Just In
- 1 hr ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 1 hr ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 1 hr ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 2 hrs ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Movies ಲಂಡನ್ನಲ್ಲಿ ಬಾಡಿಗೆಗೆ ಪಡೆದಿದ್ದ ಬಂಗಲೆಯನ್ನೇ ಖರೀದಿಸಿದ್ರಾ ಪ್ರಭಾಸ್?
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಪ್ಟೆಂಬರ್ ಅವಧಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಗರಿಷ್ಠ ಬೇಡಿಕೆ ಪಡೆದುಕೊಂಡ Tata Motors
ಟಾಟಾ ಮೋಟಾರ್ಸ್(Tata Motors) ಕಂಪನಿಯು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕಂಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸುತ್ತಿದೆ.
ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್ಪ್ರೆಸ್-ಟಿ ಇವಿ(XPres-t EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದೆ.
ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್ಪ್ರೆಸ್-ಟಿ ಇವಿ ಮಾದರಿಯು ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.
ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.
2021ರ ಸೆಪ್ಟೆಂಬರ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಶೇ. 20ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು 25,730 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಇದರಲ್ಲಿ ಇವಿ ಕಾರು ಮಾರಾಟವು ಈ ಬಾರಿ ಗಮನಸೆಳೆದಿದೆ.
ಸೆಪ್ಟೆಂಬರ್ ಅವಧಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 1078 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು,ಇದು ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ ಕಾರು ಮಾರಾಟಕ್ಕಿಂತಲೂ ಶೇ.250 ರಷ್ಟು ಹೆಚ್ಚಳವಾಗಿದೆ.
ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಯತ್ತ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.
ಇನ್ನು 2019ರಲ್ಲಿ ಮೊದಲ ಬಾರಿಗೆ ಪ್ರಯಾಣಿಕ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 11 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ನೆಕ್ಸಾನ್ ಇವಿ ಕಾರು ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.
ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದೆ.
ಟಿಗೋರ್ ಇವಿ ಮಾದರಿಯನ್ನು ಇತ್ತೀಚೆಗೆ ಹೊಸ ತಂತ್ರಜ್ಞಾನ ಪ್ರೇರಣೆಯೊಂದಿಗೆ ಬಿಡುಗಡೆ ಮಾಡಲಾಗಿದ್ದು, ಟಿಗೋರ್ ಇವಿ ಕಾರು ನೆಕ್ಸಾನ್ ಇವಿ ಮಾದರಿಯಲ್ಲೇ ಅತ್ಯುತ್ತಮ ಮೈಲೇಜ್, ಪರ್ಫಾಮೆನ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ.
ಟಾಟಾ ಮೋಟಾರ್ಸ್ ಕಂಪನಿಯ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಸದ್ಯ ನೆಕ್ಸಾನ್ ಇವಿ ಕಾರು ಅಗ್ರಸ್ಥಾನದಲ್ಲಿದ್ದು, ಕಂಪನಿಯು ಮಾರಾಟಗೊಳಿಸಿರುವ 11 ಸಾವಿರ ಇವಿ ಕಾರುಗಳಲ್ಲಿ ಶೇ. 70ರಷ್ಟು ಪಾಲು ನೆಕ್ಸಾನ್ ಇವಿ ಹೊಂದಿದೆ.
ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನಕ್ಕೇರಿರುವ ಟಾಟಾ ನೆಕ್ಸಾನ್ ಕಾರು ಮಾದರಿಯು ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇಂಧನಗಳ ಬೆಲೆ ಹೆಚ್ಚುತ್ತಿರುವುದರಿಂದ ಎಲೆಕ್ಟ್ರಿಕ್ ಕಾರಿಗೆ ಬೇಡಿಕೆಯಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.
ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರುಗಳ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.
ಈ ಮೊದಲು ಪ್ರತಿ ತಿಂಗಳಿಗೆ 300 ರಿಂದ 400 ಯುನಿಟ್ ಸರಾಸರಿಯಾಗಿ ಮಾರಾಟಗೊಳ್ಳುತ್ತಿದ್ದ ಟಾಟಾ ನೆಕ್ಸಾನ್ ಇವಿ ಕಾರು ಕಳೆದ ಜೂನ್ ಅವಧಿಯಲ್ಲಿ ಬರೋಬ್ಬರಿ 1 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಹೊಸ ದಾಖಲೆಗೆ ಕಾರಣವಾಗಿತ್ತು.
ನೆಕ್ಸಾನ್ ಇವಿ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.65 ಲಕ್ಷ ಬೆಲೆ ಪಡೆದುಕೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾದ ಟಿಗೋರ್ ಇವಿ ಹೊಸ ಮಾದರಿಯು ರೂ. 11.99 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 13.14 ಲಕ್ಷ ಬೆಲೆ ಹೊಂದಿದೆ.
ಇನ್ನುಳಿದಂತೆ ಎಕ್ಸ್ಪ್ರೆಸ್-ಟಿ ಎಲೆಕ್ಟ್ರಿಕ್ ಕಾರು ಮಾದರಿಯನ್ನು ವಾಣಿಜ್ಯ ಬಳಕೆಗಾಗಿ ಮಾತ್ರ ಪರಿಚಯಿಸಲಾಗಿದ್ದು, ಈ ಕಾರು ಕನಿಷ್ಠ ಪ್ರಮಾಣದ ಫೀಚರ್ಸ್ಗಳೊಂದಿಗೆ ಎಕ್ಸ್ಶೋರೂಂ ಪ್ರಕಾರ ರೂ. 9.54 ಲಕ್ಷದಿಂದ ರೂ. 10.64 ಲಕ್ಷ ಬೆಲೆ ಹೊಂದಿದೆ.