ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಹೊಸ ವಾಹನಗಳ ಮಾರಾಟದಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಯತ್ನಿಸುತ್ತಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಟಾಟಾ ಮೋಟಾರ್ಸ್(Tata Motors) ಕಂಪನಿಯು ಸೆಪ್ಟೆಂಬರ್ ಅವಧಿಗಾಗಿ ವಿವಿಧ ಆಫರ್‌ಗಳನ್ನು ಘೋಷಿಸಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಹೊಸ ವರ್ಷದ ಆರಂಭದಲ್ಲಿ ಹಲವಾರು ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿದ್ದ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಮುಂಬರುವ ಹಬ್ಬದ ಋುತುವಿನ ವೇಳೆಗೆ ಉತ್ತಮ ಇದೀಗ ಕೋವಿಡ್ ಎರಡನೇ ಅಲೆಯಿಂದಾಗಿ ಮತ್ತೆ ಹೊಸ ವಾಹನ ಮಾರಾಟದಲ್ಲಿ ತುಸು ಇಳಿಕೆಯಾಗುತ್ತಿದೆ. ಹೀಗಾಗಿ ಟಾಟಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಟಿಯಾಗೊ, ಟಿಗೋರ್, ನೆಕ್ಸಾನ್, ಮತ್ತು ಹ್ಯಾರಿಯರ್ ಕಾರು ಮೇಲೆ ಆಫರ್ ನೀಡುತ್ತಿದ್ದು, ಈ ತಿಂಗಳಾಂತ್ಯವರೆಗೂ ಹೊಸ ಆಫರ್‌ಗಳು ಲಭ್ಯವಿರಲಿವೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಟಾಟಾ ಮೋಟಾರ್ಸ್ ಕಂಪನಿಯು ಘೋಷಣೆ ಮಾಡಿರುವ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 20 ಸಾವಿರದಿಂದ ಗರಿಷ್ಠ ರೂ. 70 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಅಗಸ್ಟ್ ತಿಂಗಳ ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ರೂ. 38 ಸಾವಿರ ಆಫರ್ ಘೋಷಿಸಲಾಗಿದ್ದು, ರೂ.38 ಸಾವಿರದಲ್ಲಿ ರೂ. 20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 15 ಎಕ್ಸ್‌ಚೆಂಜ್ ಆಫರ್ ಮತ್ತು ರೂ.3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೆ ಗ್ರಾಹಕರು ರೂ.43 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ರೂ.43 ಸಾವಿರದಲ್ಲಿ ರೂ. 20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 20 ಎಕ್ಸ್‌ಚೆಂಜ್ ಆಫರ್ ಮತ್ತು ರೂ.3 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿವೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.04 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.64 ಲಕ್ಷದಿಂದ ರೂ. 7.81 ಲಕ್ಷ ಬೆಲೆ ಹೊಂದಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಡೀಸೆಲ್ ಮಾದರಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೆಟ್ ಡಿಸ್ಕೌಂಟ್ ನೀಡುತ್ತಿದೆ. ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.28 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.23 ಲಕ್ಷ ಬೆಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ಟಾಟಾ ಕಂಪನಿಯು ರೂ. 70 ಸಾವಿರ ಆಫರ್ ನೀಡುತ್ತಿದ್ದು, ರೂ.70 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಹ್ಯಾರಿಯರ್ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.39 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.21.09 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರು ಖರೀದಿ ಮೇಲೆ ಗ್ರಾಹಕರಿಗೆ ಅತ್ಯುತ್ತಮ ಆಫರ್ ನೀಡಲಾಗುತ್ತದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ, ಆಲ್‌ಟ್ರೊಜ್ ಮತ್ತು ಟಿಯಾಗೋ ಎನ್ಆರ್‌ಜಿ ಆವೃತ್ತಿಗಳ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲವಾದರೂ ಸಫಾರಿ ಕಾರು ಖರೀದಿಗಾಗಿ ರೂ. 25 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಇನ್ನು ಕೋವಿಡ್ ಪರಿಣಾಮ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಏರಿಳಿತ ಕಂಡುಬಂದರೂ ಆಟೋ ಉತ್ಪಾದನಾ ಕ್ಷೇತ್ರ ಮಾತ್ರ ಗರಿಷ್ಠ ಮಟ್ಟದ ಬೆಳವಣಿಗೆ ಸಾಧಿಸುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿವೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ದೇಶದ ಜನಪ್ರಿಯ ಟಾಟಾ ಮೋಟಾರ್ಸ್ ಕಂಪನಿಯು ಸಹ ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ಹೀಗಾಗಿ ಗ್ರಾಹಕರ ಬೇಡಿಕೆ ಪೂರೈಕೆ ಸಹಕಾರಿಯಾಗುವಂತೆ ಮಾರಾಟ ಮಳಿಗೆಗಳು ಮತ್ತು ಸೇವಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದ್ದು, ಇಂದು ಒಂದೇ ದಿನದ ದಕ್ಷಿಣ ಭಾರತದ ಪ್ರಮುಖ ರಾಜ್ಯಗಳ ವಿವಿಧ ನಗರಗಳಲ್ಲಿ ಸುಮಾರು 70 ಹೊಸ ಕಾರು ಮಾರಾಟ ಮಳಿಗೆಗಳಿಗೆ ಚಾಲನೆ ನೀಡಿದೆ.

ಸೆಪ್ಟೆಂಬರ್ ಅವಧಿಯಲ್ಲಿ Tata Motors ಪ್ರಮುಖ ಕಾರುಗಳ ಖರೀದಿ ಮೇಲೆ ವಿಶೇಷ ಆಫರ್ ಘೋಷಣೆ

ದೇಶಾದ್ಯಂತ ಹರಡಿಕೊಂಡಿರುವ 980 ಟಾಟಾ ಶೋರೂಂಗಳಲ್ಲಿ 272 ಶೋರೂಂಗಳು ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಂಪನಿಯ ಕಾರು ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದಲೇ ಶೇ. 28ರಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

Most Read Articles

Kannada
English summary
Tata motors announced attractive offers upto rs 70 000 on selected car models
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X