ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ವಿವಿಧ ಮಾದರಿಯ ಇವಿ ಆವೃತ್ತಿಗಳೊಂದಿಗೆ ಅತ್ಯುತ್ತಮ ಬೇಡಿಕೆ ದಾಖಲಿಸಿದ್ದು, ಶೇ. 71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ನೆಕ್ಸಾನ್ ಇವಿ(Nexon EV), ಟಿಗೋರ್ ಇವಿ(Tigor EV) ಮತ್ತು ಎಕ್ಸ್‌ಪ್ರೆಸ್-ಟಿ ಇವಿ(XPres-t EV) ಕಾರು ಮಾದರಿಗಳ ಮಾರಾಟದೊಂದಿಗೆ ಹೊಸ ದಾಖಲೆಗಳಿಗೆ ಕಾರಣವಾಗಿದ್ದು, 2018ರಿಂದ ಇದುವರೆಗೆ ಟಾಟಾ ಮೋಟಾರ್ಸ್ ಕಂಪನಿಯು ಬರೋಬ್ಬರಿ 11 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಇವಿ ಮಾರುಕಟ್ಟೆಯಲ್ಲಿ ಅಗ್ರಸ್ಥಾನಕೇರಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮತ್ತು ಟಿಗೋರ್ ಇವಿ ಮಾದರಿಗಳ ಮೂಲಕ ಪ್ರಯಾಣಿಕ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ವಾಣಿಜ್ಯ ವಾಹನ ಬಳಕೆದಾರರಿಗಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯು ಕ್ಯಾಬ್ ಸೇವಾ ವಿಭಾಗಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಎಲೆಕ್ಟ್ರಿಕ್ ವಾಹನ ಮಾರಾಟ ಆರಂಭಿಸಿದ ನಂತರ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಇವಿ ವಾಹನಗಳ ಮೂಲಕ ಉತ್ತಮ ಬೇಡಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಸೆಪ್ಟೆಂಬರ್ ಅವಧಿಯಲ್ಲಿಯೇ ಟಾಟಾ ಮೋಟಾರ್ಸ್ ಕಂಪನಿಯು 1078 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಸೆಪ್ಟೆಂಬರ್ ಅವಧಿಯಲ್ಲಿ ಕಾರು ಮಾರಾಟಕ್ಕಿಂತಲೂ ಶೇ.250 ರಷ್ಟು ಹೆಚ್ಚಳವಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ದಿನೇ ದಿನೇ ದುಬಾರಿಯಾಗುತ್ತಿರುವ ಇಂಧನಗಳ ಬೆಲೆ ಪರಿಣಾಮ ಹೊಸ ವಾಹನ ಖರೀದಿ ಯೋಜನೆಯಲ್ಲಿರುವ ಗ್ರಾಹಕರು ಇವಿ ವಾಹನ ಖರೀದಿಯತ್ತ ಆದ್ಯತೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಇವಿ ವಾಹನಗಳ ಮಾರಾಟವು ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿವೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಪ್ರಯಾಣಿಕರ ಬಳಕೆಯ ಎಲೆಕ್ಟ್ರಿಕ್ ಕಾರು ಪರಿಚಯಿಸಿದ ನಂತರ ಟಾಟಾ ಕಂಪನಿಯು ಇದುವರೆಗೆ ಸುಮಾರು 11 ಸಾವಿರ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ನೆಕ್ಸಾನ್ ಇವಿ ಕಾರು ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಗೆ ಹೊಸ ಆಯಾಮ ನೀಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಆರಂಭದಲ್ಲಿ ಟಿಗೋರ್ ಇವಿ ಪರಿಚಯಿಸಿದ್ದ ಟಾಟಾ ಮೋಟಾರ್ಸ್ ಕಂಪನಿಯು ತದನಂತರ ನೆಕ್ಸಾನ್ ಇವಿ ಮಾದರಿಯನ್ನು ಪರಿಚಯಿಸಿದ್ದು, ಕಂಪನಿಯು ಇತ್ತೀಚೆಗೆ ವಾಣಿಜ್ಯ ಬಳಕೆದಾರರಿಗಾಗಿ ಹೊಸದಾಗಿ ಎಕ್ಸ್‌ಪ್ರೆಸ್-ಟಿ ಇವಿ ಮಾದರಿಯ ಮಾರಾಟಕ್ಕೆ ಚಾಲನೆ ನೀಡಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಇದರ ಜೊತೆಗೆ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಮತ್ತಷ್ಟು ಇವಿ ವಾಹನಗಳ ಬಿಡುಗಡೆಗೆ ಬೃಹತ್ ಯೋಜನೆ ರೂಪಿಸಿದ್ದು, ಭವಿಷ್ಯ ಯೋಜನೆಗಾಗಿ ಕಂಪನಿಯು ಭಾರೀ ಪ್ರಮಾಣದ ಬಂಡವಾಳ ಹೂಡಿಕೆ ಮಾಡುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಪ್ರಸ್ತುತ ಮಾರುಕಟ್ಟೆಯಲ್ಲಿ ಮೂರು ಇವಿ ಕಾರು ಮಾದರಿಗಳನ್ನು ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹತ್ತು ಹೊಸ ಇವಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯ ಬೃಹತ್ ಯೋಜನೆಗಾಗಿ ಕೈಜೋಡಿಸಿರುವ ಟಿಪಿಜಿ ರೈಸ್ ಕ್ಲೈಮೆಟ್ ಕಂಪನಿಯು ಹೊಸ ಯೋಜನೆಯಲ್ಲಿ ಭಾರೀ ಪ್ರಮಾಣದ ಹೂಡಿಕೆಗೆ ಅಸ್ತು ಎಂದಿದ್ದು, ಮುಂದಿನ 2022ರ ಕೊನೆಯ ವೇಳೆಗೆ ವಿವಿಧ ಹಂತದಲ್ಲಿ ಒಟ್ಟು 1 ಬಿಲಿಯನ್ ಡಾಲರ್(ಅಂದಾಜು ರೂ. 7,500 ಕೋಟಿ) ಹೂಡಿಕೆ ಮಾಡಲು ಒಪ್ಪಿಗೆ ಸೂಚಿಸಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಅಮೆರಿಕದ ಟಿಪಿಜಿ ರೈಸ್ ಕ್ಲೈಮೆಟ್ ಕಂಪನಿಯು ತನ್ನ ಅಂಗಸಂಸ್ಥೆಯಾದ ಎಡಿಕ್ಯೂ ಇನ್ವೆಸ್ಟ್ ಕಂಪನಿಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯ ಹೊಸ ಇವಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದು, ಹೊಸ ಬಂಡವಾಳ ಹೂಡಿಕೆಯೂ ಟಾಟಾ ಮೋಟಾರ್ಸ್ ಕಂಪನಿಯ ಇವಿ ವಾಹನ ಉತ್ಪಾದನಾ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸಿಲಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಟಾಟಾ ಮೋಟಾರ್ಸ್ ಕಂಪನಿಯು ಇವಿ ವಾಹನ ಉತ್ಪಾದನೆಗಾಗಿ ಸದ್ಯ ಸಾಮಾನ್ಯ ಕಾರುಗಳ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಳಿಸಿ ಉತ್ಪಾದನೆ ಕೈಗೊಳ್ಳುತ್ತಿದ್ದು, ಕಂಪನಿಯು ಇವಿ ವಾಹನ ಉತ್ಪಾದನೆಗಾಗಿಯೇ ಪ್ರತ್ಯೇಕ ಉತ್ಪಾದನಾ ಘಟಕವನ್ನು ತೆರೆಯಲು ಮುಂದಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಶೇ.71ರಷ್ಟು ಮಾರುಕಟ್ಟೆ ಪಾಲು ತನ್ನದಾಗಿಸಿಕೊಂಡ Tata Motors

ಜೊತೆಗೆ ಇವಿ ವಾಹನಗಳ ಅಭಿವೃದ್ದಿ ಮತ್ತು ನಿರ್ವಹಣೆಗಾಗಿ ಟಾಟಾ ಮೋಟಾರ್ಸ್ ಕಂಪನಿಯು ತನ್ನದೇ ಅಧೀನದಲ್ಲಿ ಮತ್ತೊಂದು ಇವಿ ವಾಹನಗಳ ಅಂಗ ಸಂಸ್ಥೆಯನ್ನು ತೆರೆಯುವ ಸಿದ್ದತೆಯಲ್ಲಿದ್ದು, 2022ರ ಆರಂಭದಲ್ಲಿ ಹೊಸ ಪ್ಲ್ಯಾಟ್‌ಫಾರ್ಮ್ ಕುರಿತಾಗಿ ಮಾಹಿತಿ ಹಂಚಿಕೊಳ್ಳಲಿದೆ ಎನ್ನಲಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಮುಂದಿನ ಐದು ವರ್ಷಗಳ ಹೊಸ ಯೋಜನೆಗಾಗಿ ಒಟ್ಟು ರೂ.16,500 ಬಂಡವಾಳ ಹೂಡಿಕೆಗೆ ಸಿದ್ದತೆ ನಡೆಸುತ್ತಿದ್ದು, ಟಿಪಿಜಿ ರೈಸ್ ಕ್ಲೈಮೆಟ್ ಕಂಪನಿಯು ರೂ.7,500 ಕೋಟಿ ಬಂಡವಾಳ ಹೂಡಿಕೆಯೊಂದಿಗೆ ಹೊಸ ಇವಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಶೇ.15 ರಷ್ಟು ಸ್ಟಾಕ್ ಖಾತ್ರಿಪಡಿಸಿಕೊಂಡಿದೆ.

Most Read Articles

Kannada
English summary
Tata motors getting high demand in ev segment market share increased
Story first published: Saturday, October 16, 2021, 10:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X