ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಟಾಟಾ ಮೋಟಾರ್ಸ್(Tata Motors) ಕಂಪನಿಯು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ತಿಂಗಳಿನಿಂದ ತಿಂಗಳಿಗೆ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸುತ್ತಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-T EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

2021ರ ಅಕ್ಟೋಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ. 39ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 32,339 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ ಇವಿ ಕಾರುಗಳ ಮಾರಾಟವು ಈ ಬಾರಿ ಗಮನಸೆಳೆದಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಅಕ್ಟೋಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ಬಾರಿಗೆ 1,586 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು,ಇದು ಕಳೆದ ವರ್ಷದ ಅಕ್ಟೋಬರ್ ಅವಧಿಯಲ್ಲಿನ ಇವಿ ಕಾರು ಮಾರಾಟಕ್ಕಿಂತಲೂ ಶೇ. 276 ರಷ್ಟು ಹೆಚ್ಚಳವಾಗಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಯತ್ತ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯು 2019ರಲ್ಲಿ ಮೊದಲ ಬಾರಿಗೆ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 13 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ನೆಕ್ಸಾನ್ ಇವಿ ಕಾರು ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ನೆಕ್ಸಾನ್ ಇವಿ ಕಾರು ಅಗ್ರಸ್ಥಾನದಲ್ಲಿದ್ದು, ಕಂಪನಿಯು ಮಾರಾಟಗೊಳಿಸಿರುವ 11 ಸಾವಿರ ಇವಿ ಕಾರುಗಳಲ್ಲಿ ಶೇ. 70ರಷ್ಟು ಪಾಲು ನೆಕ್ಸಾನ್ ಇವಿ ಹೊಂದಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಈ ಮೊದಲು ಪ್ರತಿ ತಿಂಗಳಿಗೆ 300 ರಿಂದ 400 ಯುನಿಟ್ ಸರಾಸರಿಯಾಗಿ ಮಾರಾಟಗೊಳ್ಳುತ್ತಿದ್ದ ಟಾಟಾ ನೆಕ್ಸಾನ್ ಇವಿ ಕಾರು ಕಳೆದ ಜೂನ್ ಅವಧಿಯಲ್ಲಿ ಬರೋಬ್ಬರಿ 1 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಹೊಸ ದಾಖಲೆಗೆ ಕಾರಣವಾಗಿತ್ತು.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ನೆಕ್ಸಾನ್ ಇವಿ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.65 ಲಕ್ಷ ಬೆಲೆ ಪಡೆದುಕೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾದ ಟಿಗೋರ್ ಇವಿ ಹೊಸ ಮಾದರಿಯು ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13.14 ಲಕ್ಷ ಬೆಲೆ ಹೊಂದಿದೆ.

ಅಕ್ಟೋಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors

ಇನ್ನುಳಿದಂತೆ ಎಕ್ಸ್‌ಪ್ರೆಸ್-ಟಿ ಎಲೆಕ್ಟ್ರಿಕ್ ಕಾರು ಮಾದರಿಯನ್ನು ವಾಣಿಜ್ಯ ಬಳಕೆಗಾಗಿ ಮಾತ್ರ ಪರಿಚಯಿಸಲಾಗಿದ್ದು, ಈ ಕಾರು ಕನಿಷ್ಠ ಪ್ರಮಾಣದ ಫೀಚರ್ಸ್‌ಗಳೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 9.54 ಲಕ್ಷದಿಂದ ರೂ. 10.64 ಲಕ್ಷ ಬೆಲೆ ಹೊಂದಿದೆ.

Most Read Articles

Kannada
English summary
Tata ev cars sales october 276 percent sales growth
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X