ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಲಾಕ್‌‌ಡೌನ್ ಪರಿಣಾಮ ಆಟೋ ಉದ್ಯಮದ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಇದರ ನಡುವೆ ಲಾಕ್‌ಡೌನ್ ಅವಧಿಯಲ್ಲೇ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಟಾಟಾ ಮೋಟಾರ್ಸ್ ಕಂಪನಿಯು ವಿಸ್ತರಣೆ ಮಾಡಿದೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ. ಆದರೆ ಲಾಕ್‌ಡೌನ್ ಅವಧಿಯಲ್ಲಿ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ವಾರಂಟಿ ಅವಧಿಯು ಮುಗಿದುಹೋಗಲಿದ್ದು, ಹೊಸ ವಾಹನ ಖರೀದಿದಾರರಿಗೆ ಟಾಟಾ ಮೋಟಾರ್ಸ್ ಕಂಪನಿಯು ಸಿಹಿಸುದ್ದಿ ನೀಡಿದೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ವಾರಂಟಿ ಮುಕ್ತಾಯವಾಗುವುದರಿಂದ ಗ್ರಾಹಕರ ಸೇವೆಗಳು ಕಡಿತವಾಗುವ ವಿಚಾರವಾಗಿ ಸ್ಪಷ್ಟನೆ ನೀಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮೇ ತಿಂಗಳಿನಲ್ಲಿ ಮುಕ್ತಾಯಗೊಳ್ಳಬೇಕಿರುವ ವ್ಯಯಕ್ತಿಕ ಬಳಕೆಯ ಕಾರುಗಳು ಮತ್ತು ವಾಣಿಜ್ಯ ವಾಹನಗಳ ವಾರಂಟಿಯನ್ನು ಜೂನ್ 30ರ ತನಕ ಮುಂದೂಡಿಕೆ ಮಾಡಿದೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ವಿವಿಧ ರಾಜ್ಯಗಳಲ್ಲಿ ವಿಧಿಸಲಾಗಿರುವ ಲಾಕ್‌‌ಡೌನ್ ಸಂದರ್ಭದಲ್ಲಿ ವಾರಂಟಿ ಪೂರ್ಣಗೊಳ್ಳುವ ವಾಹನಗಳಿಗೆ ಟಾಟಾ ಕಂಪನಿಯು ಹೆಚ್ಚುವರಿ 1 ತಿಂಗಳ ಸ್ಟ್ಯಾಂಡರ್ಡ್ ವಾರಂಟಿ ಘೋಷಣೆ ಮಾಡಿದ್ದು, ಗ್ರಾಹಕರು ಮತ್ತು ಸಿಬ್ಬಂದಿಯ ಆರೋಗ್ಯ ದೃಷ್ಠಿಯಿಂದ ವಿಸ್ತರಿತ ವಾರಂಟಿ ನೀಡುತ್ತಿದೆ. ವಿಸ್ತರಿತ ವಾರಂಟಿಯಿಂದಾಗಿ ಗ್ರಾಹಕರು ಮುಂದಿನ ದಿನಗಳಲ್ಲಿ ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಗ್ರಾಹಕರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದ್ದು, ಸುರಕ್ಷತೆಯ ದೃಷ್ಠಿಯಿಂದ ವಾಹನಗಳ ಖರೀದಿ ಮತ್ತು ಗ್ರಾಹಕರ ಸೇವೆಗಳಿಗಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ವಾರಂಟಿ ವಿಸ್ತರಣೆ ಕುರಿತಂತೆ ಗ್ರಾಹಕರ ವಿಚಾರಣೆಗಾಗಿ 1800 209 7979 ಸಹಾಯವಾಣಿಯನ್ನು ಸಹ ತೆರೆದಿದ್ದು, ವಾಹನ ಮಾರಾಟದ ನಂತರದ ಯಾವುದೇ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಇನ್ನು ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್ ಘೋಷಣೆ ಮಾಡಲಾಗಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಮತ್ತೆ ನೆಲಕಚ್ಚುವ ಭೀತಿಯಲ್ಲಿದೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೆ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಂತ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹೊಸ ವಾಹನಗಳ ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಬಂದ್ ಮಾಡಿವೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ಕೆಲವೇ ಕೆಲವು ಕಂಪನಿಗಳು ಮಾತ್ರ ವಾಹನ ಉತ್ಪಾದನೆ ಕೈಗೊಳ್ಳುತ್ತಿವೆ.

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಇದರ ನಡುವೆ ಹೊಸ ವಾಹನಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ತೀವ್ರ ಕಂಡಿರುವುದಲ್ಲದೆ ಈಗಾಗಲೇ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದ ಲಕ್ಷಾಂತರ ಹೊಸ ವಾಹನ ಖರೀದಿದಾರರು ಈಗಾಗಲೇ ಮಾಡಲಾಗಿರುವ ಬುಕ್ಕಿಂಗ್ ಹಿಂಪಡೆಯುತ್ತಿದ್ದಾರೆ.

MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ವಾಣಿಜ್ಯ ವಾಹನಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಸದ್ಯದ ಪರಿಸ್ಥಿತಿಯಲ್ಲಿ ಹೊಸ ವಾಹನ ಖರೀದಿಯು ಆರ್ಥಿಕ ಸಂಕಷ್ಟ ಇನ್ನಷ್ಟು ಹೆಚ್ಚಳವಾಗುವ ಭೀತಿಯಿಂದ ಹೊಸ ವಾಹನ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಈ ಪರಿಸ್ಥಿತಿ ಸುಧಾರಣೆಯಾಗಲು ಇನ್ನು ಕೆಲ ತಿಂಗಳುಗಳೇ ಬೇಕಾಗಬಹುದು ಎನ್ನಲಾಗುತ್ತಿದೆ.

Article Published On: Wednesday, May 19, 2021, 18:37 [IST]
English summary
Tata Motors extends warranty and free service period for its commercial vehicles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+