ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಳೆದ ತಿಂಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಟಾಟಾ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಟಾಟಾ ಕಾರುಗಳ ಸರಣಿಯಲ್ಲಿರುವ ಜನಪ್ರಿಯ ಆಲ್‌‌ಟ್ರೊಜ್ ಕಾರಿಗೂ ಮಾರಾಟದಲ್ಲಿಯು ಭರ್ಜರಿಯಾಗಿ ಬೇಡಿಕೆಯನ್ನು ಪಡೆದುಕೊಂಡಿದೆ. 2021ರ ಜನವರಿ ತಿಂಗಳಲ್ಲಿ ಆಲ್‌‌ಟ್ರೊಜ್ ಮಾದರಿಯ 7,378 ಯುನಿಟ್‌ಗಳು ಮಾರಾಟವಾಗಿವೆ. ವರ್ಷದಿಂದ ವರ್ಷಕ್ಕೆ, ಮಾರಾಟದಲ್ಲಿ ಶೇ.63.77 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು 2020ರ ಡಿಸೆಂಬರ್‌ ತಿಂಗಳಲ್ಲಿ ಆಲ್‌‌ಟ್ರೊಜ್ ಮಾದರಿಯ 6,600 ಯುನಿಟ್‌ಗಳು ಮಾರಾಟವಾಗಿತ್ತು.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

2020ರ ಡಿಸೆಂಬರ್‌ ತಿಂಗಳ ಮಾರಾಟವನ್ನು ಕೆಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.11.79 ರಷ್ಟು ಬೆಳವಣಿಗೆ ಸಾಧಿಸಿದೆ. ಕಳೆದ ತಿಂಗಳು ಟಾಟಾ ಆಲ್‌‌ಟ್ರೊಜ್ ಮಾರಾಟದಲ್ಲಿ ಗರಿಷ್ಠ ಮಾಸಿಕ ಮಾರಾಟವನ್ನು ಸಾಧಿಸಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಹೊಸ 'ಐ-ಟರ್ಬೊ' ರೂಪಾಂತರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿ ಮಾರಾಟದಲ್ಲಿ ಮತ್ತಷ್ಟು ಬೂಸ್ಟ್ ನೀಡಿದ ಹಾಗೆ ಆಗಿದೆ. ವಿಶೇಷವೆಂದರೆ ಭಾರತದಲ್ಲಿ ವಾಹನ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಅರಿವಿನೊಂದಿಗೆ ಟಾಟಾ ಕಾರುಗಳು ಖರೀದಿದಾರರಲ್ಲಿ ಬೇಡಿಕೆಯ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

2020ರಲ್ಲಿ, ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ ಟಾಟಾ ಆಲ್‌‌ಟ್ರೊಜ್ ಅನ್ನು ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಹ್ಯಾಚ್‌ಬ್ಯಾಕ್ ವಯಸ್ಕ ನಿವಾಸಿಗಳಿಗೆ 5-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಮಕ್ಕಳ ಸುರಕ್ಷತೆಗಾಗಿ 3-ಸ್ಟಾರ್ ರೇಟಿಂಗ್ ಗಳಿಸಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಸುರಕ್ಷಿತ ಹ್ಯಾಚ್‌ಬ್ಯಾಕ್ ಆಗಿದೆ. ಹೊಸ ಟಾಟಾ ಆಲ್‌‌ಟ್ರೊಜ್ ಕಾರಿನ ಬೆಲೆಯು ನವದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.5.69 ಲಕ್ಷದಿಂದ ರೂ.9.45 ಲಕ್ಷಗಳಾಗಿದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಮೂರು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಮೊದಲನೆಯದು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಗಿದ್ದು ಇದು 86 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಎರಡನೆಯದು 1.5-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಆಗಿದ್ದು, ಈ ಎಂಜಿನ್ 90 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಮೂರನೆಯದು 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದ್ದು, ಇದು 110 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸಿದ ಟಾಟಾ ಆಲ್‌‌ಟ್ರೊಜ್

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಟಾಟಾ ಆಲ್‌‌ಟ್ರೊಜ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಬಲೆನೊ, ಹ್ಯುಂಡೈ ಐ20, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Tata Altroz Records 63% Sales Growth In Jan 2021, Highest Ever Monthly Sales. Read In Kannada.
Story first published: Saturday, February 6, 2021, 15:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X