ಕಾರು ಉತ್ಪಾದನೆಯಲ್ಲಿ ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಟಾಟಾ ಮೋಟಾರ್ಸ್ ನಿರ್ಮಾಣದ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಉತ್ಪಾದನೆಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಕಾರಿನ 2 ಲಕ್ಷ ಯುನಿಟ್ ಉತ್ಪಾದನೆಯನ್ನು ಪೂರ್ಣಗೊಳಿಸಿತು.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಗ್ರಾಹಕರ ವಿಶ್ವಾಸದಂತೆ ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಉತ್ಪಾದನೆಯಲ್ಲಿ ಅತಿ ಅವಧಿಯಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯ ಬಿಡುಗಡೆಯ ನಂತರ ಹೊಸ ಕಾರಿನ ಮಾರಾಟದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಹೊಸ ಕಾರು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ ಪಡೆದ ನಂತರ ಕಾರು ಮಾರಾಟವು ನಿರಂತವಾಗಿ ಏರಿಕೆಯಾಗುತ್ತಿದ್ದು, ಸ್ವದೇಶಿ ಕಂಪನಿಗಳ ನಿರ್ಮಿತ ವಾಹನ ಬಳಕೆಗೆ ಗ್ರಾಹಕರ ಒಲವು ತೋರುತ್ತಿರುವುದು ಕೂಡಾ ಟಾಟಾ ಕಾರುಗಳ ಮಾರಾಟ ಬೆಳವಣಿಗೆ ಮತ್ತೊಂದು ಕಾರಣವಾಗಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಟಾಟಾ ಮೋಟಾರ್ಸ್ ಕಾರುಗಳ ಮಾರಾಟವು ಕಳೆದ ಅಗಸ್ಟ್‌ನಿಂದ ಭಾರತದಲ್ಲಿ ನಿರಂತರವಾಗಿ ಹೆಚ್ಚಳವಾಗಿದ್ದು, ಇದರಲ್ಲಿ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಅಗ್ರಸ್ಥಾನ ಕಾಯ್ದಕೊಂಡಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

2017ರ ಕೊನೆಯಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು ಕಳೆದ ವರ್ಷದ ನವೆಂಬರ್ ತನಕವು ಕೇವಲ 1.50 ಲಕ್ಷ ಯುನಿಟ್ ಮಾತ್ರ ಮಾರಾಟವಾಗಿತ್ತು. ಆದರೆ ಕಳೆದ ನವೆಂಬರ್ ನಂತರ ನೆಕ್ಸಾನ್ ಕಾರು ಬೇಡಿಕೆಯು ಹೆಚ್ಚುತ್ತಲೇ ಇದ್ದು, ಕಳೆದ 6-7 ತಿಂಗಳಿನಲ್ಲಿ ನೆಕ್ಸಾನ್ ಕಾರು ಉತ್ಪಾದನೆಯು 2 ಲಕ್ಷ ತಲುಪಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ನೆಕ್ಸಾನ್ ಕಾರು ಮೊದಲ ಬಾರಿಗೆ ಬಿಡುಗಡೆಯಾದ ಸಂದರ್ಭದಲ್ಲಿ ಪ್ರತಿ ತಿಂಗಳು 2 ಸಾವಿರದಿಂದ 3 ಸಾವಿರ ಯುನಿಟ್ ಮಾತ್ರ ಮಾರಾಟ ಸಂಖ್ಯೆ ಹೊಂದಿತ್ತು. ಆದರೆ ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಯಾದ ಫೇಸ್‌ಲಿಫ್ಟ್ ಮಾದರಿಯೊಂದಿಗೆ ನೆಕ್ಸಾನ್ ಬೇಡಿಕೆಯು ಹೆಚ್ಚುತ್ತಿದ್ದು, ಹೊಸ ಕಾರಿನ ಮಾರಾಟವು ಇದೀಗ 7 ಸಾವಿರದಿಂದ 8 ಸಾವಿರ ಯುನಿಟ್‌ಗೆ ತಲುಪಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಕಳೆದ ಫೆಬ್ರವರಿಯಲ್ಲಿ ಒಂದೇ ತಿಂಗಳಿನಲ್ಲಿ ಗರಿಷ್ಠ 8,683 ಯುನಿಟ್ ಮಾರಾಟ ದಾಖಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಒಟ್ಟು 20 ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಬದಲಾವಣೆಗಳೊಂದಿಗೆ ಕಾರು ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಟಾಟಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಶೀಘ್ರದಲ್ಲೇ ತನ್ನ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಕಾರು ಮಾದರಿಗಾಗಿ ಮತ್ತಷ್ಟು ಬೇಡಿಕೆ ಕಾಯ್ದಕೊಳ್ಳುವ ನಿಟ್ಟಿನಲ್ಲಿ ಹೊಸ ಬಣ್ಣದ ಆಯ್ಕೆ, ಹೊಸ ವಿನ್ಯಾಸದ 16 ಇಂಚಿನ ಅಲಾಯ್ ವೀಲ್ಹ್ ಮತ್ತು ವಾಯ್ಸ್ ಅಸಿಸ್ಟ್ ಸಿಸ್ಟಂ ಸೌಲಭ್ಯದಲ್ಲೂ ಗುರುತರ ಬದಲಾವಣೆ ತರಲು ಸಿದ್ದವಾಗಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಬಿಎಸ್-6 ಎಮಿಷನ್ ನಂತರ ಹಲವಾರು ಬದಲಾವಣೆಗಳೊಂದಿಗೆ ಮಾರಾಟವಾಗುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.95 ಲಕ್ಷ ಬೆಲೆ ಹೊಂದಿದೆ.

ಟಾಟಾ ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರುವ ನೆಕ್ಸಾನ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಟಾಪ್ 3 ಮಾದರಿಯಾಗಿ ಗುರುತಿಸಿಕೊಂಡಿದ್ದು, ನೆಕ್ಸಾನ್ ಕಾರಿನ ಟರ್ಬೊ ಪೆಟ್ರೋಲ್ ಮಾದರಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Tata Motors Achieved 2 Lakh Units Production Milestone. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X