ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಸಫಾರಿ ಕಾರು ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ತಾಂತ್ರಿಕ ಅಂಶಗಳ ಆಯ್ಕೆ ಪಡೆದುಕೊಳ್ಳಲಿದ್ದು, ಇದಕ್ಕಾಗಿ ಕಂಪನಿಯು ಹೊಸ ವೆರಿಯೆಂಟ್ ಪರಿಚಯಿಸಲು ಸಜ್ಜಾಗುತ್ತಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಗಳೊಂದಿಗೆ ಮಾರಾಟಗೊಳ್ಳುತ್ತಿರುವ ಟಾಟಾ ಸಫಾರಿ ಎಸ್‌ಯುವಿಯು ಶೀಘ್ರದಲ್ಲೇ ಮತ್ತೊಂದು ಹೊಸ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಟಾಟಾ ಕಂಪನಿಯು ಹೊಸ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಕಳೆದ ಫೆಬ್ರವರಿಯಲ್ಲಿ ಬಿಡುಗಡೆಯಾಗಿದ್ದ ಸಫಾರಿ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.81 ಲಕ್ಷ ಬೆಲೆ ಪಡೆದುಕೊಂಡಿದ್ದು, ಬಿಡುಗಡೆಯಾಗಲಿರುವ ಹೊಸ ಕಾರು ಮಾದರಿಯು ಮಧ್ಯಮ ಕ್ರಮಾಂಕದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಸಫಾರಿ ಕಾರು ಮಾದರಿಯು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ ಪಡೆದುಕೊಂಡಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಸ್ಟ್ಯಾಂಡರ್ಡ್ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 14.99 ಲಕ್ಷದಿಂದ ರೂ. 21.61 ಲಕ್ಷ ಬೆಲೆ ಹೊಂದಿದ್ದಲ್ಲಿ ಅಡ್ವೆಂಚರ್ ಪೆರಸೊನಾ ಸಫಾರಿ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20.56 ಲಕ್ಷದಿಂದ ರೂ. 21.81 ಲಕ್ಷ ಬೆಲೆ ಪಡೆದುಕೊಂಡಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಒಮೆಗಾ ಪ್ಲ್ಯಾಟ್‌ಫಾರ್ಮ್‌ನಿಂದಾಗಿ ಟಾಟಾ ಹೊಸ ಕಾರಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೊಸ ಕಾರಿನ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗರಿಷ್ಠ ಸುರಕ್ಷತೆಗೆ ಒತ್ತು ನೀಡಿದ್ದು, ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಫ್ರಂಟ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

ಸಫಾರಿ ಕಾರಿನ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಹೈ ಎಂಡ್ ಕಾರು ಮಾದರಿಗಳಲ್ಲಿ ಸದ್ಯ ಡೀಸೆಲ್ ಕಾರುಗಳನ್ನು ಮಾತ್ರ ಹೊಂದಿರುವ ಟಾಟಾ ಕಂಪನಿಯು ಪೆಟ್ರೋಲ್ ಮಾದರಿಗಳ ಬಿಡುಗಡೆಗೂ ಸಿದ್ದತೆ ನಡೆಸುತ್ತಿದ್ದು, ಹೊಸ ಎಮಿಷನ್‌ನಂತೆ ಕಾರುಗಳ ಮಾರಾಟದಲ್ಲಿ ನಿರಂತರವಾಗಿ ಬದಲಾವಣೆಗಳನ್ನು ಪರಿಚಯಿಸುತ್ತಿದೆ.

Most Read Articles

Kannada
English summary
Tata Motors Continues Safari Testing With Camouflage. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X