ಕಾರುಗಳ ಖರೀದಿಗಾಗಿ ಕೊಟಕ್ ಮಹೀಂದ್ರಾ ಬ್ಯಾಂಕ್ ಜೊತೆಗೂಡಿ ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಕರೋನಾ ವೈರಸ್ ಪರಿಣಾಮ ಇಳಿಕೆ ಕಂಡಿರುವ ಹೊಸ ವಾಹನ ಮಾರಾಟವು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ದೇಶದ ಮುಂಚೂಣಿ ಕಾರು ತಯಾರಿಕಾ ಕಂಪನಿಯಾದ ಟಾಟಾ ಮೋಟಾರ್ಸ್ ತನ್ನ ಪ್ರಮುಖ ಕಾರುಗಳ ಖರೀದಿಯನ್ನು ಉತ್ತೇಜಿಸಲು ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಸದ್ಯ ಮೂರನೇ ಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷಕ್ಕಿಂತಲೂ ಹೆಚ್ಚು ಬೆಳವಣಿಗೆ ಸಾಧಿಸುತ್ತಿದ್ದು, ಕೋವಿಡ್ 2ನೇ ಅಲೆ ಪರಿಣಾಮ ತಗ್ಗಿರುವ ವಾಹನಗಳ ಮಾರಾಟವನ್ನು ಸುಧಾರಿಸಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಈಗಾಗಗಲೇ ವಿವಿಧ ಬ್ಯಾಂಕ್‌ಗಳ ಜೊತೆಗೂಡಿ ಹಲವು ಸರಳ ಸಾಲಸೌಲಭ್ಯಗಳ ಆಯ್ಕೆ ನೀಡುತ್ತಿದ್ದು, ಇದೀಗ ಕೊಟಕ್ ಮಹೀಂದ್ರಾ ಬ್ಯಾಂಕ್ ಜೊತೆಗೂಡಿ ಹೊಸ ಮಾದರಿಯ ಸಾಲಸೌಲಭ್ಯಗಳನ್ನು ನೀಡಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಆರ್ಥಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಹೊಸ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿರುವ ಗ್ರಾಹಕರನ್ನು ಸೆಳೆಯಲು ವಿವಿಧ ಬ್ಯಾಂಕ್‌ಗಳ ಜೊತೆಗೂಡಿ ಹಲವಾರು ಆಕರ್ಷಕ ಲೋನ್ ಆಫರ್‌ಗಳನ್ನು ನೀಡುತ್ತಿರುವ ಟಾಟಾ ಕಂಪನಿಯು ಕೊಟಕ್ ಮಹೀಂದ್ರಾ ಬ್ಯಾಂಕ್ ಮೂಲಕ ಸರಳ ಸಾಲ ಮರುಪಾವತಿ ಆಯ್ಕೆಗಳನ್ನು ನೀಡುತ್ತಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಹಲವಾರು ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳ ಜೊತೆಗೂಡಿ ವಿವಿಧ ಲೋನ್ ಆಫರ್‌ಗಳನ್ನು ನೀಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸದಾಗಿ ಕೊಟಕ್ ಮಹೀಂದ್ರಾ ಜೊತೆಗೂಡಿ ಗರಿಷ್ಠ ಅವಧಿಗೆ ವಿವಿಧ ಲೋನ್ ಆಫರ್ ನೀಡುತ್ತಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಹೊಸ ಯೋಜನೆಯಿಂದಾಗಿ ವಾಹನ ಮಾರಾಟವನ್ನು ಮತ್ತಷ್ಟು ಸರಳಗೊಳಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಬಡ್ಡಿದರದಲ್ಲಿ ಲೋನ್ ಆಫರ್‌ಗಳನ್ನು ಖಚಿತಪಡಿಸುತ್ತಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಕೊಟಕ್ ಮಹೀಂದ್ರಾ ಬ್ಯಾಂಕ್ ನೀಡುತ್ತಿರುವ ಹೊಸ ಲೋನ್‌ಗಳಲ್ಲಿ ರೆಡ್ ಕಾರ್ಪೆಟ್, ಪ್ರೈಮ್ ವಿಶ್ವಾಸ್ ಮತ್ತು ಕಡಿಮೆ ಇಎಂಐ ಸ್ಕೀಮ್ ಪರಿಚಯಸಿಲಾಗಿದ್ದು, ಕಡಿಮೆ ಇಎಂಐ ಸ್ಕೀಮ್ ಅಡಿಯಲ್ಲಿ ಲೋನ್ ಖರೀದಿಸುವ ಗ್ರಾಹಕರಿಗೆ ಕಾರು ಖರೀದಿ ನಂತರ ಇಎಂಐ ಮರುಪಾವತಿಗಾಗಿ ಮೊದಲ ಮೂರು ತಿಂಗಳು ಅತಿ ಕಡಿಮೆ ಇಎಂಐ ಪಾವತಿಗೆ ಅವಕಾಶ ನೀಡಲಾಗಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಹಾಗೆಯೇ ರೆಡ್ ಕಾರ್ಪೆಟ್, ಪ್ರೈಮ್ ವಿಶ್ವಾಸ್ ಮಾದರಿಗಾಗಿ ಶೇ.90 ರಷ್ಟು ಲೋನ್ ಸೌಲಭ್ಯ ದೊರೆಯಲಿದ್ದು, 5 ರಿಂದ 7 ವರ್ಷಗಳ ತನಕ ಗರಿಷ್ಠ ಮರುಪಾವತಿ ಆಯ್ಕೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಹೊಸ ಇಎಂಐ ಆಯ್ಕೆ ಪರಿಚಯಿಸಿದ ಟಾಟಾ ಮೋಟಾರ್ಸ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ವಾಹನಗಳ ಉತ್ಪಾದನೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಪ್ರಯಾಣಿಕ ವಾಹನಗಳ ಜೊತೆಗೆ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲೂ ಹಲವಾರು ಹೊಸತನದೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

More from DriveSpark

Article Published On: Wednesday, June 23, 2021, 21:01 [IST]
English summary
Tata Partners With Kotak Mahindra For Easy Car Finance. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+