ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಕಳೆದ ವರ್ಷ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಟಾಟಾ ಆಲ್ಟ್ರೋಜ್ ಕಾರು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಈ ಕಾರಣದಿಂದಾಗಿ ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು 12 ತಿಂಗಳಲ್ಲಿ 50,000ಕ್ಕೂ ಹೆಚ್ಚು ಯೂನಿಟ್ ಮಾರಾಟವನ್ನು ದಾಖಲಿಸಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಈ ಮಾರಾಟದಲ್ಲಿ ಪೆಟ್ರೋಲ್ ಮಾದರಿಯ ಪಾಲು 90%ನಷ್ಟಿದೆ. ಟಾಟಾ ಆಲ್ಟ್ರೋಜ್ ಸದ್ಯಕ್ಕೆ ದೇಶದಲ್ಲಿರುವ ಅತ್ಯಂತ ಸುರಕ್ಷಿತ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಕಾರ್ ಅನ್ನು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್'ನೊಂದಿಗೆ ಮಾರಾಟ ಮಾಡಲಾಗುತ್ತದೆ. ಉಳಿದ ಕಂಪನಿಯ ಕಾರುಗಳಿಗೆ ಹೋಲಿಸಿದರೆ ಈ ಕಾರು ಕೈಗೆಟುಕುವ ಬೆಲೆ ಹಾಗೂ ಹಲವಾರು ಹೊಸ ಫೀಚರ್'ಗಳನ್ನು ಹೊಂದಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

2020ರ ಜನವರಿಯಿಂದ ಡಿಸೆಂಬರ್'ವರೆಗೆ 47.076 ಯೂನಿಟ್ ಆಲ್ಟ್ರೋಜ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ಇವುಗಳಲ್ಲಿ 44,427 ಯುನಿಟ್ ಪೆಟ್ರೋಲ್ ಮಾದರಿಗಳಾದರೆ 2,649 ಯುನಿಟ್ ಡೀಸೆಲ್ ಮಾದರಿಗಳಾಗಿವೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಆಲ್ಟ್ರೋಜ್ ಐ-ಟರ್ಬೊ ಕಾರ್ ಅನ್ನು ಪರಿಚಯಿಸಿದೆ. ಕಂಪನಿಯು ಈ ಕಾರಿನ ಮೂಲಕ ಮಾರಾಟದಲ್ಲಿ ಹೆಚ್ಚಳವನ್ನು ನಿರೀಕ್ಷಿಸುತ್ತಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಸೆಗ್ ಮೆಂಟಿನಲ್ಲಿ ಆಲ್ಟ್ರೋಜ್ ಕಾರು, ಮಾರುತಿ ಸುಜುಕಿ ಬಲೆನೊ, ಹ್ಯುಂಡೈ ಐ 20, ಟೊಯೊಟಾ ಗ್ಲಾಂಜಾ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಈ ಸೆಗ್ ಮೆಂಟಿನಲ್ಲಿ ಆಲ್ಟ್ರೋಜ್ ಕಾರು 17%ನಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಕಂಪನಿಯು ಹೊಸ ಎಂಜಿನ್‌ಗಳೊಂದಿಗೆ ಪೆಟ್ರೋಲ್ ಹಾಗೂ ಡೀಸೆಲ್ ಕಾರುಗಳಲ್ಲಿ ಎಕ್ಸ್‌ ಝಡ್ ಪ್ಲಸ್ ಮಾದರಿಯನ್ನು ಬಿಡುಗಡೆಗೊಳಿಸಿದೆ. ಇದರಿಂದಾಗಿ ಟಾಟಾ ಆಲ್ಟ್ರೋಜ್ ಮಾರಾಟವು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಗಳಿವೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಟಾಟಾ ಆಲ್ಟ್ರೋಜ್ ಐಟರ್ಬೊ ಕಾರಿನಲ್ಲಿ 1.2 ಲೀಟರಿನ ಟರ್ಬೊ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 114 ಬಿಹೆಚ್‌ಪಿ ಪವರ್ ಹಾಗೂ 140 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್'ನೊಂದಿಗೆ 5 ಸ್ಪೀಡಿನ ಮ್ಯಾನುವಲ್ ಗೇರ್ ಬಾಕ್ಸ್ ಜೋಡಿಸಲಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಕಂಪನಿಯು ಶೀಘ್ರದಲ್ಲೇ 7 ಡಿಸಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನ ಆಯ್ಕೆಯನ್ನು ಪರಿಚಯಿಸಲಿದೆ. ಇದರಿಂದಾಗಿ ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳು ಸಿಗುತ್ತವೆ. ಇದರ ಮಾರಾಟವು ಉತ್ತಮವಾಗಿ ನಡೆಯುತ್ತಿದ್ದು, ಕಂಪನಿಯು ಅದನ್ನು ನಿರಂತರವಾಗಿ ನವೀಕರಿಸುತ್ತಿದೆ.

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

2020ರ ನವೆಂಬರ್‌ ತಿಂಗಳಿನಲ್ಲಿ 6,260 ಯುನಿಟ್ ಮಾರಾಟದೊಂದಿಗೆ ಆಲ್ಟ್ರೋಜ್ ಕಾರು ಮಾರಾಟದಲ್ಲಿ ಪ್ರಥಮ ಸ್ಥಾನದಲ್ಲಿತ್ತು. ಜನವರಿಯಲ್ಲಿ ಈ ಕಾರು ಎಷ್ಟು ಪ್ರಮಾಣದಲ್ಲಿ ಮಾರಾಟವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಮಾರಾಟದಲ್ಲಿ ಹೊಸ ಮೈಲಿಗಲ್ಲು ದಾಟಿದ ಟಾಟಾ ಆಲ್ಟ್ರೋಜ್ ಕಾರು

ಟಾಟಾ ಆಲ್ಟ್ರೋಜ್ ಟರ್ಬೊ-ಪೆಟ್ರೋಲ್ ಮಾದರಿಯ ಬೆಲೆ ಎಕ್ಸ್ ಶೋರೂಂ ದರದಂತೆ ರೂ.7.74 ಲಕ್ಷಗಳಾದರೆ, ಟಾಪ್-ಎಂಡ್ ಮಾದರಿಯ ಬೆಲೆ ಎಕ್ಸ್ ಶೋರೂಂ ದರದಂತೆ ರೂ.8.86 ಲಕ್ಷಗಳಾಗಿದೆ. ಟರ್ಬೊ-ಪೆಟ್ರೋಲ್ ಆವೃತ್ತಿಯನ್ನು ಎಕ್ಸ್‌ಟಿ, ಎಕ್ಸ್‌ ಝಡ್ ಹಾಗೂ ಎಕ್ಸ್‌ ಝಡ್ ಪ್ಲಸ್ ಎಂಬ ಮೂರು ಮಾದರಿಗಳಲ್ಲಿ ಬಿಡುಗಡೆಗೊಳಿಸಲಾಗಿದೆ.

Most Read Articles

Kannada
English summary
Tata Altroz reaches new milestone in sales. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X