ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತರಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ನೆಕ್ಸಾನ್ ಕಾರಿನ ಡೀಸೆಲ್ ಮಾದರಿಯಲ್ಲಿ ಕೆಲವು ರೂಪಾಂತರಗಳ ಸ್ಥಗಿತ ಮಾಡುವ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳ ವರದಿ ಆಧರಿಸಿ ಸ್ಪಷ್ಟನೆ ನೀಡಿರುವ ಟಾಟಾ ಕಂಪನಿಯು ಯಾವುದೇ ರೂಪಾಂತರಗಳನ್ನು ಸ್ಥಗಿತಗೊಳಿಸುತ್ತಿಲ್ಲ ಎಂದಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ನೆಕ್ಸಾನ್ ಕಾರಿನ ಪ್ರಮುಖ ಡೀಸೆಲ್ ವೆರಿಯೆಂಟ್‌ಗಳ ಬುಕ್ಕಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿದ್ದರಿಂದ ನೆಕ್ಸಾನ್ ಪ್ರಮುಖ ವೆರಿಯೆಂಟ್ ಇನ್ಮುಂದೆ ಖರೀದಿಗೆ ಲಭ್ಯವಿರುವುದಿಲ್ಲ ಎನ್ನುವ ಸುದ್ದಿಗಳು ಪ್ರಕಟಗೊಂಡಿದ್ದವು. ಆದರೆ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದ್ದ ವೆರಿಯೆಂಟ್‌ಗಳನ್ನು ಹೊಸ ತಾಂತ್ರಿಕ ಅಂಶಗಳೊಂದಿಗೆ ಉನ್ನತೀಕರಿಸುತ್ತಿರುವುದಾಗಿ ಸ್ಪಷ್ಟನ ನೀಡಿದ್ದು, ಸದ್ಯಕ್ಕೆ ಬುಕ್ಕಿಂಗ್ ಸ್ಥಗಿತಗೊಳಿಸಲಾದ ವೆರಿಯೆಂಟ್‌ಗಳು ಶೀಘ್ರದಲ್ಲೇ ಖರೀದಿಗೆ ಲಭ್ಯವಿರಲಿದೆ ಎಂದಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಶೀಘ್ರದಲ್ಲೇ ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಕಾರು ಮಾದರಿಗಾಗಿ ಮತ್ತಷ್ಟು ಬೇಡಿಕೆ ಕಾಯ್ದಕೊಳ್ಳುವ ನಿಟ್ಟಿನಲ್ಲಿ ಹೊಸ ಬಣ್ಣದ ಆಯ್ಕೆ, ಹೊಸ ವಿನ್ಯಾಸದ 16 ಇಂಚಿನ ಅಲಾಯ್ ವೀಲ್ಹ್ ಮತ್ತು ವಾಯ್ಸ್ ಅಸಿಸ್ಟ್ ಸಿಸ್ಟಂ ಸೌಲಭ್ಯದಲ್ಲೂ ಗುರುತರ ಬದಲಾವಣೆ ತರಲು ಸಿದ್ದವಾಗಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.95 ಲಕ್ಷ ಬೆಲೆ ಹೊಂದಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರುವ ನೆಕ್ಸಾನ್ ಕಾರು ಮಾದರಿಯು 35ಕ್ಕೂ ಹೆಚ್ಚು ವೆರಿಯೆಂಟ್ ಹೊಂದಿದ್ದು, ಮಧ್ಯಮ ಕ್ರಮಾಂಕದಲ್ಲಿರುವ ಮಾದರಿಗಳನ್ನು ಬದಲಿಸಲಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿನ ನೆಕ್ಸಾನ್ ಕಾರು ಮಾದರಿಯು ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಮೇ ಅವಧಿಯಲ್ಲಿ ಒಟ್ಟು 6 ಸಾವಿರಕ್ಕೂ ಅಧಿಕ ಯುನಿಟ್ ಮಾರಾಟದೊಂದಿಗೆ ನೆಕ್ಸಾನ್ ಕಾರು ಮಾದರಿಯು ಟಾಟಾ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಮಾರ್ಚ್ ಅವಧಿಗೆ ಹೋಲಿಕೆ ಮಾಡಿದ್ದಲ್ಲಿ ತುಸು ಕಡಿಮೆ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದರೂ ಕೋವಿಡ್‌ನಿಂದಾಗಿ ಆರ್ಥಿಕ ಹಿಂಜರಿತದಲ್ಲೂ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ ಎನ್ನಬಹುದು.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಕಾರಣವಾಗಿದೆ.

ನೆಕ್ಸಾನ್ ಆಯ್ದ ಡೀಸೆಲ್ ರೂಪಾಂತಗಳ ಸ್ಥಗಿತವಿಲ್ಲವೆಂದ ಟಾಟಾ ಮೋಟಾರ್ಸ್

ಗ್ರಾಹಕರ ವಿಶ್ವಾಸದಂತೆ ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಹೊಸ ಕಾರುಗಳೊಂದಿಗೆ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Tata Motors clarification on Nexon diesel variants discontinued. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X