ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರಿನ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಿ ಮೊದಲ ಹಂತದ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮೈಕ್ರೊ ಎಸ್‌ಯುವಿಯು ಎಂಟ್ರಿ ಲೆವಲ್ ಕಾರುಗಳಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಇಂಪ್ಯಾಕ್ಟ್ 2.0 ತತ್ವಜ್ಞಾನ ಪ್ರೇರಿತ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ಅಭಿವೃದ್ದಿಗೊಂಡಿರುವ ಹೊಸ ಕಾರು ಮಾದರಿಯು ಬಜೆಟ್ ಕಾರು ಮಾರಾಟದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ನ್ಯೂ ಜನರೇಷನ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮೈಕ್ರೊ ಎಸ್‍ಯುವಿ ಮಾರಾಟದಲ್ಲೂ ಭಾರೀ ಬೇಡಿಕೆ ಪಡೆದುಕೊಳ್ಳಲಿದ್ದು, ಕಾರು ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಹೊಸ ಕಾರು ಜನಪ್ರಿಯ ಬಜೆಟ್ ಕಾರು ಮಾದರಿಗಳಾದ ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿನ ಶೇ.10 ರಷ್ಟು ಪಾಲು ಹೊಂದಲು ಸಹಕಾರಿಯಾಗಿದೆ ಎನ್ನಲಾಗಿದೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಎಂಟ್ರಿ ಲೆವಲ್ ಕಾರುಗಳಲ್ಲೇ ಆಕರ್ಷಕ ವಿನ್ಯಾಸ ಹೊಂದಲಿರುವ ಮೈಕ್ರೊ ಎಸ್‌ಯುವಿಯಲ್ಲಿ ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ವ್ಹೀಲ್, 7-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ಸೇರಿ ಹಲವು ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಹೊಸ ಕಾರಿನ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿರುವುದರಿಂದ ಮುಂಬರುವ ಅಗಸ್ಟ್ ಮಧ್ಯಂತರದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯು ಅಧಿಕೃತ ಹೆಸರಿನೊಂದಿಗೆ ಅನಾವರಣಗೊಳ್ಳುವ ಸಾಧ್ಯತೆಗಳಿವೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಟಾಟಾ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

ಮೈಕ್ರೊ ಎಸ್‌ಯುವಿ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

Most Read Articles

Kannada
English summary
Tata HBX India Launch Expected Soon. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X