Just In
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಮುಖ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದು, ವಿವಿಧ ಕಾರು ಮಾದರಿಗಳ ಮೇಲೆ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ನೀಡುತ್ತಿದೆ.

ದಸರಾ ಮತ್ತು ದೀಪಾವಳಿ ಆಫರ್‌ಗಳ ನಂತರ ಇದೀಗ ಹೊಸ ವರ್ಷದ ಆಫರ್‌ಗಳನ್ನು ಘೋಷಣೆ ಮಾಡುತ್ತಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಹೊಸ ಆಫರ್‌ಗಳು ಟಾಟಾ ನಿರ್ಮಾಣದ ಟಿಯಾಗೊ, ಟಿಗೋರ್, ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಖರೀದಿಯ ಅನ್ವಯವಾಗಲಿದ್ದು, ಹೊಸ ಆಫರ್‌ಗಳು ಈ ತಿಂಗಳ 28ರ ತನಕ ಲಭ್ಯವಿರಲಿವೆ.

ಟಾಟಾ ಮೋಟಾರ್ಸ್ ಕಂಪನಿಯು ಘೋಷಣೆ ಮಾಡಿರುವ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 15 ಸಾವಿರದಿಂದ ಗರಿಷ್ಠ ರೂ. 65 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೆ ರೂ. 25 ಸಾವಿರ ಆಫರ್ ಘೋಷಿಸಲಾಗಿದ್ದು, ರೂ.25 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೆ ಗ್ರಾಹಕರು ರೂ.30 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ. ರೂ.30 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ.15 ಸಾವಿರ ಡಿಸ್ಕೌಂಟ್ ಒಳಗೊಂಡಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿವೆ.

ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.84 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.49 ಲಕ್ಷದಿಂದ ರೂ. 7.63 ಲಕ್ಷ ಬೆಲೆ ಹೊಂದಿದೆ.

ಇನ್ನು ಟಾಟಾ ಹೊಸ ವರ್ಷದ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮಾತ್ರ ನೀಡುತ್ತಿದೆ. ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.09 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ವರ್ಷದ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ಟಾಟಾ ಕಂಪನಿಯು ರೂ. 65 ಸಾವಿರ ಆಫರ್ ನೀಡುತ್ತಿದ್ದು, ರೂ.65 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

ಹೊಸ ಆಫರ್‌ಗಳು ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ಮಾತ್ರ ಅನ್ವಯವಾಗಲಿದ್ದು, ಬ್ಲ್ಯಾಕ್ ಎಡಿಷನ್ ಮತ್ತು ಕ್ಯಾಮೋ ಎಡಿಷನ್ ಮೇಲೆ ಕೇವಲ ಎಕ್ಸ್‌ಚೆಂಜ್ ಬೋನಸ್ ಮಾತ್ರ ಅನ್ವಯವಾಗಲಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹ್ಯಾರಿಯರ್ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.45 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಖರೀದಿದಾರರಿಗೆ ಉತ್ತಮ ಆಫರ್ ಲಭ್ಯವಿದೆ.