Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಲೆ ಏರಿಕೆಯ ನಂತರ ಹೊಸ ದರಪಟ್ಟಿ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವು ಈ ತಿಂಗಳ 21ರಿಂದಲೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಟಾಟಾ ವಿವಿಧ ಕಾರುಗಳು ಕನಿಷ್ಠ ರೂ. 500ರಿಂದ ಗರಿಷ್ಠ ರೂ. 26 ಸಾವಿರ ತನಕ ದುಬಾರಿಯಾಗಿದ್ದು, ಪ್ರತಿ ಕಾರು ಮಾದರಿಗೂ ಪ್ರತ್ಯೇಕ ದರ ಪಟ್ಟಿ ಬಿಡುಗಡೆ ಮಾಡಿದೆ.

2020ರ ಅಗಸ್ಟ್‌ನಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ.

ಟಾಟಾ ಮೋಟಾರ್ಸ್ ಕಂಪನಿಯು ಜನವರಿ 21ರ ನಂತರ ಹೊಸ ಕಾರುಗಳ ಬೆಲೆ ಏರಿಕೆಯಾಗುವಂತೆ ಹೊಸ ದರ ನಿಗದಿಪಡಿಸಲಾಗಿದ್ದು, ಕೋವಿಡ್ 19 ಪರಿಣಾಮ ಆರ್ಥಿಕ ಸಂಕಷ್ಟು ಎದುರಾಗಿದ್ದರೂ ಹೊಸ ಕಾರುಗಳ ಮಾರಾಟದಲ್ಲಿ ಟಾಟಾ ಮೋಟಾರ್ಸ್ ಕಳೆದ ಕೆಲ ತಿಂಗಳಿನಿಂದ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ಸದ್ಯ ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಟಾಟಾ ಹೊಸ ಕಾರುಗಳಲ್ಲಿ ನ್ಯೂ ಜನರೇಷನ್ ಸಫಾರಿ ಎಸ್‌ಯುವಿಯು ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ.

ಹೊಸ ದರ ಪಟ್ಟಿಯಲ್ಲಿ ಆರಂಭಿಕ ಕಾರು ಟಿಯಾಗೋ ಕಾರು ಮಾದರಿಯು ಕನಿಷ್ಠ ರೂ. 8,500 ರಿಂದ ಗರಿಷ್ಠ ರೂ.15,500 ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4,85,500ರಿಂದ ಟಾಪ್ ಎಂಡ್ ಮಾದರಿಯು ರೂ.6,84,500 ಬೆಲೆ ಹೊಂದಿದೆ.

ಟಿಗೋರ್ ಸೆಡಾನ್ ಕಾರು ಮಾದರಿಯು ಹೊಸದರಪಟ್ಟಿಯಲ್ಲಿ ಕನಿಷ್ಠ ರೂ. 10,500 ರಿಂದ ಗರಿಷ್ಠ ರೂ.14,500 ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5,49,500 ರಿಂದ ಟಾಪ್ ಎಂಡ್ ಮಾದರಿಯು ರೂ.7,63,500 ಬೆಲೆ ಹೊಂದಿದೆ.

ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಹೊಸದರಪಟ್ಟಿಯಲ್ಲಿ ಕನಿಷ್ಠ ರೂ. 500ರಿಂದ ಗರಿಷ್ಠ ರೂ.15 ಸಾವಿರ ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7,09,900 ರಿಂದ ಟಾಪ್ ಎಂಡ್ ಮಾದರಿಯು ರೂ.12,79,500 ಬೆಲೆ ಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸದರಪಟ್ಟಿಯಲ್ಲಿ ಹ್ಯಾರಿಯರ್ ಕಾರು ಮಾದರಿಯು ರೂ. 9,500 ರಿಂದ ಗರಿಷ್ಠ ರೂ. 26,000 ಹೆಚ್ಚುವರಿ ಬೆಲೆ ಹೊಂದಿದ್ದು, ಹೊಸ ಕಾರು ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13,99,500 ರಿಂದ ಟಾಪ್ ಎಂಡ್ ಮಾದರಿಯು ರೂ.20,45,500 ಬೆಲೆ ಹೊಂದಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ದರಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರಪಟ್ಟಿಯಲ್ಲಿ ರೂ. 15 ಸಾವಿರ ಹೆಚ್ಚಳದೊಂದಿಗೆ ಇವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು 16.40 ಲಕ್ಷ ಬೆಲೆ ಹೊಂದಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಕಳೆದ ತಿಂಗಳ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಕಳೆದ ವರ್ಷಕ್ಕಿಂತಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಹಬ್ಬದ ಋುತುಗಳ ನಂತರವೂ ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಡಿಸೆಂಬರ್ ಅವಧಿಯಲ್ಲಿನ ಕಾರು ಮಾರಾಟದಲ್ಲಿ ಶೇ.84 ರಷ್ಟು ಹೆಚ್ಚು ಬೆಳವಣಿಗೆ ಸಾಧಿಸಿದೆ.