Just In
- 3 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 5 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
- 6 hrs ago
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ 2021ರ ಮಿನಿ 3 ಡೋರ್ ಫೇಸ್ಲಿಫ್ಟ್
- 7 hrs ago
ಪ್ರೀಮಿಯಂ ಕಾರುಗಳಲ್ಲಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿ ಮಾದರಿಯೇ ಬೆಸ್ಟ್
Don't Miss!
- Sports
ಐಎಸ್ಎಲ್: ಕೊನೆಯಲ್ಲಿ ಗೌರವದೊಂದಿಗೆ ನಿರ್ಗಮಿಸಿದ ಒಡಿಶಾ
- News
ಕಣಿವೆ ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ನಿಲ್ಲಿಸುವುದಿಲ್ಲ: ಭಾರತೀಯ ಸೇನೆ
- Movies
ಕಾಮಾಟಿಪುರದ ನಿಜ ಕತೆಗೆ ಅಜಯ್ ದೇವಗನ್ ಎಂಟ್ರಿ
- Lifestyle
ಮಾರ್ಚ್ ತಿಂಗಳಲ್ಲಿ ಹುಟ್ಟಿದವರು ಈ ವ್ಯಕ್ತಿತ್ವ ಹೊಂದಿರುತ್ತಾರೆ!!
- Finance
ಮತ್ತಷ್ಟು ಇಳಿಕೆಗೊಂಡ ಚಿನ್ನದ ಬೆಲೆ: ಫೆಬ್ರವರಿ 27ರ ಬೆಲೆ ಹೀಗಿದೆ
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ವರ್ಷದ ಆರಂಭದಲ್ಲೇ ಭಾರೀ ಪ್ರಮಾಣದ ಕಾರು ಮಾರಾಟ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಕಂಪನಿಯು 2021ರ ಜನವರಿ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

2020ರ ಜನವರಿ ಅವಧಿಯಲ್ಲಿ 13,893 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಕಂಪನಿಯು 2021ರ ಜನವರಿಯಲ್ಲಿ 26,980 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.94 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ತಿಂಗಳ ವಾಹನ ಮಾರಾಟದಲ್ಲಿ ಶೇ.20 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಕಂಪನಿಯು ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಸದ್ಯ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನಕ್ಕೇರಿರುವ ಟಾಟಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಮೂಲಕ ಪ್ರತಿ ತಿಂಗಳು 40 ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ.

ಟಾಟಾ ಬಿಡುಗಡೆ ಮಾಡುವ ಪ್ರಮುಖ ಕಾರುಗಳಲ್ಲಿ ಸಫಾರಿ ಎಸ್‌ಯುವಿ ಮತ್ತು ಎಂಟ್ರಿ ಲೆವಲ್‌ನಲ್ಲಿ ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಕಾರುಗಳು ಪ್ರಮುಖವಾಗಿದ್ದು, ಹೊಸ ಕಾರುಗಳು ಮೂಲಕ ಮಾರುತಿ ಸುಜುಕಿಗೆ ಮತ್ತು ಹ್ಯುಂಡೈ ಕಂಪನಿಗೆ ತೀವ್ರ ಪೈಪೋಟಿ ನೀಡಲಿದೆ.

ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ. ಹೀಗಾಗಿ ಹೊಸ ಕಾರುಗಳ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಗ್ರಾಹಕರ ಬೇಡಿಕೆಯೆಂತೆ ಸದ್ಯ ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಟಾಟಾ ಹೊಸ ಕಾರುಗಳಲ್ಲಿ ನ್ಯೂ ಜನರೇಷನ್ ಸಫಾರಿ ಎಸ್‌ಯುವಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇನ್ನು ಟಾಟಾ ಮೋಟಾರ್ಸ್ ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವನ್ನು ಜನವರಿ 21ರಿಂದಲೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ದರ ಹೆಚ್ಚಳ ಮಾಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ದರಪಟ್ಟಿಯಲ್ಲಿ ಟಾಟಾ ವಿವಿಧ ಕಾರುಗಳು ಕನಿಷ್ಠ ರೂ. 500ರಿಂದ ಗರಿಷ್ಠ ರೂ. 26 ಸಾವಿರ ತನಕ ದುಬಾರಿಯಾಗಿದ್ದು, ಪ್ರತಿ ಕಾರು ಮಾದರಿಗೂ ಪ್ರತ್ಯೇಕ ದರ ಪಟ್ಟಿ ಬಿಡುಗಡೆ ಮಾಡಿದೆ.