ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಟಾಟಾ ಮೋಟಾರ್ಸ್ ಕಂಪನಿಯು ಸಫಾರಿ ಎಸ್‌ಯುವಿ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸುವ ಸಿದ್ದತೆಯಲ್ಲಿದ್ದು, ಶೀಘ್ರದಲ್ಲೇ ತನ್ನ ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಹೆಚ್‌ಬಿಎಕ್ಸ್

ಹೊಸ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೂಲಕ ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊನ್ನೆಯಷ್ಟೇ ನ್ಯೂ ಜನರೇಷನ್ ಸಫಾರಿ ಮಾದರಿಯೊಂದಿಗೆ ಪ್ರೀಮಿಯಂ ಎಸ್‌ಯುವಿ ವಿಭಾಗದಲ್ಲಿ ಪರಿಚಯಿಸಿದೆ. ಸಫಾರಿ ನಂತರ ಮೈಕ್ರೊ ಎಸ್‍ಯುವಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಟಾಟಾ ಕಂಪನಿಯು ಹೊಸ ಯೋಜನೆಯೆಂತೆ ಮುಂದಿನ ಹೊಸ ಕಾರು ಮಾದರಿಯಾಗಿ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಎಸ್‌ಯುವಿ ಸರಣಿ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮೈಕ್ರೊ ಎಸ್‌ಯುವಿ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಿದ್ದು, ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಹೊಸ ಕಾರು ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10 ರಷ್ಟು ಪಾಲು ಹೊಂದುವ ಗುರಿಹೊಂದಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ಸೌಲಭ್ಯ ಹೊಂದಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ಅಧಿಕೃತ ಹೆಸರನ್ನು ಅನಾವರಣಗೊಳಿಸುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.50 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಟಾಟಾ ಹೆಚ್‌ಬಿಎಕ್ಸ್

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Most Read Articles

Kannada
English summary
Tata HBX Micro SUV Spotted Testing Once Again India.
Story first published: Wednesday, February 24, 2021, 18:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X