ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಆಟೋ ಬಿಡಿಭಾಗಗಳ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಕಳೆದ ತಿಂಗಳು ಬೆಲೆ ಏರಿಕೆ ಮಾಡಿದ್ದ ಪ್ರಮುಖ ಕಾರು ಕಂಪನಿಗಳು ಇದೀಗ ಮತ್ತೊಮ್ಮೆ ಹೊಸ ವಾಹನಗಳ ಬೆಲೆ ಪರಿಷ್ಕರಣೆಗೆ ಸಿದ್ದವಾಗಿವೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ. ಟಾಟಾ ಮೋಟಾರ್ಸ್ ಕಂಪನಿಯು ಸಹ ಜನವರಿ 1ರಿಂದಲೇ ಬೆಲೆ ಹೆಚ್ಚಳ ಮಾಡುವುದಾಗಿ ಸುಳಿವು ನೀಡಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ವಾಹನ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ಹೊಸ ವಾಹನಗಳ ದರದಲ್ಲಿ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, ಹೊಸ ವರ್ಷದಿಂದ ಹೊಸ ಕಾರುಗಳು ಮತ್ತಷ್ಟು ದುಬಾರಿಯಾಗಲಿವೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಉತ್ಪಾದನಾ ವೆಚ್ಚಗಳನ್ನು ಸರಿದೂಗಿಸಲು ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.2 ರಷ್ಟು ಬೆಲೆ ಹೆಚ್ಚಿಸುತ್ತಿದ್ದು, ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯು ಸರಾಸರಿಯಾಗಿ ರೂ. 50 ಸಾವಿರದಿಂದ ರೂ.1.20 ಲಕ್ಷದಷ್ಟು ದುಬಾರಿಯಾಗಿವೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 80 ಸಾವಿರದಿಂದ ರೂ. 1.50 ಲಕ್ಷದಷ್ಟು ಬೆಲೆ ಹೆಚ್ಚಳವಾಗಿದ್ದು, ಐಷಾರಾಮಿ ಕಾರುಗಳ ಬೆಲೆಯು ಎಕ್ಸ್‌ಶೋರೂಂ ದರದಲ್ಲಿ ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ. 2 ಲಕ್ಷದಿಂದ ರೂ. 5 ಲಕ್ಷದ ತನಕ ದುಬಾರಿಯಾಗಿವೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳ ಮತ್ತು ಕೊರತೆಯ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಕಳೆದ ಜನವರಿ, ಏಪ್ರಿಲ್‌, ಜುಲೈ ಮತ್ತು ಅಕ್ಟೋಬರ್‌ನಲ್ಲಿ ಪ್ರಮುಖ ಕಾರುಗಳ ಬೆಲೆ ಏರಿಕೆಯಾಗಿದ್ದು, ಇದೀಗ ಮತ್ತೊಮ್ಮೆ ದರ ಹೆಚ್ಚಿಸುತ್ತಿದೆ. ಜನವರಿ 1ರಿಂದ ಅನ್ವಯವಾಗುವಂತೆ ಹೊಸ ದರ ಪಟ್ಟಿ ಬಿಡುಗಡೆಗೆ ಸಿದ್ದವಾಗಿದ್ದು, ವಿವಿಧ ವಾಹನಗಳ ಬೆಲೆಯಲ್ಲಿ ಶೇ. 1 ರಿಂದ ಶೇ. 2.50 ರಷ್ಟು ಬೆಲೆ ಹೆಚ್ಚಳವಾಗಬಹುದಾಗಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿ ಹೊಸ ಕಾರುಗಳಿಗೆ ಬೇಡಿಕೆ ಹೆಚ್ಚಿದ್ದರೂ ಕೂಡಾ ಬಿಡಿಭಾಗಗಳ ಕೊರತೆ ಹಿನ್ನಲೆಯಲ್ಲಿ ವಾಹನ ಮಾರಾಟದಲ್ಲಿ ಪ್ರಮುಖ ಕಾರು ಕಂಪನಿಗಳು ಹಿನ್ನಡೆ ಅನುಭವಿಸುತ್ತಿದ್ದು, ಜಾಗತಿಕ ಮಾರುಕಟ್ಟೆಯಲ್ಲಿನ ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕಾರಿನ ಬೆಲೆ ಹೆಚ್ಚಳಕ್ಕೆ ಕಾರಣವಾಗಿರುವುದಲ್ಲದೆ ವಿತರಣೆ ಅವಧಿಯಲ್ಲೂ ಹೆಚ್ಚಳಕ್ಕೆ ಕಾರಣವಾಗಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಎಲೆಕ್ಟ್ರಾನಿಕ್ ಚಿಪ್(ಸೆಮಿ ಕಂಡಕ್ಟರ್) ಕೊರತೆಯು ಆಟೋ ಉತ್ಪಾದನಾ ಕಂಪನಿಗಳಿಗೆ ಸಂಕಷ್ಟಕ್ಕಿಡು ಮಾಡಿದ್ದು, ಹೊಸ ವಾಹನಗಳಿಗೆ ಹೆಚ್ಚಿನ ಬೇಡಿಕೆಯಿದ್ದರೂ ಉತ್ಪಾದನೆಯನ್ನು ತೀವ್ರಗೊಳಿಸಲು ಅಗತ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಕಾಡುತ್ತಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಸೆಮಿಕಂಡಕ್ಟರ್ ಕೊರತೆ ನಡುವೆಯೂ ಟಾಟಾ ಮೋಟಾರ್ಸ್ ಕಂಪನಿಯು ಸಹ ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಒಂದೂವರೆ ವರ್ಷದಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಳೆದ ವರ್ಷದ ಕಾರು ಮಾರಾಟ ಪ್ರಮಾಣಕ್ಕಿಂತಲೂ ಇದೀಗ ಮೂರು ಪಟ್ಟು ಹೆಚ್ಚಳವಾಗಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಇತ್ತೀಚೆಗೆ ಬಿಡುಗಡೆಯಾದ ಪಂಚ್ ಮೈಕ್ರೊ ಎಸ್‌ಯುವಿ ಸಹ ಟಾಟಾ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಮೈಕ್ರೊ ಎಸ್‌ಯುವಿ ಮಾದರಿಗಳಿಗೆ ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರಿನ ಮೂಲಕ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಶೇ.10ರಷ್ಟು ಪಾಲು ಹೊಂದುವ ವಿಶ್ವಾಸದಲ್ಲಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರು ಪ್ಯೂರ್, ಅಡ್ವೆಂಚರ್, ಅಕಾಂಪ್ಲಿಶೆಡ್ ಮತ್ತು ಕ್ರಿಯೆಟಿವ್ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ಮಾದರಿಗಳ ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.09 ಲಕ್ಷ ಬೆಲೆ ಹೊಂದಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಪಂಚ್ ಕಾರಿನಲ್ಲಿ ಪ್ಯೂರ್ ವೆರಿಯೆಂಟ್ ಆರಂಭಿಕ ಮಾದರಿಯಾಗಿ ಮಾರಾಟಗೊಳ್ಳಲಿದ್ದರೆ ಕ್ರಿಯೆಟಿವ್ ಮಾದರಿಯು ಟಾಪ್ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಬೆಸ್ ವೆರಿಯೆಂಟ್‌ನಲ್ಲೂ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್‌ಗಳನ್ನು ನೀಡಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಸೆಗ್ಮೆಂಟ್ ಬೆಸ್ಟ್ ಫಿಚರ್ಸ್‌ಗಳೊಂದಿಗೆ ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿರುವ ಟಾಟಾ ಪಂಚ್ ಕಾರಿನಲ್ಲಿ ಕಂಪನಿಯು 1.2-ಲೀಟರ್ ರಿವೊಟ್ರಾನ್ ತ್ರಿ ಸಿಲಿಂಡರ್ ನ್ಯಾಚುರಲ್ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಪರಿಚಯಿಸಿದೆ. 1.2-ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 83 ಬಿಎಚ್‌ಪಿ ಉತ್ಪಾದನಾ ಗುಣಹೊಂದಿದೆ.

ಹೊಸ ವರ್ಷದಿಂದ ದರ ಏರಿಕೆ ಘೋಷಿಸಿದ ಟಾಟಾ ಮೋಟಾರ್ಸ್

ಹೊಸ ಕಾರು 3840 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1635 ಎಂಎಂ ಎತ್ತರದೊಂದಿಗೆ 2450 ಎಂಎಂ ವ್ಹೀಲ್ ಬೇಸ್, 187 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್‌ನೊಂದಿಗೆ ಪ್ರತಿ ಮಾದರಿಯಲ್ಲೂ ಕಂಪನಿಯು ಅತ್ಯುತ್ತಮ ಫೀಚರ್ಸ್‌ ಹೊಂದಿದೆ.

Most Read Articles

Kannada
English summary
Tata motors announces price hike from 2022 january details
Story first published: Sunday, December 12, 2021, 14:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X