ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಲಾಕ್‌‌ಡೌನ್ ಪರಿಣಾಮ ಆಟೋ ಉದ್ಯಮದ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಲಾಕ್‌ಡೌನ್ ಅವಧಿಯಲ್ಲೇ ಕೊನೆಗೊಳ್ಳಲಿರುವ ವಾಹನಗಳ ವಾರಂಟಿ ಅವಧಿಯನ್ನು ಟಾಟಾ ಮೋಟಾರ್ಸ್ ಕಂಪನಿಯು ವಿಸ್ತರಣೆ ಮಾಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ವಾಹನ ಮಾರಾಟಕ್ಕೆ ಕೆಲವು ಕಡೆಗಳಲ್ಲಿ ಷರತ್ತು ಬದ್ದ ಅವಕಾಶಗಳಿದ್ದರೂ ಗ್ರಾಹಕರ ಸೇವೆಗಳನ್ನು ಪೂರೈಸುವುದು ಆಟೋ ಉತ್ಪಾದನಾ ಕಂಪನಿಗಳಿಗೆ ಸವಾಲಿನ ಕೆಲಸವಾಗಿದೆ. ಆದರೆ ಲಾಕ್‌ಡೌನ್ ಅವಧಿಯಲ್ಲಿ ನಿಗದಿತ ಅವಧಿಯ ಸೇವೆಗಳನ್ನು ಪಡೆದುಕೊಳ್ಳದ ವಾಹನಗಳ ವಾರಂಟಿ ಅವಧಿಯು ಮುಗಿದುಹೋಗಲಿದ್ದು, ಹೊಸ ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ಸಿಹಿಸುದ್ದಿ ನೀಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಲಾಕ್‌ಡೌನ್ ಸಂದರ್ಭದಲ್ಲಿ ವಾಹನ ವಾರಂಟಿ ಮುಕ್ತಾಯವಾಗುವುದರಿಂದ ಗ್ರಾಹಕರ ಸೇವೆಗಳು ಕಡಿತವಾಗುವ ವಿಚಾರವಾಗಿ ಸ್ಪಷ್ಟನೆ ನೀಡಿರುವ ಟಾಟಾ ಮೋಟಾರ್ಸ್ ಕಂಪನಿಯು ಮೇ ತಿಂಗಳಿನಲ್ಲಿ ಮುಕ್ತಾಯಗೊಳ್ಳಬೇಕಿರುವ ಹೊಸ ಕಾರುಗಳ ವಾರಂಟಿಯನ್ನು ಜೂನ್ 30ರ ತನಕ ಮುಂದೂಡಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ವಿವಿಧ ರಾಜ್ಯಗಳಲ್ಲಿ ವಿಧಿಸಲಾಗಿರುವ ಲಾಕ್‌‌ಡೌನ್ ಸಂದರ್ಭದಲ್ಲಿ ವಾರಂಟಿ ಪೂರ್ಣಗೊಳ್ಳುವ ವಾಹನಗಳಿಗೆ ಹೆಚ್ಚುವರಿ 1 ತಿಂಗಳು ಸ್ಟ್ಯಾಂಡರ್ಡ್ ವಾರಂಟಿ ಘೋಷಣೆ ಮಾಡಿದ್ದು, ಗ್ರಾಹಕರು ಮತ್ತು ಸಿಬ್ಬಂದಿಯ ಆರೋಗ್ಯ ದೃಷ್ಠಿಯಿಂದ ವಿಸ್ತರಿತ ವಾರಂಟಿ ನೀಡುತ್ತಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ವಿಸ್ತರಿತ ವಾರಂಟಿಯಿಂದಾಗಿ ಗ್ರಾಹಕರು ಮುಂದಿನ ದಿನಗಳಲ್ಲಿ ಪರಿಸ್ಥಿತಿ ತುಸು ಸುಧಾರಣೆಗೊಂಡ ನಂತರ ಗ್ರಾಹಕರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದ್ದು, ಸುರಕ್ಷತೆಯ ದೃಷ್ಠಿಯಿಂದ ವಾಹನಗಳ ಖರೀದಿ ಮತ್ತು ಗ್ರಾಹಕರ ಸೇವೆಗಳಿಗಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡುತ್ತಿದೆ. ಇನ್ನು ಟಾಟಾ ಮೋಟಾರ್ಸ್ ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ವಿವಿಧ ಕಾರುಗಳ ಬೆಲೆಯನ್ನು ಕನಿಷ್ಠ ರೂ. 10 ಸಾವಿರದಿಂದ ಗರಿಷ್ಠ ರೂ. 36 ಸಾವಿರ ತನಕ ಹೆಚ್ಚಳ ಮಾಡಲಾಗಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಮೇ 8ರಿಂದ ಕಾರು ಖರೀದಿಸುವ ಗ್ರಾಹಕರಿಗೆ ಮಾತ್ರ ಹೊಸ ದರ ಅನ್ವಯವಾಗಿದೆ ಎಂಬುವುದನ್ನು ಸ್ಪಷ್ಟಪಡಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಬಿಡುಗಡೆಯಾದ ಸಫಾರಿ ಎಸ್‌ಯುವಿ ಕಾರು ಮಾದರಿಯ ಬೆಲೆಯಲ್ಲೂ ಹೆಚ್ಚಿಸಲಾಗಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಕಳೆದ ಜನವರಿಯಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಲಾಕ್‌ಡೌನ್ ಹಿನ್ನಲೆಯಲ್ಲಿ ಕಾರುಗಳ ವಾರಂಟಿ ಅವಧಿಯನ್ನು ವಿಸ್ತರಿಸಿದ ಟಾಟಾ ಮೋಟಾರ್ಸ್

ಗ್ರಾಹಕರ ಬೇಡಿಕೆಯೆಂತೆ ಟಾಟಾ ಮೋಟಾರ್ಸ್ ಸದ್ಯ ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್, ಟಿಯಾಗೋ, ಹ್ಯಾರಿಯರ್ ಮತ್ತು ನ್ಯೂ ಜನರೇಷನ್ ಸಫಾರಿ ಎಸ್‌ಯುವಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

More from DriveSpark

Article Published On: Tuesday, May 11, 2021, 21:00 [IST]
English summary
Tata Motors Extends Warranty and Free service period. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+