ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಕಳೆದ ವರ್ಷದಿಂದ ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಕಾರುಗಳು ಉತ್ತಮ ಬೇಡಿಕೆಯನ್ನು ಪಡೆದುಕೊಳ್ಳುತ್ತಿವೆ. ಇನ್ನು ಸ್ವದೇಶಿ ವಾಹನ ತಯಾರಕರ ಜನಪ್ರಿಯ ಆಲ್‌‌ಟ್ರೊಜ್ ಕಾರಿನ ಮಾರಾಟದಲ್ಲಿಯು ದಾಖಲೆಯ ಮಟ್ಟದ ಬೇಡಿಕೆಯನ್ನು ಪಡೆದುಕೊಂಡಿದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಕಾರು ಇತ್ತೀಚಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸುತ್ತಿದೆ. 2021ರ ಏಪ್ರಿಲ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಮಾದರಿಯ ಒಟ್ಟು 6,649 ಯುನಿ‍‍ಟ್‍‍ಗಳು ಮಾರಾಟವಾಗಿವೆ. ಹೀಗಾಗಿ ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರಾಟ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು. ಹ್ಯುಂಡೈ ಐ20 ಕಾರನ್ನು ಕಳೆದ ತಿಂಗಳಿನ ಮಾರಾಟದಲ್ಲಿ ಟಾಟಾ ಆಲ್‌‌ಟ್ರೊಜ್ ಹಿಂದಿಕ್ಕಿದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಕಳೆದ ತಿಂಗಳು ಹ್ಯುಂಡೈ ಐ20 ಮಾದರಿಯ 5,002 ಯುನಿ‍‍ಟ್‍‍ಗಳು ಮಾರಾಟವಾಗಿವೆ. ಟಾಟಾ ಆಲ್‌‌ಟ್ರೊಜ್ ಮಾರಾಟವು ಕಳೆದ ತಿಂಗಳು ಹ್ಯುಂಡೈ ಐ20 ಗಿಂತ ಶೇ.32.93 ರಷ್ಟು ಹೆಚ್ಚಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಆಲ್ಟ್ರೊಜ್‌ನ ಜನಪ್ರಿಯತೆ ಹೆಚ್ಚಾಗಲು ಸಾಕಷ್ಟು ಕಾರಣಗಳಿವೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಹೊಸ 'ಐ-ಟರ್ಬೊ' ರೂಪಾಂತರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿ ಮಾರಾಟದಲ್ಲಿ ಮತ್ತಷ್ಟು ಬೂಸ್ಟ್ ಮಾಡಿದೆ. ವಿಶೇಷವೆಂದರೆ ಭಾರತದಲ್ಲಿ ವಾಹನ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಅರಿವಿನೊಂದಿಗೆ ಟಾಟಾ ಕಾರುಗಳು ಖರೀದಿದಾರರಲ್ಲಿ ಬೇಡಿಕೆಯ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ ಟಾಟಾ ಆಲ್‌‌ಟ್ರೊಜ್ ಅನ್ನು ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಹ್ಯಾಚ್‌ಬ್ಯಾಕ್ ವಯಸ್ಕರ ವಿಭಾಗದಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಮಕ್ಕಳ ಸುರಕ್ಷತೆಗಾಗಿ 3-ಸ್ಟಾರ್ ರೇಟಿಂಗ್ ಗಳಿಸಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಸುರಕ್ಷಿತ ಹ್ಯಾಚ್‌ಬ್ಯಾಕ್ ಆಗಿದೆ. ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಮೂರು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಮೊದಲನೆಯದು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಗಿದ್ದು. ಇದು 86 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಎರಡನೆಯದು 1.5-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಆಗಿದ್ದು, ಈ ಎಂಜಿನ್ 90 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಮೂರನೇಯದು 1.2-ಲೀಟರ್ ಪವರ್ ಫುಲ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದ್ದು, ಇದು 110 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿನ ಬಗ್ಗೆ ಹೇಳುವುದಾದರೆ, ಹೊಸ ಐ20 ಹೆಚ್ಚು ಸ್ಪೋರ್ಟಿ ಮತ್ತು ಬೋಲ್ಡ್ ಲುಕ್ ಅನ್ನು ಹೊಂದಿದೆ. ಹ್ಯಾಚ್‌ಬ್ಯಾಕ್‌ ವಿಭಾಗದಲ್ಲಿ ಹ್ಯುಂಡೈ ಐ20 ಗ್ರಾಹಕರನ್ನು ತನ್ನತ ಸೆಳೆಯುವಂತಹ ಆಕರ್ಷಕ ಲುಕ್ ಮತ್ತು ಸ್ಟೈಲಿಶ್ ನಿಂದ ಹೆಚ್ಚು ಜನಪ್ರಿಯವಾಗಿದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಹೊಸ ಹ್ಯುಂಡೈ ಐ20 ಕಾರು ಮೂರು ಎಂಜಿನ್ ಆಯ್ಕೆಗಳನ್ನು ಹೊಂದಿವೆ. ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 83 ಬಿಹೆಚ್‌ಪಿ ಪವರ್ ಮತ್ತು 114 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಇದರೊಂದಿಗೆ 1.0ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 120 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5ಎಲ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿಯು ಕೂಡ ಲಭ್ಯವಿದೆ.

ತಿಂಗಳ ಮಾರಾಟದಲ್ಲಿ ಮೊದಲ ಬಾರಿಗೆ ಹ್ಯುಂಡೈ ಐ20 ಕಾರನ್ನು ಹಿಂದಿಕ್ಕಿದ ಟಾಟಾ ಆಲ್‌‌ಟ್ರೊಜ್

ಹೊಸ ಹ್ಯುಂಡೈ ಕಾರು ಅತ್ಯಾಧುನಿಕ ಫೀಚರ್, ಆಕರ್ಷಕ ವಿನ್ಯಾಸ ಮತ್ತು ಪವರ್ ಫುಲ್ ಎಂಜಿನ್ ಅನ್ನು ಹೊಂದಿದೆ. ಈ ಎಲ್ಲಾ ಕಾರಣದಿಂದ ಈ ಹೊಸ ಹ್ಯುಂಡೈ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದೆ.

Article Published On: Thursday, May 6, 2021, 9:55 [IST]
English summary
Tata Altroz Outsells Hyundai i20 For The First Time. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+