ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್‌ನಲ್ಲಿ ಪೆಟ್ರೋಲ್ ಟರ್ಬೋ ಆವೃತ್ತಿಯನ್ನು ಇದೇ ತಿಂಗಳು 13ರಂದು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಟೀಸರ್‌ ಅನಾವರಣಗೊಂದಿಗೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಕೂಡಾ ಆರಂಭಿಸಿದೆ.

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಹೊಸ ಆಲ್‌ಟ್ರೊಜ್ ಟರ್ಬೋ ವರ್ಷನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಐ20 ಟರ್ಬೋ ಮತ್ತು ಮಾರುತಿ ಸುಜುಕಿ ಬಲೆನೊ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್ ಮತ್ತು ವಿವಿಧ ಹೊಸ ತಾಂತ್ರಿಕ ಅಂಶಗಳನ್ನು ಹೊಂದಿರಲಿದೆ.

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಸದ್ಯ ಆಲ್‌ಟ್ರೊಜ್ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಎಂಜಿನ್ ಮಾದರಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 110-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಟರ್ಬೋ ಆವೃತ್ತಿಯು ಟಾಪ್ ಎಂಡ್‌ನಲ್ಲಿ ಪ್ರಮುಖ ಎರಡು ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಐ20 ಟರ್ಬೋ ಮಾದರಿಗೆ ಭರ್ಜರಿ ಪೈಪೋಟಿ ನೀಡಿಲಿದೆ.

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಟಾಪ್ ಎಂಡ್ ಪೆಟ್ರೋಲ್ ಕಾರು ಮಾದರಿಗಳು ಎಕ್ಸ್‌ಶೋರೂಂ ದರದಂತೆ ರೂ.7.38 ಲಕ್ಷ ದಿಂದ ರೂ. 7.89 ಲಕ್ಷ ಅಂತರದಲ್ಲಿ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ಸಾಮಾನ್ಯ ಮಾದರಿಗಳಿಂತ ತುಸು ದುಬಾರಿಯಾಗಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಆದರೆ ಹ್ಯುಂಡೈ ಐ20 ಟರ್ಬೋ ಪೆಟ್ರೋಲ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ದರದಂತೆ ಆರಂಭಿಕವಾಗಿ ರೂ. 8.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.17 ಲಕ್ಷ ಬೆಲೆ ಹೊಂದಿದ್ದು, ಒಂದೇ ಮಾದರಿಯ ಎಂಜಿನ್ ಪಡೆದುಕೊಳ್ಳುತ್ತಿರುವ ಆಲ್‌ಟ್ರೊಜ್ ಟರ್ಬೋ ಮಾದರಿಯು ಈ ವಿಚಾರದಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಇನ್ನು ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದ್ದು, ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಟರ್ಬೋ ಮಾದರಿಯು ಸಾಮಾನ್ಯ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯ ಪಡೆದುಕೊಳ್ಳಲಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಟಾಟಾ ಆಲ್‌ಟ್ರೊಜ್ ಪೆಟ್ರೋಲ್ ಟರ್ಬೋ ವರ್ಷನ್ ಖರೀದಿಗೆ ಬುಕ್ಕಿಂಗ್ ಶುರು

ಆಲ್‌ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ನಂತರ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Article Published On: Friday, January 1, 2021, 18:19 [IST]
English summary
Tata Altroz Turbo Petrol Bookings Open. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+