ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಬಜೆಟ್ ಕಾರು ಮಾದರಿಗಳ ಮಾರಾಟದಲ್ಲಿ ಹೊಸ ನೀರಿಕ್ಷೆ ಹುಟ್ಟುಹಾಕುತ್ತಿರುವ ಟಾಟಾ ಬಹುನೀರಿಕ್ಷಿತ ಹೆಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿ ಆವೃತ್ತಿಯು ಬಿಡುಗಡೆಗೊಳ್ಳುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರು ವಿಶೇಷ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ನ್ಯೂ ಜನರೇಷನ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನ್ಯೂ ಜನರೇಷನ್ ಸಫಾರಿ ಬಿಡುಗಡೆಯ ನಂತರ ಮೈಕ್ರೊ ಎಸ್‍ಯುವಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕಾರು ಮಾದರಿಯು ಬಜೆಟ್ ಕಾರು ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಎಸ್‌ಯುವಿ ಕಾರುಗಳ ಸರಣಿ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮೈಕ್ರೊ ಎಸ್‌ಯುವಿ ಮಾದರಿಯ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರು ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಹೊಸ ಕಾರು ಬಜೆಟ್ ಕಾರು ಮಾದರಿಯಲ್ಲಿರುವ ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10 ರಷ್ಟು ಪಾಲು ಹೊಂದುವ ಗುರಿಹೊಂದಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಹೊಸ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟ ಸೌಲಭ್ಯದೊಂದಿಗೆ ಸ್ಪೋರ್ಟಿ ಲುಕ್‌ನೊಂದಿಗೆ ಬೆಸ್ ವೆರಿಯೆಂಟ್‌ನಲ್ಲೂ ಉತ್ತಮ ಸೌಲಭ್ಯಗಳನ್ನು ಹೊಂದಿರಲಿದೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಮುಂಬರುವ ಜೂನ್ ಅಥವಾ ಜುಲೈ ಅಂತ್ಯಕ್ಕೆ ಹೊಸ ಕಾರಿನ ಉತ್ಪಾದನಾ ಆವೃತ್ತಿಯು ಅಧಿಕೃತ ಹೆಸರಿನೊಂದಿಗೆ ಅನಾವರಣಗೊಳ್ಳುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ರೋಡ್ ಟೆಸ್ಟಿಂಗ್ ವೇಳೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ ಇಂಟಿರಿಯರ್ ಬಹಿರಂಗ

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

More from DriveSpark

Article Published On: Tuesday, May 18, 2021, 19:19 [IST]
English summary
Tata HBX Interior Exterior Design & Features Spied Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+