ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಾಟಾ ಮೋಟಾರ್ಸ್ ಕಂಪನಿಯು ಯುಗಾದಿ ಸಂಭ್ರಮಕ್ಕಾಗಿ ಹೊಸ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದು, ವಿವಿಧ ಕಾರು ಮಾದರಿಗಳ ಮೇಲೆ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ನೀಡುತ್ತಿದೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಕಾರು ಮಾರಾಟ ಸುಧಾರಣೆಗಾಗಿ ಹೊಸ ವರ್ಷದ ಆರಂಭದಲ್ಲಿ ಹಲವಾರು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇದೀಗ ಯುಗಾದಿ ಸಂಭ್ರಮದಲ್ಲೂ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ. ಟಾಟಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಟಿಯಾಗೊ, ಟಿಗೋರ್, ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಆಫರ್ ನೀಡುತ್ತಿದ್ದು, ಈ ತಿಂಗಳಾಂತ್ಯವರೆಗೂ ಹೊಸ ಆಫರ್‌ಗಳು ಲಭ್ಯವಿರಲಿವೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಾಟಾ ಮೋಟಾರ್ಸ್ ಕಂಪನಿಯು ಘೋಷಣೆ ಮಾಡಿರುವ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 15 ಸಾವಿರದಿಂದ ಗರಿಷ್ಠ ರೂ. 65 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೆ ರೂ. 25 ಸಾವಿರ ಆಫರ್ ಘೋಷಿಸಲಾಗಿದ್ದು, ರೂ.25 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 10 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೆ ಗ್ರಾಹಕರು ರೂ.30 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ. ರೂ.30 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ.15 ಸಾವಿರ ಡಿಸ್ಕೌಂಟ್ ಒಳಗೊಂಡಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿವೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.84 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.49 ಲಕ್ಷದಿಂದ ರೂ. 7.63 ಲಕ್ಷ ಬೆಲೆ ಹೊಂದಿದೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಇನ್ನು ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮಾತ್ರ ನೀಡುತ್ತಿದೆ. ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.09 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.79 ಲಕ್ಷ ಬೆಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ಟಾಟಾ ಕಂಪನಿಯು ರೂ. 65 ಸಾವಿರ ಆಫರ್ ನೀಡುತ್ತಿದ್ದು, ರೂ.65 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹೊಸ ಆಫರ್‌ಗಳು ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ಮಾತ್ರ ಅನ್ವಯವಾಗಲಿದ್ದು, ಬ್ಲ್ಯಾಕ್ ಎಡಿಷನ್ ಮತ್ತು ಕ್ಯಾಮೋ ಎಡಿಷನ್ ಮೇಲೆ ಕೇವಲ ಎಕ್ಸ್‌ಚೆಂಜ್ ಬೋನಸ್ ಮಾತ್ರ ಅನ್ವಯವಾಗಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಯುಗಾದಿ ಸ್ಪೆಷಲ್: ಟಾಟಾ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ

ಹ್ಯಾರಿಯರ್ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.45 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಖರೀದಿ ಮೇಲೆ ಗ್ರಾಹಕರಿಗೆ ಅತ್ಯುತ್ತಮ ಆಫರ್ ನೀಡಲಾಗುತ್ತದೆ.

More from DriveSpark

Article Published On: Friday, April 9, 2021, 20:37 [IST]
English summary
Tata Motors April 2021 discount and offers. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+