ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಪಡೆದುಕೊಂಡಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ನವೆಂಬರ್ ಅವಧಿಯಲ್ಲಿ ಗರಿಷ್ಠ ಮಟ್ಟದ ಬೇಡಿಕೆ ಪಡೆದುಕೊಂಡಿದ್ದು, ಕಂಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ನವೆಂಬರ್ ಅವಧಿಯಲ್ಲಿ ಕಂಪನಿಯು ಇದುವರೆಗೆ ಇವಿ ಕಾರು ಮಾರಾಟದಲ್ಲಿಯೇ ಹೆಚ್ಚಿನ ಬೇಡಿಕೆ ಪಡೆದುಕೊಂಡಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಕಂಪನಿಯು ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮುಲಕ ಕ್ಯಾಬ್ ಸೇವಾ ವಿಭಾಗದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

2021ರ ನವೆಂಬರ್ ಅವಧಿಯಲ್ಲಿನ ಒಟ್ಟಾರೆ ಕಾರು ಮಾರಾಟದಲ್ಲಿ ಶೇ. 38ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇವಿ ಕಾರುಗಳ ಮಾರಾಟದಲ್ಲಿ ಶೇ. 324ರಷ್ಟು ಬೆಳವಣಿಗೆ ಸಾಧಿಸಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ನವೆಂಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ಬಾರಿಗೆ 1,751 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ನವೆಂಬರ್ ಅವಧಿಯಲ್ಲಿನ ಇವಿ ಕಾರು ಮಾರಾಟಕ್ಕಿಂತಲೂ ಶೇ.324 ರಷ್ಟು ಹೆಚ್ಚಳವಾಗಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು 2019ರಲ್ಲಿ ಮೊದಲ ಬಾರಿಗೆ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 13 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ನೆಕ್ಸಾನ್ ಇವಿ ಕಾರು ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ನೆಕ್ಸಾನ್ ಇವಿ ಕಾರು ಅಗ್ರಸ್ಥಾನದಲ್ಲಿದ್ದು, ಕಂಪನಿಯು ಮಾರಾಟಗೊಳಿಸಿರುವ 13 ಸಾವಿರ ಇವಿ ಕಾರುಗಳಲ್ಲಿ ಶೇ. 70ರಷ್ಟು ಪಾಲು ನೆಕ್ಸಾನ್ ಇವಿ ಹೊಂದಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ನವೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಈ ಮೊದಲು ಪ್ರತಿ ತಿಂಗಳಿಗೆ 300 ರಿಂದ 400 ಯುನಿಟ್ ಸರಾಸರಿಯಾಗಿ ಮಾರಾಟಗೊಳ್ಳುತ್ತಿದ್ದ ಟಾಟಾ ನೆಕ್ಸಾನ್ ಇವಿ ಕಾರು ಇದೀಗ ಪ್ರತಿ ತಿಂಗಳು 1 ಸಾವಿರಕ್ಕೂ ಅಧಿಕ ಯುನಿಟ್ ಮಾರಾಟಗೊಳ್ಳುವ ಮೂಲಕ ಹೊಸ ದಾಖಲೆಗೆ ಕಾರಣವಾಗುತ್ತಿದೆ.

ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ನೆಕ್ಸಾನ್ ಇವಿ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.85 ಲಕ್ಷ ಬೆಲೆ ಪಡೆದುಕೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾದ ಟಿಗೋರ್ ಇವಿ ಹೊಸ ಮಾದರಿಯು ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13.14 ಲಕ್ಷ ಬೆಲೆ ಹೊಂದಿದೆ.

ಗರಿಷ್ಠ ಬೇಡಿಕೆ ಪಡೆದುಕೊಂಡ ಟಾಟಾ ಮೋಟಾರ್ಸ್

ಇನ್ನುಳಿದಂತೆ ಎಕ್ಸ್‌ಪ್ರೆಸ್-ಟಿ ಎಲೆಕ್ಟ್ರಿಕ್ ಕಾರು ಮಾದರಿಯನ್ನು ವಾಣಿಜ್ಯ ಬಳಕೆಗಾಗಿ ಮಾತ್ರ ಪರಿಚಯಿಸಲಾಗಿದ್ದು, ಈ ಕಾರು ಕನಿಷ್ಠ ಪ್ರಮಾಣದ ಫೀಚರ್ಸ್‌ಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 9.54 ಲಕ್ಷದಿಂದ ರೂ. 10.64 ಲಕ್ಷ ಬೆಲೆ ಹೊಂದಿದೆ.

Article Published On: Thursday, December 2, 2021, 10:47 [IST]
English summary
Tata ev cars sales november 324 percent sales growth
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+