ಹೊಸ ನವೀಕರಣಗಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಸ್ವದೇಶಿ ಕಾರು ತಯಾರಕ ಕಂಪನಿಯಾದ ಟಾಟಾ ಮೋಟಾರ್ಸ್ ಶೀಘ್ರದಲ್ಲೇ ದೇಶದಲ್ಲಿ ಅತ್ಯಂತ ಜನಪ್ರಿಯವಾದ ಹ್ಯಾರಿಯರ್ ಎಸ್‌ಯುವಿಯನ್ನು ಹೊಸ ನವೀಕರಿಣಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಶೀಘ್ರದಲ್ಲೇ ಹೊಸ ನವೀಕರಣಗಳೊಂದಿಗೆ ಟಾಟಾ ಹ್ಯಾರಿಯರ್ ಎಸ್‍ಯುವಿಯು ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಟಾಟಾ ಕಂಪನಿಯು ಹ್ಯಾರಿಯರ್ ಎಸ್‍ಯುವಿಯ ಹೊಸ್ ಟೀಸರ್ ಬಿಡುಗಡೆಗೊಳಿಸಿದ್ದಾರೆ. ಕಂಪನಿಯು ಟಾಟಾ ಹ್ಯಾರಿಯರ್ ಎಸ್‍ಯುವಿಯ ಯಾವ ಅಪ್‌ಡೇಟ್ ಎಂದು ಕಂಪನಿಯು ಬಹಿರಂಗಪಡಿಸದಿದ್ದರೂ, ಇದು ಎರಡು ಹೊಸ ಮಿಡ್-ಸ್ಪೆಕ್ ಎಕ್ಸ್‌ಟಿಎ ಮತ್ತು ಎಕ್ಸ್‌ಟಿಎ ಪ್ಲಸ್ ಆಟೋಮ್ಯಾಟಿಕ್ ರೂಪಾಂತರ ಗಳಾಗಿರಬಹುದು. ಈಗಿರುವ ಟಾಟಾ ಹ್ಯಾರಿಯರ್ ಮಾದರಿ ನಾಲ್ಕು ಆಟೋಮ್ಯಾಟಿಕ್ ರೂಪಾಂತರಗಳನ್ನು ಒಳಗೊಂಡಿದೆ, ಅವುಗಳೆಂದರೆ ಎಕ್ಸ್ಎಂಎ, ಎಕ್ಸ್ಎಂಎ ಪ್ಲಸ್, ಎಕ್ಸ್'ಝಡ್ಎ ಪ್ಲಸ್ ಆಗಿದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು ಪನರೋಮಿಕ್ ಸನ್‌ರೂಫ್ ಅನ್ನು ಹೊಂದಿರುವ ಹೊಸ ಮಿಡ್-ಸ್ಪೆಲ್ ಎಕ್ಸ್‌ಟಿಎ ಮತ್ತು ಎಕ್ಸ್‌ಟಿಎ ಪ್ಲಸ್ ಆಟೋಮ್ಯಾಟಿಕ್ ರೂಪಾಂತರಗಳನ್ನು ಸುಲುಭವಾಗಿ ಕೈಗೆಟುಕುವ ಬೆಲೆಯಲ್ಲಿ ಪಡೆಯುತ್ತಾರೆ. ಪ್ರಸ್ತುತವಾಗಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು ಪನರೋಮಿಕ್ ಸನ್‌ರೂಫ್ ಕೇವಲ ಟಾಪ್-ಸ್ಪೆಕ್ ರೂಪಾಂತರಗಳಲ್ಲಿ ಮಾತ್ರ ಲಭ್ಯವಿದೆ,

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಹೊಸ ರೂಪಾಂತರಗಳು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಯೂನಿಟ್, ಪ್ರೀಮಿಯಂ ಸೌಂಡ್ ಸಿಸ್ಟಂ, ಪನೋರಮಿಕ್ ಸನ್ ರೂಫ್, ಸೆಮಿ-ಡಿಜಿಟಲ್ ಇನ್ಸ್ ಟ್ರೂಮಂಟ್ ಕ್ಲಸ್ಟರ್, ಆಟೋಮ್ಯಾಟಿಕ್ ಕ್ಲೈಮೇಟ್ ಕಂಟ್ರೋಲ್, ಕೀಲೆಸ್ ಎಂಟ್ರಿ, ಪುಶ್-ಬಟನ್ ಸ್ಟಾರ್ಟ್-ಸ್ಟಾಪ್, ಡ್ರೈವ್ ಮತ್ತು ಟ್ರಾಕ್ಷನ್ ಕಂಟ್ರೋಲ್ ಮೋಡ್‌ಗಳು ಮತ್ತು ಹೆಚ್ಚಿನವುಗಳನ್ನು ಒಳಗೊಂಡಿರುತ್ತದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಇನ್ನು ಟಾಟಾ ಹ್ಯಾರಿಯರ್ ಎಸ್‍ಯುವಿಯು ಒಮೆಗಾ (ಆಪ್ಟಿಮಲ್ ಮಾಡ್ಯುಲರ್ ಎಫಿಶಿಯಂಟ್ ಗ್ಲೋಬಲ್ ಅಡ್ವಾನ್ಸ್ಡ್) ಪ್ಲಾಟ್‌ಫಾರ್ಮ್‌ನಿಂದ ಅಭಿವೃದ್ದಿ ಪಡಿಸಲಾಗಿದೆ. ಈ ಟಾಟಾ ಹ್ಯಾರಿಯರ್ ಮಿಡ್ ಎಸ್‍ಯುವಿಯಲ್ಲಿ 2.0 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಈ ಎಂಜಿನ್ 170 ಬಿಹೆಚ್‍ಪಿ ಮತ್ತು 350 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇನ್ನು ಈ ಹ್ಯಾರಿಯರ್ ಎಸ್‍ಯುವಿಯಲ್ಲಿ ಹೊಸದಾಗಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಕೂಡ ನೀಡಲಾಗಿದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಕಳೆದ ಬಾರಿ ಟಾಟಾ ತನ್ನ ಹ್ಯಾರಿಯರ್ ಎಸ್‍ಯುವಿಯ ಎಕ್ಸ್‌ಟಿ ಪ್ಲಸ್ ಎನ್ನುವ ವೆರಿಯೆಂಟ್‌ವೊಂದನ್ನು ಬಿಡುಗಡೆಗೊಳಿಸಿತು. ಈ ಎಸ್‍ಯುವಿಯಲ್ಲಿ ಡ್ಯುಯಲ್ ಫಂಕ್ಷನ್ ಎಲ್ಇಡಿ ಡಿಆರ್ಎಲ್, ಬಂಪರ್ ನಲ್ಲಿ ಅಳವಡಿಸಲಾದ ಹೆಡ್ ಲ್ಯಾಂಪ್ ಮತ್ತು ಮಸ್ಕ್ಯುಲರ್ ಫ್ರಂಟ್ ಗ್ರಿಲ್ ಎಲ್ಲವೂ ಆಕರ್ಷಕ ಮತ್ತು ಬೋಲ್ಡ್ ಲುಕ್ ಅನ್ನು ನೀಡುತ್ತದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಇನ್ನು ಈ ಹ್ಯಾರಿಯರ್ ಎಸ್‍ಯುವಿಯು ಪ್ರೀಮಿಯಂ ಇಂಟಿರಿಯರ್ ಅನ್ನು ಹೊಂದಿದೆ. ಇದರಲ್ಲಿ ಒನ್-ಟಚ್ ಸನ್‌ರೂಫ್, ಲೇಯರ್ಡ್ ಡ್ಯಾಶ್‌ಬೋರ್ಡ್, ಡ್ರೈವ್ ಮೋಡ್‌ಗಳು, ಹೊಂದಾಣಿಕೆ ಮಾಡಬಹುದಾದ ಹೆಡ್‌ರೆಸ್ಟ್‌ಗಳು ಮತ್ತು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಹ್ಯಾರಿಯರ್ ಎಸ್‌ಯುವಿಯಲ್ಲಿ ಸುರಕ್ಷತೆಗಾಗಿ ಏರ್‍‍ಬ್ಯಾಗ್‍ಗಳು, ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಎಂಬ ಫೀಚರ್ ಗಳನ್ನು ಹೊಂದಿವೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಇನ್ನು ಇದರೊಂದಿಗೆ ಟಾಟಾ ನೆಕ್ಸಾನ್ ಅತಿ ಹೆಚ್ಚು ಮಾರಾಟವಾಗುವ ಸಬ್ ಕಾಂಪ್ಯಾಕ್ಟ್ ಎಸ್‍ಯುವಿಗಳಲ್ಲಿ ಒಂದಾಗಿದೆ. ನೆಕ್ಸಾನ್ ಕಳೆದ ತಿಂಗಳು ಹೆಚ್ಚು ಮಾರಾಟವಾದ ಟಾಟಾ ಮಾದರಿಯಾಗಿದೆ. ಈ ವರ್ಷ ಜುಲೈ ತಿಂಗಳಿನಲ್ಲಿ ನೆಕ್ಸಾನ್ ಮಾದರಿಯ 10,287 ಯುನಿಟ್‌ಗಳು ಮಾರಾಟವಾಗಿವೆ, ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ನೆಕ್ಸಾನ್ 4,327 ಯುನಿಟ್‌ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.137.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಹೊಸ ನವೀಕರಣಳೊಂದಿಗೆ ಬರುತ್ತಿದೆ ಟಾಟಾ ಹ್ಯಾರಿಯರ್ ಎಸ್‍ಯುವಿ

ಇನ್ನು ಟಾಟಾ ಹ್ಯಾರಿಯರ್ ಎಸ್‍ಯುವಿಯ ಹೊಸ ರೂಪಾಂತರಗಳು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಟಾಟಾ ಹ್ಯಾರಿಯರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ 500, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ ಮತ್ತು ಜೀಪ್ ಕಂಪಾಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

Article Published On: Tuesday, August 10, 2021, 12:41 [IST]
English summary
Tata harrier suv to get new updates new teaser released details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+