ದಸರಾ ಸಂಭ್ರಮ: ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಟಾಟಾ ಮೋಟಾರ್ಸ್(Tata Motors) ಕಂಪನಿಯು ಹಬ್ಬದ ಋತುವಿನಲ್ಲಿ ಭಾರೀ ಪ್ರಮಾಣದ ಕಾರು ಮಾರಾಟದ ನೀರಿಕ್ಷೆಯಲ್ಲಿದ್ದು, ಕಂಪನಿಯು ಪ್ರಮುಖ ಕಾರು ಮಾದರಿಗಳ ಮೇಲೆ ವಿವಿಧ ಆಫರ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ದೇಶಾದ್ಯಂತ ಆರಂಭವಾಗುತ್ತಿರುವ ಹಬ್ಬದ ಋತುವಿನಲ್ಲಿ ಗ್ರಾಹಕರ ಬೇಡಿಕೆ ಹೆಚ್ಚಳ ನೀರಿಕ್ಷೆಯೊಂದಿಗೆ ವಿವಿಧ ಕಾರು ಕಂಪನಿಗಳು ಆಕರ್ಷಕ ಆಫರ್‌ಗಳ ಮೂಲಕ ಮಾರಾಟ ಪ್ರಕ್ರಿಯೆ ಹೆಚ್ಚಿಸುತ್ತಿದ್ದು, ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಟಿಯಾಗೊ, ಟಿಗೋರ್, ನೆಕ್ಸಾನ್, ಮತ್ತು ಹ್ಯಾರಿಯರ್ ಕಾರುಗಳ ಮೇಲೆ ವಿಶೇಷ ಆಫರ್ ನೀಡುತ್ತಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ.15 ಸಾವಿರದಿಂದ ಗರಿಷ್ಠ ರೂ.40 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಹೊಸ ಆಫರ್‌ಗಳಲ್ಲಿ ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮಾದರಿಯ ಮೇಲೆ ಕಂಪನಿಯು ರೂ. 25 ಸಾವಿರ ಆಫರ್ ಘೋಷಿಸಿದ್ದು, ರೂ. 25 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೂ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೂ ಗ್ರಾಹಕರು ರೂ.25 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ರೂ.25 ಸಾವಿರದಲ್ಲಿ ರೂ. 10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡಲಾಗುತ್ತಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟ ಮಾಡಲಾಗುತ್ತಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಸದ್ಯ ಟಿಯಾಗೋ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.04 ಲಕ್ಷ ಬೆಲೆ ಹೊಂದಿದ್ದರೆ ಟಿಗೋರ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.64 ಲಕ್ಷದಿಂದ ರೂ. 7.81 ಲಕ್ಷ ಬೆಲೆ ಹೊಂದಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮಾದರಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಹೊಸ ಆಫರ್ ನಲ್ಲಿ ನೆಕ್ಸಾನ್ ಡಾರ್ಕ್ ಎಡಿಷನ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಸ್ಟ್ಯಾಂಡರ್ಡ್ ಡೀಸೆಲ್ ವೆರಿಯೆಂಟ್‌ಗಳ ಮೇಲೆ ಆಫರ್ ಘೋಷಣೆ ಮಾಡಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.28 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.23 ಲಕ್ಷ ಬೆಲೆ ಹೊಂದಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಡಾರ್ಕ್ ಎಡಿಷನ್ ಉನ್ನತ ಮಾದರಿಯಾಗಿ ಮಾರಾಟಗೊಳ್ಳುತ್ತಿದೆ. ಆದರೆ ಡಾರ್ಕ್ ಎಡಿಷನ್ ಮೇಲೆ ಯಾವುದೇ ಆಫರ್ ನೀಡಲಾಗುತ್ತಿಲ್ಲ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಟಾಟಾ ಕಂಪನಿಯು ತನ್ನ ಹೊಸ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೂ ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದ್ದು, ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಅನ್ವಯವಾಗಲಿದ್ದರೆ ಹೊಸ ಡಾರ್ಕ್ ಎಡಿಷನ್ ಮೇಲೆ ರೂ.20 ಸಾವಿರ ಎಕ್ಸ್‌ಚೆಂಜ್ ಆಫರ್ ಲಭ್ಯವಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಹೊಸ ಆಫರ್‌ಗಳಲ್ಲಿ ಕಂಪನಿಯು ನ್ಯೂ ಜನರೇಷನ್ ಸಫಾರಿ, ಆಲ್‌ಟ್ರೊಜ್, ಟಿಯಾಗೋ ಎನ್ಆರ್‌ಜಿ, ನೆಕ್ಸಾನ್ ಇವಿ ಆವೃತ್ತಿಗಳ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲವಾದರೂ ಡೀಲರ್ಸ್ ಮಟ್ಟದಲ್ಲಿ ದಸರಾ ವಿಶೇಷವಾಗಿ ವಿವಿಧ ಆಫರ್‌ಗಳು ಲಭ್ಯವಿದ್ದು, ಹೊಸ ಕಾರುಗಳ ಬೇಡಿಕೆಗೆ ಅನುಗುಣವಾಗಿ ಟಾಟಾ ಕಂಪನಿಯು ಮತ್ತಷ್ಟು ಹೊಸ ಕಾರುಗಳನ್ನು ರಸ್ತೆಗಿಳಿಸುತ್ತಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದು ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಶೀಘ್ರದಲ್ಲೇ ಪಂಚ್ ಮೈಕ್ರೊ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಟಾಟಾ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಅಲ್ಫಾ ಪ್ಲಾಟ್‌ಫಾರ್ಮ್ ಆಧರಿಸಿರುವ ಹೊಸ ಪಂಚ್ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತ್ಯುತ್ತಮ ವಿನ್ಯಾಸ, ಬಲಿಷ್ಠ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರವಾಗಿ ಗ್ರಾಹಕರನ್ನು ಸೆಳೆಯಲಿದೆ.

ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡುತ್ತಿದೆ Tata Motors

ಪಂಚ್ ಮೈಕ್ರೊ ಎಸ್‌ಯುವಿ ಕಾರಿನಲ್ಲಿ ಟಾಟಾ ಕಂಪನಿಯು ಟಿಯಾಗೋ ಮಾದರಿಯಲ್ಲಿರುವ 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದ್ದು, ಇದೇ ತಿಂಗಳು 20ರಂದು ಬಿಡುಗಡೆಯಾಗಲಿರುವ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8 ಲಕ್ಷ ಬೆಲೆ ಹೊಂದಿರಬಹುದೆಂದು ಅಂದಾಜಿಸಲಾಗಿದೆ.

Article Published On: Thursday, October 7, 2021, 8:45 [IST]
English summary
Tata motors announced discount offers and benefits for festival
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+