ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹೊಸ ಕಾರು ಮಾರಾಟದಲ್ಲಿ ಸಾಕಷ್ಟು ಬದಲಾವಣೆ ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಎಲೆಕ್ಟ್ರಿಕ್ ಕಾರು ಮಾರಾಟದಲ್ಲೂ ಮುಂಚೂಣಿ ಸಾಧಿಸುತ್ತಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಟಿಗೋರ್ ಎಲೆಕ್ಟ್ರಿಕ್ ಕಾರುಗಳ ಸದ್ಯ ಇವಿ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನೆಕ್ಸಾನ್ ಇವಿ ಕಾರು ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದೆ. ಹೊಸದಾಗಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್ ಇವಿ ಕೂಡಾ ಟಾಟಾ ಮೋಟಾರ್ಸ್ ಕಂಪನಿಗೆ ಭರ್ಜರಿ ಬೇಡಿಕೆ ತಂದುಕೊಡುವ ನೀರಿಕ್ಷೆಗಳಿದ್ದು, ಕಂಪನಿಯು ಶೀಘ್ರದಲ್ಲೇ ಹೊಸ ಕಾರನ್ನು ರಸ್ತೆಗಿಳಿಸಲಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಎಲೆಕ್ಟ್ರಿಕ್ ಕಾರುಗಳನ್ನು ಟಾಟಾ ಮೋಟಾರ್ಸ್ ಜಿಪ್‌ಟ್ರಾನ್ ತಂತ್ರಜ್ಞಾನದ ಆಧಾರದ ಮೇಲೆ ನಿರ್ಮಾಣಗೊಳಿಸುತ್ತಿದ್ದು, ಮುಂಬರುವ ಎಲೆಕ್ಟ್ರಿಕ್ ಕಾರುಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಮೈಲೇಜ್ ರೇಂಜ್ ಹೊಂದಿರುವ ಬ್ಯಾಟರಿ ಪ್ಯಾಕ್ ನೀಡುವ ಸುಳಿವು ನೀಡಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮೂಲಕ ಗ್ರಾಹಕರ ಗರಿಷ್ಠ ಬೇಡಿಕೆಗಳನ್ನು ಪೂರೈಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯದ ಕಾರುಗಳಲ್ಲಿ ಇನ್ನು ಕೆಲವು ಬದಲಾವಣೆಗಳನ್ನು ಪರಿಚಯಿಸಲು ಸಿದ್ದವಾಗಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್ ಇವಿಯಲ್ಲಿ ಪ್ರತಿ ಚಾರ್ಜ್‌ಗೆ 500 ಕಿ.ಮೀ ಮೈಲೇಜ್ ಹೊಂದಿರುವ ಬ್ಯಾಟರಿ ಪ್ಯಾಕ್ ನೀಡಲು ನಿರ್ಧರಿಸಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ಭವಿಷ್ಯ ಇವಿ ಕಾರುಗಳಿಗಾಗಿ ಪ್ರಸ್ತುತ ಬಳಕೆಯಲ್ಲಿರುವ ಬ್ಯಾಟರಿ ರೇಂಜ್‌ಗಿಂತಲೂ ಶೇ.20 ರಿಂದ ಶೇ.40 ರಷ್ಟು ಸುಧಾರಣೆ ಕಂಡಿರುವ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲು ನಿರ್ಧರಿಸಿದ್ದು, ಆಲ್‌ಟ್ರೊಜ್ ಇವಿ ಕಾರು ಸರಾಸರಿಯಾಗಿ ಪ್ರತಿ ಚಾರ್ಜ್‌ಗೆ 500 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಜೋಡಣೆ ಹೊಂದುವುದು ಸ್ಪಷ್ಟವಾಗಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಸದ್ಯ ನೆಕ್ಸಾನ್ ಇವಿ ಕಾರಿನಲ್ಲಿ ಟಾಟಾ ಕಂಪನಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸುವ 30.2kWh ಬ್ಯಾಟರಿ ಜೋಡಣೆ ಮಾಡಿದ್ದು, ಹೊಸ ಬ್ಯಾಟರಿ ಪ್ಯಾಕ್ ಪ್ರಸ್ತುತ ಮಾದರಿಗಿಂತಲೂ ಹೆಚ್ಚು ಮೈಲೇಜ್ ನೀಡುವುದರ ಜೊತೆಗೆ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಚಾರ್ಜ್ ಆಗುವ ವೈಶಿಷ್ಟ್ಯತೆ ಹೊಂದಿರಲಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಹೊಸ ಆಲ್‌ಟ್ರೊಜ್ ಇವಿ ಕಾರಿನ ಬ್ಯಾಟರಿ ಪ್ಯಾಕ್ ಪರೀಕ್ಷೆಗಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು 2022ರ ಆರಂಭದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಹೊಸ ಕಾರಿನ ಬೆಲೆ ಕೂಡಾ ಆಕರ್ಷಕವಾಗಿರಲಿದೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಇವಿ ಕಾರುಗಳನ್ನು ಖರೀದಿಸಲು ಗ್ರಾಹಕರಿಗೆ ಆಸಕ್ತಿ ಇದ್ದರೂ ಇಂಧನ ಆಧರಿತ ವಾಹನಗಳಿಂತಲೂ ಹೆಚ್ಚಿನ ಮಟ್ಟದ ಬೆಲೆ ಹೊಂದಿರುವ ಕಾರಣಕ್ಕೆ ಹಿಂದೇಟು ಹಾಕುವಂತಾಗಿದ್ದು, ಇವಿ ವಾಹನ ಖರೀದಿ ಹೆಚ್ಚಳಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಬ್ಸಡಿ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಸಬ್ಸಡಿ ಹೆಚ್ಚಳ ಮತ್ತು ಇಂಧನ ಬೆಲೆ ದುಬಾರಿಯಾಗುತ್ತಿರುವುದರಿಂದ ಇದೀಗ ನಿಧಾನವಾಗಿ ಇವಿ ಮಾರಾಟವು ಸುಧಾರಣೆಗೊಳ್ಳುತ್ತಿದ್ದು, ಇವಿ ವಾಹನ ಉತ್ಪಾದನೆ ಹೆಚ್ಚಳವಾಗುವುದರಿಂದ ಬೆಲೆ ಕಡಿತವಾಗುವ ನೀರಿಕ್ಷೆಗಳಿವೆ.

ಪ್ರತಿ ಚಾರ್ಜ್‌ಗೆ 500ಕಿ.ಮೀ ಮೈಲೇಜ್ ಪ್ರೇರಿತ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳಲಿದೆ ಟಾಟಾ ಆಲ್‌ಟ್ರೊಜ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ಕೂಡಾ ಹೊಸ ಆಲ್‌ಟ್ರೊಜ್ ಮೂಲಕ ಹೊಸ ಸಂಚಲನ ಮೂಡಿಸುವ ತವಕದಲ್ಲಿದ್ದು, ಹೊಸ ಕಾರು ಕೇಂದ್ರ ಸರ್ಕಾರದ ಸಬ್ಸಡಿಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.10 ಲಕ್ಷದಿಂದ ರೂ.12 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ನೀರಿಕ್ಷೆಗಳಿವೆ.

Most Read Articles

Kannada
English summary
Tata Altroz EV Range Around 500 Kilometers. Read in Kannada.
Story first published: Friday, July 23, 2021, 16:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X