್ದಾರೆ ಎಂದು ಹೇಳಲಾಗಿದೆ.

ಈ ಕಾರಣಕ್ಕೆ ಯಾವುದೇ ಕಂಪನಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳು ಎಲೆಕ್ಟ್ರಿಕ್ ವಾಹನಗಳನ್ನು ನೋಂದಣಿ ಮಾಡುವ ಮುನ್ನ ಅವರಿಂದ ಅನುಮೋದನೆ ಪಡೆಯುವುದು ಕಡ್ಡಾಯ. ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶದಲ್ಲೂ ಈ ಬಗ್ಗೆ ಹೇಳಲಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ವರದಿಗಳ ಪ್ರಕಾರ ಕನಿಷ್ಕಾ ಸಿನ್ಹಾ ತಮ್ಮ ಪೇಟೆಂಟ್ ಅನ್ನು ಅಮಿತ್ ಎಂಜಿನಿಯರಿಂಗ್‌ಗೆ ಗುತ್ತಿಗೆ ನೀಡಿದ್ದಾರೆ. ಈ ಕಾರಣಕ್ಕೆ ಯಾವುದೇ ಎಲೆಕ್ಟ್ರಿಕ್ ವಾಹನ ಗ್ರಾಹಕರು ತಮ್ಮ ವಾಹನಗಳನ್ನು ನೋಂದಾಯಿಸಲು ಅಮಿತ್ ಎಂಜಿನಿಯರಿಂಗ್ ಕಂಪನಿಯ ಸೇವೆಗಳನ್ನು ಬಳಸುವುದು ಕಡ್ಡಾಯವಾಗಿದೆ.

ಆದರೆ ಕೆಲವು ರಾಜ್ಯ ಸರ್ಕಾರಗಳು ಈ ನಿಯಮವನ್ನು ಪಾಲಿಸುತ್ತಿಲ್ಲವೆಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇ-ರಿಕ್ಷಾಗಳ ನೋಂದಣಿಗೆ ಸುಪ್ರೀಂ ಕೋರ್ಟ್ತಡೆಯಾಜ್ಞೆ ನೀಡಿದೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಈ ತಡೆಯಾಜ್ಞೆಯ ನಂತರ ದೆಹಲಿ ಸರ್ಕಾರವು ಹೊಸ ಎಲೆಕ್ಟ್ರಿಕ್ ವಾಹನಗಳ ನೋಂದಣಿಯನ್ನು ಸ್ಥಗಿತಗೊಳಿಸಿದೆ. ಅದರಲ್ಲೂ ಇ-ರಿಕ್ಷಾಗಳ ನೋಂದಣಿಯನ್ನುಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಇದೇ ರೀತಿಯ ನಿರ್ಬಂಧವು ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಜಾರಿಯಲ್ಲಿದೆ. ಇದೇ ಪರಿಸ್ಥಿತಿ ಶೀಘ್ರದಲ್ಲೇ ಉಳಿದ ರಾಜ್ಯಗಳಲ್ಲಿಯೂ ಕಾಣಿಸಿಕೊಳ್ಳುವ ನಿರೀಕ್ಷೆಗಳಿವೆ. ದೇಶದ ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಅದರಲ್ಲೂ ದೆಹಲಿ ಸರ್ಕಾರವು ಉಳಿದ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿದೆ. ದೆಹಲಿ ಸರ್ಕಾರವು ಇತ್ತೀಚೆಗೆ ಆರಂಭಿಸಿದ್ದ ಸ್ವಿಚ್ ದೆಹಲಿ ಅಭಿಯಾನಕ್ಕೆ ಜನರಿಂದಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ. ಈ ಅಭಿಯಾನದ ಮೂಲಕ ಸರ್ಕಾರವು ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ರಿಯಾಯಿತಿ, ನೋಂದಣಿ ಶುಲ್ಕ ರದ್ದು ಹಾಗೂ ಸಬ್ಸಿಡಿಯಂತಹ ಸೌಲಭ್ಯಗಳನ್ನು ನೀಡುತ್ತಿದೆ.

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ.

ದೇಶಾದ್ಯಂತ ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಜಾರಿಗೆ ತಂದಿದ್ದು, ಹೊಸ ಯೋಜನೆಯಡಿ ಎಲೆಕ್ಟ್ರಿಕ್ ವಾಹನ ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಸಬ್ಸಡಿ ಒದಗಿಸುತ್ತಿದೆ.

ಹಾಗೆಯೇ ಕೇಂದ್ರದ ಫೇಮ್ 2 ಯೋಜನೆಯೊಂದಿಗೆ ವಿವಿಧ ರಾಜ್ಯ ಸರ್ಕಾರಗಳು ಸಹ ತಮ್ಮದೆ ಆದ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ರಾಜ್ಯದ ಸರ್ಕಾರದಿಂದ ಕೆಲವು ವಿನಾಯ್ತಿಗಳನ್ನು ನೀಡುತ್ತಿವೆ.

ರಾಜ್ಯಗಳ ಮಟ್ಟದಲ್ಲಿ ದೆಹಲಿ ಸರ್ಕಾರವು ತನ್ನದೆ ಎಲೆಕ್ಟ್ರಿಕ್ ವಾಹನ ನೀತಿಯೊಂದಿಗೆ ಮುಂಚೂಣಿ ಸಾಧಿಸುತ್ತಿದ್ದು, ತೆಲಂಗಾಣದಲ್ಲೂ ಸಹ 2020-21 ಮತ್ತು 2021-22 ಅವಧಿಯಲ್ಲಿ ಮಾರಾಟಗೊಳ್ಳುವ 2 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಗರಿಷ್ಠ ಸಬ್ಸಡಿ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ.

ಗೋವಾ ಸರ್ಕಾರವು ಕೂಡಾ ಕ್ಲೀನ್ ಮೊಬಿಲಿಟಿಗೆ ಚಾಲನೆ ನೀಡುವ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಹೊಸ ಯೋಜನೆಗೆ ಚಾಲನೆ ನೀಡಿದ್ದು, ಹೊಸ ಯೋಜನೆ ಅಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಕೊಡುಗೆಗಳನ್ನು ಘೋಷಣೆ ಮಾಡಿದೆ.

ಕ್ಲೀನ್ ಮೊಬಿಲಿಟಿ ಯೋಜನೆ ಅಡಿ ಪ್ರತಿ ವರ್ಷ 10 ಸಾವಿರ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ನೋಂದಣಿ ಶುಲ್ಕದಲ್ಲಿ ವಿನಾಯ್ತಿ ನೀಡುವುದಾಗಿ ಘೋಷಣೆ ಮಾಡಿದ್ದು, ಜೊತೆಗೆ ಚಾರ್ಜಿಂಗ್ ಸೌಲಭ್ಯಕ್ಕಾಗಿ ಅಗತ್ಯ ಫಾಸ್ಟ್ ಚಾರ್ಜಿಂಗ್‌ಗಳನ್ನು ಹೊಸ ಯೋಜನೆ ಅಡಿ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ.

ಹೊಸ ಯೋಜನೆಯೊಂದಿಗೆ ವಾರ್ಷಿಕವಾಗಿ 5 ಸಾವಿರ ಟನ್ ಇಂಗಾಲದ ಡೈಆಕ್ಸೈಡ್ ತಗ್ಗಿಸುವ ಗುರಿಹೊಂದಲಾಗಿದ್ದು, ಹಳೆಯ ವಾಹನಗಳಗೆ ಸ್ವಯಂಪ್ರೇರಿತ ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳಲು ಉತ್ತೇಜಿಸುವುದು ಹೊಸ ಯೋಜನೆಯ ಪ್ರಮುಖ ಭಾಗವಾಗಿದೆ.