ಟಾಟಾ ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಹ್ಯಾಚ್‌ಬ್ಯಾಕ್ ಕಾರು ಮಾದರಿಯಾದ ಆಲ್‌ಟ್ರೊಜ್ ಆವೃತ್ತಿಯಲ್ಲಿ ಮೊದಲ ಬಾರಿಗೆ ಟರ್ಬೋ ಆವೃತ್ತಿಯನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರನ್ನು ಅನಾವರಣಗೊಳಿಸಿರುವ ಕಂಪನಿಯು ಇದೀಗ ಹೊಸ ಕಾರಿಯ ಕಾರ್ಯಕ್ಷಮತೆ ಕುರಿತಾದ ಟೀಸರ್ ಬಿಡುಗಡೆ ಮಾಡಿದೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಹೊಸ ಆಲ್‌ಟ್ರೊಜ್ ಟರ್ಬೋ ವರ್ಷನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಐ20, ಮಾರುತಿ ಸುಜುಕಿ ಬಲೆನೊ ಮತ್ತು ಫೋರ್ಕ್ಸ್‌ವ್ಯಾಗನ್ ಪೊಲೊ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಆಲ್‌ಟ್ರೊಜ್ ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮಾದರಿಯಲ್ಲಿ ಐಟರ್ಬೋ ಮಾದರಿಯನ್ನು ಪರಿಚಯಿಸಲಾಗಿದೆ. ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೊಸ ಆವೃತ್ತಿಯು ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಹೊಂದಿದೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಟಾಟಾ ಕಂಪನಿಯು ಇದೇ ತಿಂಗಳು 22ರಂದು ಆಲ್‌ಟ್ರೊಜ್ ಕಾರಿನ ಐಟರ್ಬೋ ಮಾದರಿಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ ಬುಕ್ಕಿಂಗ್ ಪ್ರಕ್ರಿಯೆ ಕೂಡಾ ಆರಂಭವಾಗಿದೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಹೊಸ ಐ-ಟರ್ಬೋ ಆಲ್‌ಟ್ರೊಜ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ಮತ್ತು ವಿವಿಧ ಹೊಸ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಉತ್ತಮ ಮಟ್ಟದ ಎಂಜಿನ್ ಆಯ್ಕೆ ಮತ್ತು ಸುಧಾರಿತ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಆಲ್‌ಟ್ರೊಜ್ ಕಾರಿನಲ್ಲಿ ಸದ್ಯ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ. ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಹೊಸ ಟಾಟಾ ಆಲ್‌‌ಟ್ರೊಜ್ ಐಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಗರಿಷ್ಠ 108-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಐಟರ್ಬೋ ಮಾದರಿಯು ಸಿಟಿ ಮತ್ತು ಸ್ಟೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಸದ್ಯಕ್ಕೆ ಹೊಸ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವ ಕಂಪನಿಯು ಶೀಘ್ರದಲ್ಲೇ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆಯೆಂತೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಹೊಸ ಎಂಜಿನ್ ಮೂಲಕ ಐಟರ್ಬೋ ಮಾದರಿಯು ಕೇವಲ 12 ಸೇಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿಮೀ ವೇಗಪಡೆದುಕೊಳ್ಳಲಿದ್ದು, ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 18.13 ಕಿಮೀ ಮೈಲೇಜ್ ಹಿಂದಿರುಗಿಸಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಇನ್ನು ಟಾಟಾ ಆಲ್‌‌ಟ್ರೊಜ್ ಐಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿರಲಿದ್ದು, ಹಾರ್ಬಲ್ ಬ್ಲ್ಯೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಅತ್ಯುತ್ತಮ ಲೆದರ್ ಆಸನಗಳು, ಕನೆಕ್ಟೆಡ್ ಟೆಕ್ನಾಲಜಿ ಐರಾ ಸೌಲಭ್ಯ ಪಡೆದುಕೊಂಡಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಐರಾ(iRA) ಕನೆಕ್ಟೆಡ್ ಫೀಚರ್ಸ್ ಅನ್ನು ಆಲ್‌ಟ್ರೊಜ್ ಐಟರ್ಬೋ ಆವೃತ್ತಿಯಲ್ಲಿ ಜೋಡಣೆ ಮಾಡುವ ಮೂಲಕ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕನೆಕ್ಟೆಡ್ ಫೀಚರ್ಸ್ ಹಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಾರುಗಳಿಗೆ ಗರಿಷ್ಠ ಭದ್ರತೆ ನೀಡುತ್ತದೆ.

ಆಲ್‌ಟ್ರೊಜ್ ಐಟರ್ಬೋ ಕಾರಿನ ಟೀಸರ್ ಬಿಡುಗಡೆ

ಹೊಸ ಐರಾ ಕನೆಕ್ಟೆಡ್ ಫೀಚರ್ಸ್‌ನಲ್ಲಿ ಸುಮಾರು 70ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ ಸೌಲಭ್ಯವಿದ್ದು, ಒಂದೇ ಸೂರಿನಡಿ ಕಾರಿನ ಬಹುತೇಕ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದಲ್ಲದೆ ತಾಂತ್ರಿಕ ದೋಷಗಳನ್ನು ಅತಿ ಸುಲಭವಾಗಿ ಪತ್ತೆ ಮಾಡಬಹುದಾಗಿದೆ.

Most Read Articles

Kannada
English summary
ata Altroz iTurbo new video teaser released. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X