ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಕಳೆದ ತಿಂಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ವರ್ಷದಿಂದ ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಕಾರುಗಳು ಭರ್ಜರಿ ಬೇಡಿಕೆಯನ್ನು ಪಡೆದುಕೊಳ್ಳುತ್ತಿವೆ.

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಸ್ವದೇಶಿ ವಾಹನ ತಯಾರಕರ ಜನಪ್ರಿಯ ಆಲ್‌‌ಟ್ರೊಜ್ ಕಾರಿನ ಮಾರಾಟದಲ್ಲಿಯು ಭರ್ಜರಿಯಾಗಿ ಬೇಡಿಕೆಯನ್ನು ಪಡೆದುಕೊಂಡಿದೆ. 2021ರ ಮಾರ್ಚ್ ತಿಂಗಳಲ್ಲಿ ಆಲ್‌‌ಟ್ರೊಜ್ ಮಾದರಿಯ7,550 ಯುನಿಟ್‌ಗಳು ಮಾರಾಟವಾಗಿವೆ. ಇನ್ನು 2020ರ ಮಾರ್ಚ್ ತಿಂಗಳಲ್ಲಿ ಆಲ್‌‌ಟ್ರೊಜ್ 1,147 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.558ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಟಾಟಾ ಆಲ್‌‌ಟ್ರೊಜ್ ಹೊಸ 'ಐ-ಟರ್ಬೊ' ರೂಪಾಂತರವನ್ನು ಇತ್ತೀಚೆಗೆ ಬಿಡುಗಡೆಗೊಳಿಸಿ ಮಾರಾಟದಲ್ಲಿ ಮತ್ತಷ್ಟು ಬೂಸ್ಟ್ ಮಾಡಿದೆ. ವಿಶೇಷವೆಂದರೆ ಭಾರತದಲ್ಲಿ ವಾಹನ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಅರಿವಿನೊಂದಿಗೆ ಟಾಟಾ ಕಾರುಗಳು ಖರೀದಿದಾರರಲ್ಲಿ ಬೇಡಿಕೆಯ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿವೆ ಎಂದು ಹೇಳಬಹುದು.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ನಲ್ಲಿ ಟಾಟಾ ಆಲ್‌‌ಟ್ರೊಜ್ ಅನ್ನು ಟೆಸ್ಟ್ ಮಾಡಲಾಗಿದೆ. ಇದರಲ್ಲಿ ಹ್ಯಾಚ್‌ಬ್ಯಾಕ್ ವಯಸ್ಕರ ವಿಭಾಗದಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್ ಅನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಮಕ್ಕಳ ಸುರಕ್ಷತೆಗಾಗಿ 3-ಸ್ಟಾರ್ ರೇಟಿಂಗ್ ಗಳಿಸಿದೆ.

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಟಾಟಾ ಆಲ್‌‌ಟ್ರೊಜ್ ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಸುರಕ್ಷಿತ ಹ್ಯಾಚ್‌ಬ್ಯಾಕ್ ಆಗಿದೆ. ಹೊಸ ಟಾಟಾ ಆಲ್‌‌ಟ್ರೊಜ್ ಕಾರಿನ ಬೆಲೆಯು ನವದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.5.69 ಲಕ್ಷದಿಂದ ರೂ.9.45 ಲಕ್ಷಗಳಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಎಲ್‌ಇಡಿ ಟೈಲ್‌ಲೈಟ್ ಮತ್ತು ಅಲಾಯ್ ವ್ಹೀಲ್‌ಗಳನ್ನು ಒಳಗೊಂಡಿವೆ.

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಟಾಟಾ ಆಲ್‌‌ಟ್ರೊಜ್ ಮೂರು ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಮೊದಲನೆಯದು 1.2-ಲೀಟರ್ ಪೆಟ್ರೋಲ್ ಎಂಜಿನ್ ಆಗಿದ್ದು. ಇದು 86 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಎರಡನೆಯದು 1.5-ಲೀಟರ್ ಟರ್ಬೊ-ಡೀಸೆಲ್ ಎಂಜಿನ್ ಆಗಿದ್ದು, ಈ ಎಂಜಿನ್ 90 ಬಿಹೆಚ್‍ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಮೂರನೇಯ 1.2-ಲೀಟರ್ ಪವರ್ ಫುಲ್ ಟರ್ಬೊ-ಪೆಟ್ರೋಲ್ ಎಂಜಿನ್ ಆಗಿದ್ದು, ಇದು 110 ಬಿಹೆಚ್‍ಪಿ ಪವರ್ ಮತ್ತು 140 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಮಾರ್ಚ್ ತಿಂಗಳಿನಲ್ಲಿ ಟಾಟಾ ಆಲ್‌‌ಟ್ರೊಜ್ ಕಾರು ಮಾರಾಟದಲ್ಲಿ ಶೇ.558ರಷ್ಟು ಹೆಚ್ಚಳ

ಟಾಟಾ ಆಲ್‌‌ಟ್ರೊಜ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ, ಹ್ಯುಂಡೈ ಐ20, ಫೋಕ್ಸ್‌ವ್ಯಾಗನ್ ಪೊಲೊ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಪ್ರಬಲ ಪೈಪೋಟಿ ನೀಡುತ್ತದೆ.

Article Published On: Thursday, April 8, 2021, 13:13 [IST]
English summary
Tata Altroz Posted A 558% Growth In March 2021. Read In Kananda.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+