ಟಾಟಾ ಪವರ್ ಜೊತೆಗೂಡಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಿಗೆ ಚಾಲನೆ ನೀಡಿದ ಟಾಟಾ ಮೋಟಾರ್ಸ್
ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಟಾಟಾ ಮೋಟಾರ್ಸ್ ಕಂಪನಿಯು ತನ್ನ ಸಹೋದರ ಸಂಸ್ಥೆ ಟಾಟಾ ಪವರ್ ಜೊತೆಗೂಡಿ ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ದೇಶದ ಪ್ರಮುಖ ನಗರಗಳಿಗೆ ವಿಸ್ತರಿಸುತ್ತಿದ್ದು, ಇವಿ ವಾಹನಗಳ ಮಾರಾಟಕ್ಕೆ ಅನುಗುಣವಾಗಿ ಸೂಪರ್ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ.

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆಯಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆಯು ಇವಿ ವಾಹನ ಬೇಡಿಕೆ ಹಿನ್ನಡೆ ಉಂಟು ಮಾಡುತ್ತಿದ್ದು, ಇದೇ ಕಾರಣಕ್ಕೆ ಸರ್ಕಾರಿ ವಲಯದಲ್ಲಿ ಮಾತ್ರವಲ್ಲದೆ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಮೇಲೆ ಭಾರೀ ಹೂಡಿಕೆಯೊಂದಿಗೆ ಅಗತ್ಯ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣ ಯೋಜನೆಗಳನ್ನು ಕೈಗೆತ್ತಿಗೊಂಡಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವತ್ತ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದರೂ ಸಹ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಕೊರೆತೆಯು ಇವಿ ವಾಹನಗಳ ಮಾರಾಟಕ್ಕೆ ಹಿನ್ನಡೆ ಉಂಟು ಮಾಡುತ್ತಿರುವುದನ್ನು ವಾಹನ ಉತ್ಪಾದನಾ ಕಂಪನಿಗಳು ಗಂಭೀರವಾಗಿ ಪರಿಗಣಿಸಿವೆ.

ಇದರಿಂದಾಗಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಸಹಭಾಗಿತ್ವ ಅಡಿಯಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣದ ಮೂಲಕ ಗ್ರಾಹಕರ ಸೆಳೆಯಲು ಯೋಜನೆಯಲ್ಲಿದ್ದು, ಟಾಟಾ ಮೋಟಾರ್ಸ್ ಸಹ ಟಾಟಾ ಪವರ್ ಕಂಪನಿ ಜೊತೆಗೂಡಿ ದೇಶದ ಪ್ರಮುಖ ನಗರಗಳಲ್ಲಿ ಸೂಪರ್‌ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಹೆಚ್ಚಿಸುತ್ತಿದೆ.

ಇತ್ತೀಚೆಗೆ ಟಾಟಾ ಮೋಟಾರ್ಸ್ ಕಂಪನಿಯು ರಾಜಸ್ತಾನದ ಜೈಪುರ್ ನಗರದಲ್ಲಿ ಒಂದೇ ದಿನ ನಾಲ್ಕು ಕಡೆಗಳಲ್ಲಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲಾಗಿದ್ದು, ಹೊಸ ಚಾರ್ಜಿಂಗ್ ನಿಲ್ದಾಣದೊಂದಿಗೆ ರಾಜಸ್ತಾನದಲ್ಲೇ ಒಟ್ಟು 8 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು ಟಾಟಾ ಪವರ್ ಕಂಪನಿಯ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿವೆ.

8 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ವಿದ್ಯುತ್ ಪೂರೈಕೆಯ ಆಧಾರದ ಮೂರು ಹೈ ಸ್ಪೀಡ್ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಚಾರ್ಜಿಂಗ್ ನಿಲ್ದಾಣದಲ್ಲಿ ಟಾಟಾ ಕಾರುಗಳು ಮಾತ್ರವಲ್ಲದೆ ಎಲ್ಲಾ ಮಾದರಿಯ ಬ್ರಾಂಡ್ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳಬಹುದು.

ಎಲೆಕ್ಟ್ರಾನಿಕ್ ವಾಹನ ಬಳಕೆದಾರರಿಗೆ ಪ್ರತ್ಯೇಕ ಆ್ಯಪ್ ಮೂಲಕ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿಯೊಂದಿಗೆ ಚಾರ್ಜಿಂಗ್ ನಿಲ್ದಾಣದಲ್ಲಿ ಸದ್ಯ ಚಾರ್ಜಿಂಗ್ ಪಡೆದುಕೊಳ್ಳುತ್ತಿರುವ ವಾಹನಗಳ ಕುರಿತಂತೆ ಮಾಹಿತಿ ಲಭ್ಯವಿರಲಿದ್ದು, ಹೆಚ್ಚು ಸಮಯದ ತನಕ ಕಾಯದೆ ಚಾರ್ಜಿಂಗ್ ಪಡೆದುಕೊಳ್ಳಬಹುದಾಗಿದೆ.

ಚಾರ್ಜಿಂಗ್ ನಿಲ್ದಾಣಗಳ ಆಧಾರದ ಮೇಲೆ ಪ್ರತಿ ಯುನಿಟ್ ದರ ವಿಧಿಸುವ ಟಾಟಾ ಪವರ್ ಕಂಪನಿಯು ವಿವಿಧ ವಾಹನಗಳಿಗೆ ವಿವಿಧ ಹಂತದ ದರ ಪಟ್ಟಿ ನಿಗದಿಗೊಳಿಸಿದ್ದು, ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ ಒಂದು ಗಂಟೆ ಅವಧಿಯಲ್ಲಿ ಎಸ್‌ಯುವಿ ಕಾರುಗಳು ಶೇ. 80 ರಷ್ಟು ಚಾರ್ಜಿಂಗ್ ಪಡೆದುಕೊಳ್ಳಬಹುದಾಗಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ವಾಹನದ ನೋಂದಣಿ ಸಂಖ್ಯೆಯನ್ನು ಆಧರಿಸಿ ಮೊಬೈಲ್ ಅಪ್ಲಿಕೇಷನ್ ಮೂಲಕವೇ ಈ ವಾಹನದ ಚಾರ್ಜಿಂಗ್ ಸ್ಟೆಟಸ್ ಟ್ರ್ಯಾಕ್ ಮತ್ತು ದರ ಪಾವತಿ ಮಾಡಬಹುದಾಗಿದ್ದು, ರಾಜಸ್ತಾನದ ನಂತರ ಇತರೆ ರಾಜ್ಯಗಳಲ್ಲೂ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುತ್ತಿದೆ.

ಮೊಬೈಲ್ ಅಪ್ಲಿಕೇಷನ್ ಮೂಲಕ ಅತಿ ಸುಲಭವಾಗಿ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿಯನ್ನು ಅತಿ ಸರಳವಾಗಿ ಅಭಿವೃದ್ದಿಗೊಳಿಸಲಾಗಿದ್ದು, ಗ್ರಾಹಕರು ತಮ್ಮ ಹತ್ತಿರದ ಚಾರ್ಜಿಂಗ್ ನಿಲ್ದಾಣಗಳ ಮಾಹಿತಿಯೊಂದಿಗೆ ಹೆಚ್ಚು ಕಾಯದೆ ಚಾರ್ಜಿಂಗ್ ಸೇವೆಗಳನ್ನು ಪಡೆಯಲು ಸಹಕಾರಿಯಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಜೊತೆಗೆ ಸಾಕಷ್ಟು ಸಂಖ್ಯೆ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳ ಸಂಖ್ಯೆಯು ಇವಿ ವಾಹನಗಳ ಮಾರಾಟವನ್ನು ಉತ್ತೇಜಿಸಲು ಸಹಕಾರಿಯಾಗಲಿದ್ದು, ಹೊಸ ಚಾರ್ಜಿಂಗ್ ನಿಲ್ದಾಣಗಳೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುವ ತವಕದಲ್ಲಿದೆ.


Click it and Unblock the Notifications