ದಸರಾ ಸಂಭ್ರಮಕ್ಕೆ ರಸ್ತೆಗಿಳಿಯಲಿರುವ Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಬಹುನೀರಿಕ್ಷಿತ ಟಾಟಾ ಪಂಚ್(Tata Punch) ಮೈಕ್ರೊ ಎಸ್‌ಯುವಿ ಮಾದರಿಯು ಭಾರತದಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಂಡಿದ್ದು, ದಸರಾ ಸಂಭ್ರಮದ ವೇಳೆಗೆ ಖರೀದಿಗೆ ಲಭ್ಯವಾಗಲಿರುವ ಹೊಸ ಕಾರಿನ ವಿಶೇಷತೆಗಳನ್ನು ಈ ಲೇಖನದಲ್ಲಿ ತಿಳಿಯೋಣ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಪಂಚ್ ಕಾರು ಮಾದರಿಯನ್ನ ಮೊದಲ ಬಾರಿ 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹೆಚ್‌ಬಿಎಕ್ಸ್ ಹೆಸರಿನಲ್ಲಿ ಅನಾವರಣಗೊಳಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಉತ್ಪಾದನಾ ಮಾದರಿಯನ್ನು ಕಾನ್ಸೆಪ್ಟ್ ಮಾದರಿಯಲ್ಲೇ ಅಭಿವೃದ್ದಿಗೊಳಿಸಿ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಖರೀದಿಗೆ ಕಂಪನಿಯು ರೂ. 21 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಅಲ್ಫಾ ಪ್ಲಾಟ್‌ಫಾರ್ಮ್ ಆಧರಿಸಿರುವ ಹೊಸ ಪಂಚ್ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಪಂಚ್ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಬೆಸ್ ವೆರಿಯೆಂಟ್‌ನಲ್ಲೂ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಲಿದೆ. ಹಾಗಾದ್ರೆ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಯಾವೆಲ್ಲಾ ಫೀಚರ್ಸ್‌ಗಳಿವೆ ಎನ್ನುವುದನ್ನು ಇಲ್ಲಿ ಚರ್ಚಿಸೋಣ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಪಂಚ್ ಪ್ಯೂರ್

ಡ್ಯುಯಲ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಬ್ರೇಕ್ ಸ್ಯಾವಿ ಕಂಟ್ರೋಲ್, ಆರ್‌ಪಿಎಎಸ್, ಸೆಂಟ್ರೇಲ್ ಲಾಕಿಂಗ್ ಜೊತೆ ಕೀ, ಐಎಸಿ ಮತ್ತು ಇಎಸ್ಎಸ್ ಟೆಕ್ನಾಲಜಿ, ಫ್ರಂಟ್ ಪವರ್ ವಿಂಡೋ, ಟಿಲ್ಟ್ ಸ್ಟೀರಿಂಗ್, 90 ಡಿಗ್ರಿ ಡೋರ್ ಓಪನ್, ರಿಯರ್ ಪ್ಲ್ಯಾಟ್ ಫ್ಲೊರ್, ಬ್ಲ್ಯಾಕ್ ಒಡಿಹೆಚ್, ಹ್ಯುಮಿನಿಟಿ ಕ್ರೊಮ್ ಲೈನ್, ಪೆಟೆಂಡ್ ಬಂಪರ್, ಡೋರ್, ವೀಲ್ಹ್ ಆರ್ಚ್, ಸಿಲ್ ಕ್ಲಾಡಿಂಗ್ ಹೊಂದಿರಲಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಪಂಚ್ ಅಡ್ವೆಂಚರ್

ಅಡ್ವೆಂಚರ್ ಮಾದರಿಯಲ್ಲಿ ಪ್ಯೂರ್ ಆವೃತ್ತಿಯಲ್ಲಿನ ಕೆಲವು ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡು ಹೊಂದಾಣಿಕೆ ಮಾಡಬಹುದಾದ 4 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ, 4 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ಯುಎಸ್‌ಬಿ ಚಾರ್ಜಿಂಗ್ ಫೋರ್ಟ್, ಎಲೆಕ್ಟ್ರಿಕ್ ಮೂಲಕ ಹೊಂದಾಣಿಕೆ ಮಾಡಿಕೊಳ್ಳಬಹುದಾದ ರಿಯರ್ ವ್ಯೂ ಮಿರರ್, ಆಲ್ ಪವರ್ ವಿಂಡೋ, ಫಾಲೋ ಮಿ ಹೋಂ ಹೆಡ್‌ಲ್ಯಾಂಪ್, ಆಂಟಿ ಗ್ಲೆರ್ ಐಆರ್‌ಎಂವಿ, ಸೆಂಟ್ರಲ್ ರಿಮೋಟ್ ಲಾಕಿಂಗ್ ಜೊತೆ ಫ್ಲಿಪ್ ಕೀ, ಫುಲ್ ವ್ಹೀಲ್ ಕವರ್ ಮತ್ತು ಬಾಡಿ ಕಲರ್ ರಿಯರ್ ವ್ಯೂ ಮಿರರ್ ನೀಡಲಾಗಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಪಂಚ್ ಅಕಾಂಪ್ಲಿಶೆಡ್

ಹೊಸ ಕಾರಿನ ಅಕಾಂಪ್ಲಿಶೆಡ್ ಆವೃತ್ತಿಯಲ್ಲಿ ಪ್ಯೂರ್ ಮತ್ತು ಅಡ್ವೆಂಚರ್ ಮಾದರಿಯಲ್ಲಿನ ಕೆಲವು ತಾಂತ್ರಿಕ ಸೌಲಭ್ಯಗಳೊಂದಿಗೆ ಹೆಚ್ಚುವರಿಯಾಗಿ ಹೊಂದಾಣಿಕೆ ಮಾಡಬಹುದಾದ 7 ಇಂಚಿನ ಹರ್ಮನ್ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ, 4 ಸ್ಪೀಕರ್ಸ್ ಮತ್ತು 2 ಟ್ವಿಟರ್, ರಿಯರ್ ವ್ಯೂ ಕ್ಯಾಮೆರಾ, ಎಲ್ಇಡಿ ಟೈಲ್ ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್, ಆರ್15 ಹೈಪರ್ ಸ್ಟೈಲ್ ವ್ಹೀಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಒನ್ ಟಚ್ ಡೋರ್ ವಿಂಡೋ ಡೌನ್, ಕ್ರೂಸ್ ಕಂಟ್ರೋಲ್, ಹೊಂದಾಣಿಕೆ ಮಾಡಬಹುದಾದ ಡ್ರೈವರ್ ಸೀಟ್ ಮತ್ತು ಸಿಟಿವಿ ಮಾದರಿಯಾಗಿ ಟ್ರಾಕ್ಷನ್ ಕಂಟ್ರೋಲ್ ಸೌಲಭ್ಯವಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಪಂಚ್ ಕ್ರಿಯೆಟಿವ್

ಟಾಟಾ ಕಂಪನಿಯು ಪಂಚ್ ಕಾರಿನ ಕ್ರಿಯೆಟಿವ್ ಹೈ ಎಂಡ್ ಮಾದರಿಯಲ್ಲಿ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳನ್ನು ನೀಡಿದ್ದು, ಮೇಲಿನ ಆವೃತ್ತಿಗಳ ಕೆಲವು ತಾಂತ್ರಿಕ ಅಂಶಗಳ ಜೊತೆಗೆ ಹೆಚ್ಚುವರಿಯಾಗಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಆರ್16 ಡೈಮಂಡ್ ಕಟ್ ಅಲಾಯ್ ವ್ಹೀಲ್, ರೂಫ್ ರೈಲ್ಸ್, 7 ಇಂಚಿನ ಟಿಎಫ್‌ಟಿ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಹೆಡ್‌ಲ್ಯಾಂಪ್, ರೈನ್ ಸೆನ್ಸಿಂಗ್ ವೈಪರ್, ಆಟೋ ಫೋಡ್ಲಿಂಗ್ ರಿಯರ್ ವ್ಯೂ ಮಿರರ್, ಆಟೋಮ್ಯಾಟಿಕ್ ಎಸಿ ಕಂಟ್ರೋಲ್ ಸಿಸ್ಟಂ, ಕೂಲ್ಡ್ ಗ್ಲೊ ಬಾಕ್ಸ್, ರಿಯರ್ ವೈಪರ್ ಪ್ಲಸ್ ವಾಷ್, ರಿಯರ್ ಡಿಫಾಗರ್, ಪೆಡಲ್ ಲ್ಯಾಂಪ್ಸ್, ಹಿಂಬದಿಯ ಆಸನದಲ್ಲಿ ಆರ್ಮ್ ರೆಸ್ಟ್ ಮತ್ತು ಲೆದರ್ ಕೊಟಿಂಗ್ ಹೊಂದಿರುವ ಸ್ಟೀರಿಂಗ್ ಮತ್ತು ಗೇರ್ ನಾಬ್ ನೀಡಲಾಗಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಎಂಜಿನ್ ಮತ್ತು ಪರ್ಫಾಮೆನ್ಸ್

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಸೆಗ್ಮೆಂಟ್ ಬೆಸ್ಟ್ ಫಿಚರ್ಸ್ ಪಡೆದುಕೊಳ್ಳಲಿರುವ ಟಾಟಾ ಪಂಚ್ ಕಾರು ಅತ್ಯುತ್ತಮ ಗ್ರೌಂಡ್ ಕ್ಲಿಯೆರೆನ್ಸ್ ಸೇರಿದಂತೆ ಹಲವು ವಿಶೇಷತೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರು ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಮತ್ತು ಸೈಡ್ ಪ್ರೊಫೈಲ್‌‌ನಲ್ಲಿ ಅತ್ಯುತ್ತಮ ಡಿಸೈನ್ ಹೊಂದಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಹೊಸ ಕಾರನ್ನು ಟೊರಾರ್ನಾಡೊ ಬ್ಲ್ಯೂ, ಟೊಪಿಕಲ್ ಮಿಸ್ಟ್, ಡೇ ಟೋನಾ ಗ್ರೆ, ಮಿಟಿಯೊರ್ ಬ್ರೊನ್ಜ್, ಆಟೊಮಿಕ್ ಆರೇಂಜ್, ಆರ್ಕಸ್ ವೈಟ್ ಮತ್ತು ಕ್ಯಾಲಿಪ್ಸೊ ರೆಡ್ ಸೇರಿ ಪ್ರಮುಖ ಏಳು ಬಣ್ಣಗಳ ಆಯ್ಕೆಯಲ್ಲಿ ಪರಿಚಯಿಸಲಾಗುತ್ತಿದ್ದು, ಹೊಸ ಕಾರು ಮಾರುತಿ ಸುಜುಕಿ ಸ್ವಿಫ್ಟ್ ಮತ್ತು ಹ್ಯುಂಡೈ ಐ10 ನಿಯೋಸ್ ಮಾದರಿಯಲ್ಲಿಯೇ ವ್ಹೀಲ್ ಬೆಸ್ ಹೊಂದಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಗಳಲ್ಲಿ ಐರಾ ಕಾರ್ ಟೆಕ್ನಾಲಜಿ ನೀಡಲಾಗಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಒಂದೇ ಸೂರಿನಡಿ 27 ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಐರಾ(iRA) ಸಹಕಾರಿಯಾಗಿದ್ದು,ಸ್ಮಾರ್ಟ್‌ಫೋನ್ ಸಂಪರ್ಕಿತ ಐರಾ ಕಾರ್ ಕನೆಕ್ಟ್ ತಂತ್ರಜ್ಞಾನವನ್ನು ಕನೆಕ್ಟ್ ನೆಕ್ಸ್ಟ್ ಎಂಬ ಡೆಡಿಕೇಟೆಡ್ ಆ್ಯಪ್ ಮೂಲಕವೇ ಕಾರಿನ ಹಲವು ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಣ ಮಾಡಬಹುದಾಗಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಐರಾ ಟೆಕ್ನಾಲಜಿಯ ಮೂಲಕ ಕಾರಿನ ರಿಮೋಟ್ ಲಾಕ್/ಅನ್ ಲಾಕ್, ರಿಮೋಟ್ ಹಾರ್ನ್, ಡಿಸ್ಟೆನ್ಸ್ ಟು ಎಂಟಿ ಚೆಕ್, ಸೆಕ್ಯೂರಿಟಿ ಸ್ಟೆಟಸ್, ಲೈವ್ ವೆಹಿಕಲ್ ಡಯಾಗ್ನೋಸ್ಟಿಕ್ಸ್ ಸೇರಿದಂತೆ ಹಲವಾರು ಲೋಕೇಶನ್ ಬೆಸ್ಡ್ ಸರ್ವೀಸ್'ಗಳನ್ನು ನೀಡಲಿದ್ದು, ಆಲ್‌ಟ್ರೊಜ್ ಐ-ಟರ್ಬೊ ನಂತರ ಇದೀಗ ಪಂಚ್ ಮಾದರಿಯಲ್ಲಿ ಜೋಡಿಸಲಾಗುತ್ತಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಐರಾದಲ್ಲಿರುವ ವಾಯ್ಸ್ ಅಸಿಸ್ಟೆನ್ಸ್ ಸೌಲಭ್ಯದೊಂದಿಗೆ ಇಂಗ್ಲಿಷ್, ಹಿಂದಿ ಸೇರಿದಂತೆ 70ಕ್ಕೂ ಹೆಚ್ಚು ಭಾಷೆಗಳಲ್ಲಿನ ವಾಯ್ಸ್ ಕಮಾಂಡ್‌ಗಳನ್ನು ಅರ್ಥಮಾಡಿಕೊಳ್ಳಲಿದ್ದು, ಕಾರು ಪ್ರಯಾಣದ ವೇಳೆ ಯಾವುದೇ ಮ್ಯಾನುವಲ್ ಬಟನ್ ಬಳಕೆ ಮಾಡದೆ ನಿಮ್ಮ ಅಗತ್ಯ ಸೇವೆಗಳನ್ನು ಧ್ವನಿ ಗ್ರಹಿಕೆಯ ಮೂಲಕವೇ ಸೇವೆ ಪಡೆದುಕೊಳ್ಳಬಹುದಾಗಿದೆ.

Tata Punch ಮೈಕ್ರೊ ಎಸ್‌ಯುವಿ ಕಾರಿನ ವಿಶೇಷತೆಗಳೇನು?

ಈ ಮೂಲಕ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಮಾಹಿತಿಗಳ ಪ್ರಕಾರ ಈ ತಿಂಗಳು 20ರಂದು ಹೊಸ ಕಾರು ಅಧಿಕೃತವಾಗಿ ಬಿಡುಗಡೆಯಾಗಲಿದೆ ಎನ್ನುವ ಮಾಹಿತಿಗಳಿವೆ.

Most Read Articles

Kannada
English summary
Tata micro suv punch variant wise features engine safety details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X