ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಟಾಟಾ ಮೋಟಾರ್ಸ್ ಕಂಪನಿಯು 2021ರ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

2020ರ ಮಾರ್ಚ್ ಅವಧಿಯಲ್ಲಿ 5,676 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ಟಾಟಾ ಕಂಪನಿಯು 2021ರ ಮಾರ್ಚ್ ಅವಧಿಯಲ್ಲಿ ಒಟ್ಟು 29,654 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ವಾರ್ಷಿಕವಾಗಿ ಶೇ.422 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ತಿಂಗಳ ವಾಹನ ಮಾರಾಟದಲ್ಲಿ ಶೇ.9.3 ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಕಂಪನಿಯು ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರುಗಳ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಕಾರುಗಳ ಮಾರಾಟದಲ್ಲಿನ ವಾರ್ಷಿಕ ಬೆಳವಣಿಗೆಯಲ್ಲಿ ಕಳೆದ 9 ವರ್ಷಗಳ ಅವಧಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ವರ್ಷದ ಅಗಸ್ಟ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಪ್ರಯಾಣಿಕರ ವಾಹನದ ಜೊತೆಗೆ ವಾಣಿಜ್ಯ ವಾಹನ ಮಾರಾಟದಲ್ಲೂ ಕೂಡಾ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಅತ್ಯುತ್ತಮ ದೇಶಿಯ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಬಿಡುಗಡೆಯಾಗಿರುವ ಹೊಸ ವಾಹನಗಳು ಟಾಟಾ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಲ್ಲಿವೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನಕ್ಕೇರಿರುವ ಟಾಟಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಮತ್ತಷ್ಟು ಹೊಸ ಕಾರುಗಳ ಮೂಲಕ ಪ್ರತಿ ತಿಂಗಳು 40 ಸಾವಿರ ಯುನಿಟ್ ಮಾರಾಟ ಗುರಿಹೊಂದಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಸಫಾರಿ ಮತ್ತು ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಕಾರು ಮಾದರಿಯು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಟಾಟಾ ಕಂಪನಿಯು ಹೊಸ ಕಾರುಗಳನ್ನು OMEGA ಕಾರು ಉತ್ಪಾದನಾ ತಂತ್ರಜ್ಞಾನದಡಿಯಲ್ಲಿ ಕಾರು ಅಭಿವೃದ್ದಿ ಮಾಡುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯುತ್ತಿದೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಹೀಗಾಗಿ ಹೊಸ ಕಾರುಗಳ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ನ್ಯೂ ಜನರೇಷನ್ ಸಫಾರಿ ಕಾರು ಮಾದರಿಯು ಉತ್ತಮ ಬೆಲೆ ಪಟ್ಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಕಾರು ಮಾದರಿಗಳೊಂದಿಗೆ ಸಫಾರಿ ಎಸ್‌ಯುವಿ ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿದ್ದು, ಹೊಸ ಕಾರು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಎನ್ನುವ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಮಾರಾಟಗೊಳ್ಳುತ್ತಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಸಫಾರಿ ಸ್ಟ್ಯಾಂಡರ್ಡ್ ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.14.69 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯಾದ ಅಡ್ವೆಂಚರ್ ಮಾದರಿಯು ರೂ. 21.45 ಲಕ್ಷ ಬೆಲೆ ಹೊಂದಿದ್ದು, ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್, ಎಕ್ಸ್‌ಜೆಡ್ ಪ್ಲಸ್ ಮತ್ತು ಎಕ್ಸ್‌ಜೆಡ್ ಪ್ಲಸ್ ಅಡ್ವೆಂಚರ್ ಪೆರಸೊನಾ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿರಲಿದೆ.

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಸಫಾರಿ ಎಸ್‌ಯುವಿಯಲ್ಲಿ ಆರು ಸ್ಪೀಡ್ ಮ್ಯಾನುವಲ್ ಅಥವಾ ಆರು ಸ್ಪೀಡ್ ಆಟೋಮ್ಯಾಟಿಕ್ ಟಾರ್ಕ್ ಕನ್ವರ್ಟರ್ ಗೇರ್‌ಬಾಕ್ಸ್ ಆಯ್ಕೆ ಹೊಂದಿರುವ 2.0-ಲೀಟರ್ ಕ್ರಿಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, 168-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಇನ್ನು ಸಫಾರಿ ಬಿಡುಗಡೆಗೊಳಿಸಿರುವ ಟಾಟಾ ಮೋಟಾರ್ಸ್ ಮುಂಬರುವ ಕೆಲವೇ ತಿಂಗಳಿನಲ್ಲಿ ಮೈಕ್ರೊ ಎಸ್‌ಯುವಿ ಬಿಡುಗಡೆ ಮಾಡಲಿದ್ದು, ಮೈಕ್ರೊ ಎಸ್‌ಯುವಿ ಮಾದರಿಯು ಬಜೆಟ್ ಕಾರುಗಳ ವಿಭಾಗದಲ್ಲಿ ಟಾಟಾ ಕಂಪನಿಗೆ ಭಾರೀ ಪ್ರಮಾಣದ ಆದಾಯ ತಂದುಕೊಡಲಿದೆ.

Most Read Articles

Kannada
English summary
Tata Motors Car Sales In March 2021. Read in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X