Just In
- 5 hrs ago
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
- 6 hrs ago
ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್
- 7 hrs ago
ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ
- 8 hrs ago
ಒಂದೂವರೆ ವರ್ಷದಲ್ಲಿ ದಾಖಲೆ ಸಂಖ್ಯೆಯ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
Don't Miss!
- News
ರೈತರಿಗಾಗಿ ಸದಾ ನನ್ನ ಮನೆ ಬಾಗಿಲು ತೆರೆದಿರುತ್ತದೆ: ಸಿಎಂ ಯಡಿಯೂರಪ್ಪ!
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Sports
ಚೇತೇಶ್ವರ ಪೂಜಾರಗೆ ಮರ್ಯಾದೆ ಪ್ರಶ್ನೆ, ಭಾರೀ ಸವಾಲೆಸೆದ ಆರ್ ಅಶ್ವಿನ್!
- Finance
ವಾಟ್ಸಾಪ್ ವೆಬ್ನಿಂದಲೂ ಆಡಿಯೋ ಮತ್ತು ವೀಡಿಯೋ ಕರೆಗಳನ್ನು ಮಾಡಬಹುದು!
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಲ್‌ಟ್ರೊಜ್ ಪರ್ಫಾಮೆನ್ಸ್ ವರ್ಷನ್ ಐಟರ್ಬೋ ಅನಾವರಣಗೊಳಿಸಿದ ಟಾಟಾ ಮೋಟಾರ್ಸ್
ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರು ಮಾದರಿಯಲ್ಲಿ ಹೊಸದಾಗಿ ಪೆಟ್ರೋಲ್ ಟರ್ಬೋ ಆವೃತ್ತಿಯನ್ನು ಬಿಡುಗಡೆ ಮಾಡಲು ಅಂತಿಮ ಸಿದ್ದತೆಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿದೆ.

ಹೊಸ ಆಲ್‌ಟ್ರೊಜ್ ಟರ್ಬೋ ವರ್ಷನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಐ20, ಮಾರುತಿ ಸುಜುಕಿ ಬಲೆನೊ ಮತ್ತು ಫೋರ್ಕ್ಸ್‌ವ್ಯಾಗನ್ ಪೊಲೊ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಆಲ್‌ಟ್ರೊಜ್ ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮಾದರಿಯಲ್ಲಿ ಐಟರ್ಬೋ ಮಾದರಿಯನ್ನು ಪರಿಚಯಿಸಲಾಗಿದೆ. ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಹೊಸ ಆವೃತ್ತಿಯು ಮುಂದಿನ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಐಟರ್ಬೋ ಮಾದರಿಯನ್ನು ಅನಾವರಣಗೊಳಿಸುವ ಮೂಲಕ ಬುಕ್ಕಿಂಗ್ ಪ್ರಕ್ರಿಯೆಯನ್ನು ನಾಳೆಯಿಂದ ಆರಂಭಿಸುವುದಾಗಿ ಮಾಹಿತಿ ನೀಡಿರುವ ಟಾಟಾ ಕಂಪನಿಯು ಇದೇ ತಿಂಗಳು 22ರಂದು ಅಧಿಕೃತವಾಗಿ ಬಿಡುಗಡೆಗೊಳಿಸಲಿದೆ.

ಹೊಸ ಐ-ಟರ್ಬೋ ಆಲ್‌ಟ್ರೊಜ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ಮತ್ತು ವಿವಿಧ ಹೊಸ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಉತ್ತಮ ಮಟ್ಟದ ಎಂಜಿನ್ ಆಯ್ಕೆ ಮತ್ತು ಸುಧಾರಿತ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಸದ್ಯ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ. ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹೊಸ ಟಾಟಾ ಆಲ್‌ಟ್ರೊಜ್ ಐಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಗರಿಷ್ಠ 108-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

ಐಟರ್ಬೋ ಮಾದರಿಯು ಸಿಟಿ ಮತ್ತು ಸ್ಟೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಸದ್ಯಕ್ಕೆ ಹೊಸ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವ ಕಂಪನಿಯು ಶೀಘ್ರದಲ್ಲೇ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಿದೆಯೆಂತೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಎಂಜಿನ್ ಮೂಲಕ ಐಟರ್ಬೋ ಮಾದರಿಯು ಕೇವಲ 12 ಸೇಕೆಂಡುಗಳಲ್ಲಿ ಸೊನ್ನೆಯಿಂದ ನೂರು ಕಿಮೀ ವೇಗಪಡೆದುಕೊಳ್ಳಲಿದ್ದು, ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 18.13 ಕಿಮೀ ಮೈಲೇಜ್ ಹಿಂದಿರುಗಿಸಲಿದೆ.

ಇನ್ನು ಟಾಟಾ ಆಲ್‌ಟ್ರೊಜ್ ಐಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಲಭ್ಯವಿರಲಿದ್ದು, ಹಾರ್ಬಲ್ ಬ್ಲ್ಯೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಅತ್ಯುತ್ತಮ ಲೆದರ್ ಆಸನಗಳು, ಕನೆಕ್ಟೆಡ್ ಟೆಕ್ನಾಲಜಿ, ಐರಾ ವಾಯ್ಸ್ ಅಸಿಸ್ಟಂಟ್, ಬ್ಲ್ಯಾಕ್ ಆ್ಯಂಡ್ ಗ್ರೆ ಇಂಟಿರಿಯರ್ ಮತ್ತು ಎಕ್ಸ್‌ಪ್ರೆಸ್ ಕೂಲ್ ಸೌಲಭ್ಯ ಪಡೆದುಕೊಂಡಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆಲ್‌ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ಹೊಸ ಎಂಜಿನ್ ಆಯ್ಕೆಯೊಂದಿಗೆ ತುಸು ದುಬಾರಿಯಾಗಿರಲಿದೆ.