ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ನ್ಯೂ ಜನರೇಷನ್ ಸಫಾರಿ ಬಿಡುಗಡೆಯ ನಂತರ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ ಬಜೆಟ್ ಕಾರು ಮಾದರಿಯಾದ ಮೈಕ್ರೊ ಎಸ್‌ಯುವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದೆ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಮೊನ್ನೆಯಷ್ಟೇ ನ್ಯೂ ಜನರೇಷನ್ ಸಫಾರಿ ಮಾದರಿಯೊಂದಿಗೆ ಪ್ರೀಮಿಯಂ ಎಸ್‌ಯುವಿ ವಿಭಾಗಕ್ಕೂ ಪ್ರವೇಶಿಸಿದ್ದು, ಸಫಾರಿ ನಂತರ ಮೈಕ್ರೊ ಎಸ್‍ಯುವಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಟಾಟಾ ಕಂಪನಿಯು ಹೊಸ ಯೋಜನೆಯೆಂತೆ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಮಾದರಿಯನ್ನು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಎಸ್‌ಯುವಿ ಕಾರುಗಳ ಸರಣಿ ಮಾದರಿಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಮೈಕ್ರೊ ಎಸ್‌ಯುವಿ ಮಾದರಿಯ ಭಾರೀ ನೀರಿಕ್ಷೆಯಿಟ್ಟುಕೊಂಡಿದ್ದು, ಹೊಸ ಕಾರು ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರು ಬಜೆಟ್ ಕಾರು ಮಾದರಿಯಲ್ಲಿರುವ ಮಾರುತಿ ಎಸ್ ಪ್ರೆಸ್ಸೊ ಮತ್ತು ಹ್ಯುಂಡೈ ಸ್ಯಾಂಟ್ರೊ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10 ರಷ್ಟು ಪಾಲು ಹೊಂದುವ ಗುರಿಹೊಂದಿದೆ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಎಂಟ್ರಿ ಲೆವಲ್‌ ಕಾರು ಮಾದರಿಯಾಗಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಮಾದರಿಯು ಕಾನ್ಸೆಪ್ಟ್ ಮಾದರಿಯಲ್ಲೇ ಆಕರ್ಷಕ ವಿನ್ಯಾಸದೊಂದಿಗೆ ರಸ್ತೆಗಿಳಿಯಲು ಸಜ್ಜಾಗುತ್ತಿದ್ದು, ಹೊಸ ಕಾರನ್ನು ಡ್ಯುಯಲ್ ಟೋನ್ ಅಲಾಯ್ ವೀಲ್ಹ್‌, ಆಕರ್ಷಕ ಫ್ರಂಟ್ ಫಾಸಿಯಾ, ಡಿ ಕಟ್ ಸ್ಟೀರಿಂಗ್ ಸೌಲಭ್ಯದೊಂದಿಗೆ ಸ್ಪೋರ್ಟಿ ಲುಕ್ ಹೊಂದಿದೆ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರಿನಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಕುರಿತಾಗಿ ಇದುವರೆಗೂ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಮುಂಬರುವ ಏಪ್ರಿಲ್ ಅಥವಾ ಮೇ ಆರಂಭದಲ್ಲಿ ಹೊಸ ಕಾರಿನ ಉತ್ಪಾದನಾ ಆವೃತ್ತಿಯು ಅಧಿಕೃತ ಹೆಸರನ್ನು ಅನಾವರಣಗೊಳ್ಳುವ ಸಾಧ್ಯತೆಗಳಿದ್ದು, ಎಂಟ್ರಿ ಲೆವಲ್ ಕಾರುಗಳಲ್ಲಿ ಹೊಸ ಮೈಕ್ರೊ ಎಸ್‌ಯುವಿ ಭರ್ಜರಿ ಪೈಪೋಟಿ ನೀಡಲಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚು ಫೀಚರ್ಸ್‌ಗಳನ್ನು ಪಡೆದುಕೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.20 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲು ಸಿದ್ದವಾದ ಟಾಟಾ ಮೈಕ್ರೊ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ವಾಹನ ಸುರಕ್ಷತೆಯ ವಿಚಾರವಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿರುವ ಟಾಟಾ ಕಂಪನಿಯು ಎಂಟ್ರಿ ಲೆವಲ್ ಮಾದರಿಯಲ್ಲೂ ಉತ್ತಮ ಸೇಫ್ಟಿ ರೇಟಿಂಗ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Image Courtesy: The Fat Biker

Article Published On: Thursday, March 18, 2021, 16:43 [IST]
English summary
Tata HBX Production Ready Model Spotted Testing Expected Launch By Mid-2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+