Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 5 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನೆಕ್ಸಾನ್ ಇವಿ ಕಾರು ಮಾರಾಟದಲ್ಲಿ ಯಶಸ್ವಿ ಒಂದು ವರ್ಷ ಪೂರೈಸಿದ ಟಾಟಾ ಮೋಟಾರ್ಸ್
ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬಿಡುಗಡೆಗೊಳಿಸಿ ಯಶಸ್ವಿ ಒಂದು ವರ್ಷ ಪೂರೈಸಿದ್ದು, ಹೊಸ ಕಾರು ಬಿಡುಗಡೆಯಾದ ಮೊದಲನೇ ವರ್ಷದಲ್ಲೇ ಉತ್ತಮ ಬೇಡಿಕೆಯೊಂದಿಗೆ ಹಲವಾರು ಬದಲಾವಣೆಗಳಿಗೆ ಕಾರಣವಾಗಿದೆ.

ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆಯಿಂದಾಗಿ ಇವಿ ವಾಹನಗಳ ಮಾರಾಟವು ಹಿನ್ನಡೆ ಅನುಭವಿಸುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳ ಕೊರತೆ ನಡುವೆಯೂ ಟಾಟಾ ನೆಕ್ಸಾನ್ ಇವಿ ಕಾರು ನೀರಿಕ್ಷೆ ಮೀರಿ ಬೇಡಿಕೆ ಪಡೆದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಇದೀಗ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದರಿಂದ ನೆಕ್ಸಾನ್ ಇವಿ ಮಾರಾಟದಲ್ಲಿ ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಬೇಡಿಕೆ ಹರಿದುಬಂದಿದ್ದು, ಹೊಸ ಕಾರು ಒಂದು ವರ್ಷದ ಅವಧಿಯಲ್ಲಿ 3 ಸಾವಿರ ಯುನಿಟ್ ಮಾರಾಟಗೊಂಡಿದೆ.

ನೆಕ್ಸಾನ್ ಇವಿ ಕಾರು ಬಿಡುಗಡೆಯಾದ 8 ತಿಂಗಳಾದರೂ ಕೇವಲ 1 ಸಾವಿರ ಯುನಿಟ್ ಮಾರಾಟ ಮಾಡಲು ಹರಸಾಹಸಪಟ್ಟಿದ್ದ ಟಾಟಾ ಮೋಟಾರ್ಸ್ ಕಂಪನಿಯು ಕಳೆದ 4 ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಡೀಸೆಲ್ ವಾಹನ ನಿರ್ವಹಣಾ ವೆಚ್ಚವು ಹೆಚ್ಚುತ್ತಿರುವುದರಿಂದ ಹಲವು ಗ್ರಾಹಕರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಆಸಕ್ತಿ ತೋರುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್‌ಗಳನ್ನು ಹೊಂದಿರುವ ನೆಕ್ಸಾನ್ ಇವಿ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಬೇಡಿಕೆ ಪಡೆದುಕೊಳುತ್ತಿದೆ.

ಹೊಸ ನೆಕ್ಸಾನ್ ಇವಿ ಕಾರಿನ ಮಾಲೀಕತ್ವ ಹೊಂದಿರುವ ಬಹುತೇಕ ಗ್ರಾಹಕರು ಹೊಸ ಕಾರಿನ ಫೀಚರ್ಸ್‌ಗಳು ಮತ್ತು ಕಾರ್ಯಕ್ಷಮತೆ ಕುರಿತು ವರ್ಷದ ಸಂಭ್ರಮದಲ್ಲಿ ಸಂತಸ ವ್ಯಕ್ತಪಡಿಸಿದ್ದು, ಭವಿಷ್ಯದ ವಾಹನ ಮಾದರಿಯ ಬಳಕೆ ಕುರಿತು ಹಲವು ಹಲವು ಅಚ್ಚರಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇನ್ನು ಹೊಸ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಮತ್ತು ಹ್ಯುಂಡೈ ಕೊನಾ ಕಾರುಗಳಿಗೆ ಪೈಪೋಟಿಯಾಗಿ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದೆ.

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಮೂರು ವೆರಿಯೆಂಟ್‌ನೊಂದಿಗೆ ಖರೀದಿಗೆ ಲಭ್ಯವಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.16.25 ಲಕ್ಷ ಬೆಲೆ ಪಡೆದುಕೊಂಡಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರನ್ನು ಸಾಮಾನ್ಯ ಮಾದರಿಯ ನೆಕ್ಸಾನ್ ಫೇಸ್‍ಲಿಫ್ಟ್ ಸ್ಟ್ಯಾಂಡರ್ಡ್ ಕಾರಿನ ಆಧಾರದ ಮೇಲೆ ತಯಾರಿಸಲಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

ಎಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಮೈಲೇಜ್ ಸುಲಭವಾಗಿ ನೀಡುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಪ್ರತಿ ಆವೃತ್ತಿಯಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆ ಉತ್ತಮ ಸೇಫ್ಟಿ ಫೀಚರ್ಸ್ ಜೋಡಿಸಲಾಗಿದ್ದು, ನೆಕ್ಸಾನ್ ಇವಿ ನಂತರ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಟಾಟಾ ಮೋಟಾರ್ಸ್ ಕಂಪನಿಯು ಬೃಹತ್ ಯೋಜನೆ ಸಿದ್ದಪಡಿಸಿದೆ.