ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ಎಷ್ಟೇ ಅತ್ಯಾಧುನಿಕ ಕಾರುಗಳು ಬಿಡುಗಡೆಯಾದರೂ ಮಾರುತಿ ಸ್ವಿಫ್ಟ್ ಕಳೆದ 15 ವರ್ಷದಿಂದ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಮಾದರಿಗಳಲ್ಲಿ ಒಂದಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಬಹುಬೇಡಿಕೆಯೊಂದಿಗೆ ದಾಖಲೆಯ ಮಟ್ಟದಲ್ಲಿ ಜನಪ್ರಿಯ ಸ್ವಿಫ್ಟ್ ಕಾರು ಮಾರಾಟವಾಗುತ್ತಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ಅಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯು ಕೂಡ ಉತ್ತಮವಾಗಿ ಮಾರಾಟವಾಗುತ್ತಿದೆ. ಮೂರನೇ ಜರೇಷನ್ ಸುಜುಕಿ ಸ್ವೀಫ್ ಕಾರು 2016 ರಿಂದ ಮಾರಾಟವಾಗುತ್ತಿದೆ. ಜಪಾನಿನ ಕಾರು ತಯಾರಕರು ಮುಂದಿನ ವರ್ಷ ಹ್ಯಾಚ್‌ಬ್ಯಾಕ್‌ಗಾಗಿ ನ್ಯೂ ಜನರೇಷನ್ ಮಾದರಿಯನ್ನು ಪರಿಚಯಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ಸ್ವಿಫ್ಟ್ ಮಿಡ್ ಲೈಫ್ ಫೇಸ್ ಲಿಫ್ಟ್ ಅನ್ನು ತನ್ನ ತಾಯಿನಾಡು ಜಪಾನ್ ನಲ್ಲಿ ಸುಜುಕಿ ಪರಿಚಯಿಸಿತ್ತು.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ಮುಂದಿನ ವರ್ಷ ಜುಲೈನಲ್ಲಿ ಸುಜುಕಿ ಸ್ವಿಫ್ಟ್‌ನ ನ್ಯೂ ಜನರೇಷನ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ ಎಂದು ಜಪಾನ್‌ನ ಬೆಸ್ಟ್‌ಕಾರ್ವೆಬ್‌ನ ಹೊಸ ವರದಿಯಲ್ಲಿ ಹೇಳಲಾಗಿದೆ. ಇದರ ಪ್ರಕಾರ ನ್ಯೂ ಜನರೇಷನ್ ಸ್ವಿಫ್ಟ್ ಹೊಸ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ನ್ಯೂ ಜನರೇಷನ್ ಸ್ವಿಫ್ಟ್ ವಿನ್ಯಾಸದ ಬಗ್ಗೆ ಹೇಳುದಾದರೆ, ಪ್ರಸ್ತುತ ಸ್ವಿಫ್ಟ್‌ನ ಸಿಲೂಯೆಟ್ ಅನ್ನು ಉಳಿಸಿಕೊಂಡಿದೆ. ಇನ್ನು ಈ ಕಾರು ಲೋ ಬಾನೆಟ್, ಹೆಚ್ಚು ಪ್ರಮುಖವಾದ ರೇಡಿಯೇಟರ್ ಗ್ರಿಲ್, ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ ಹೆಡ್ ಲ್ಯಾಂಪ್, ಸ್ಲಿಮ್ ಫಾಗ್ ಲೈಟ್ಸ್, ಎಡ್ಜಿಯರ್ ಕ್ಯಾರೆಕ್ಟರ್ ಲೈನ್ಸ್ ಮತ್ತು ಎತ್ತರದ ಹಿಂಭಾಗದ ಡೋರಿನ ಹ್ಯಾಂಡಲ್ ಗಳನ್ನು ಪಡೆಯುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ಪ್ರಸ್ತುತ ಮಾರಾಟದಲ್ಲಿರುವ ಮಾದರಿಗೆ ಹೋಲಿಸಿದರೆ ಹೊಸ ಸ್ವಿಫ್ಟ್ ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುತ್ತದೆ. ಆದರೆ ಈ ವಿನ್ಯಾಸವು ಸಂಪೂರ್ಣವಾಗಿ ಕಾಲ್ಪನಿಕವಾಗಿದೆ ಎಂದು ಗಮನಿಸಬೇಕಾದ ಅಂಶವಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ದೊಡ್ಡ ಬದಲಾವಣೆಯೆಂದರೆ, ನ್ಯೂ ಜನರೇಷನ್ ಸ್ವಿಫ್ಟ್ ಆಯ್ದ ಮಾರುಕಟ್ಟೆಗಳಲ್ಲಿ ಪೂರ್ಣ-ಹೈಬ್ರಿಡ್ ಪವರ್‌ಟ್ರೇನ್‌ಗೆ ಬದಲಾಗಿ ಮೈಲ್ಡ್ -ಹೈಬ್ರಿಡ್ ಪವರ್‌ಟ್ರೇನ್ ಲಭ್ಯವಿರುತ್ತದೆ. ಹೊಸ ಮಾದರಿಯು ಪ್ರಸ್ತುತ 12-ವೋಲ್ಟ್ ಬದಲಿಗೆ 48-ವೋಲ್ಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಹೊಂದಿರಬಹುದು.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ಇದಲ್ಲದೆ, ಟಾರ್ಕ್-ಫಿಲ್ ಕಂಟ್ರೋಲ್ ಮತ್ತು ಎಲೆಕ್ಟ್ರಿಕ್ ಮೋಟರ್ ಐಡ್ಲಿಂಗ್‌ನಂತಹ ಹೊಸ ವೈಶಿಷ್ಟ್ಯಗಳು ಸಹ ಪಡೆಯಬಹುದು. ಭಾರತೀಯ ಮಾರುಕಟ್ಟೆಗೆ ಸಂಬಧಿಸಿದಂತೆ, ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್ ಫೇಸ್‌ಲಿಫ್ಟ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

ಜನಪ್ರಿಯ ಹ್ಯಾಚ್‌ಬ್ಯಾಕ್ ಸ್ವಿಫ್ ಕಾರನ್ನು ಮಿಡ್-ಲೈಫ್ ನವೀಕರಣವನ್ನು ಮಾಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಸ್ವಿಫ್ಟ್ ಕಾರಿಗೆ ಹೋಲಿಸಿದರೆ ಮುಂಭಾಗದಲ್ಲಿ ಕೆಲವು ನವೀಕರಣಗಳೊಂದಿಗೆ ಬಿಡುಗಡೆಯಾಗಲಿದೆ. ಈ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಸ್ವಿಫ್ಟ್ ಕಾರು

2021ರ ಮಾರುತಿ ಸುಜುಕಿ ಸ್ವಿಫ್ಟ್ ಫೇಸ್‌ಲಿಫ್ಟ್ ಕಾರಿನಲ್ಲಿ ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಅಳಡಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ 89 ಬಿಹೆಚ್‌ಪಿ ಪವರ್ ಮತ್ತು 113 ಎನ್‌ಎಂ ಟಾರ್ಕ್ ಅನ್ನು ಸಾಮರ್ಥ್ಯ ಹೊಂದಿರುತ್ತದೆ.

Most Read Articles

Kannada
English summary
New-Gen Swift With Mild-Hybrid Tech Expected Launch Next Year. Read In Kananda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X