ಬಿಡುಗಡೆಯ ನಂತರ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಇದೇ ತಿಂಗಳ 21ರಿಂದಲೇ ಅನ್ವಯವಾಗುವಂತೆ ಬೆಲೆ ಹೆಚ್ಚಳ ಮಾಡಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಸಹ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.2 ರಷ್ಟು ದರ ಹೆಚ್ಚಳ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಸಹ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ. 1 ರಷ್ಟು ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಟಾಟಾ ಹೊಸ ದರಪಟ್ಟಿಯಲ್ಲಿ ನೆಕ್ಸಾನ್ ಇವಿ ಮಾದರಿಯು ವಿವಿಧ ವೆರಿಯೆಂಟ್‌ಗೆ ಅನುಗುಣವಾಗಿ ರೂ. 15 ಸಾವಿರ ಹೆಚ್ಚಳದೊಂದಿಗೆ ಇವಿ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು 16.40 ಲಕ್ಷ ಬೆಲೆ ಹೊಂದಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ನೆಕ್ಸಾನ್ ಇವಿ ಮೂಲಕ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬಿಡುಗಡೆಗೊಳಿಸಿ ಯಶಸ್ವಿ ಒಂದು ವರ್ಷ ಪೂರೈಸಿದ್ದು, ಹೊಸ ಕಾರು ಬಿಡುಗಡೆಯಾದ ಮೊದಲನೇ ವರ್ಷದಲ್ಲೇ ಉತ್ತಮ ಬೇಡಿಕೆಯೊಂದಿಗೆ ಹಲವಾರು ಬದಲಾವಣೆಗಳಿಗೆ ಕಾರಣವಾಗಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಪರಿಸರಕ್ಕೆ ಪೂರಕವಾದ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದರೂ ಚಾರ್ಜಿಂಗ್ ನಿಲ್ದಾಣಗಳ ಕೊರತೆಯಿಂದಾಗಿ ಇವಿ ವಾಹನಗಳ ಮಾರಾಟವು ಹಿನ್ನಡೆ ಅನುಭವಿಸುತ್ತಿದ್ದು, ಚಾರ್ಜಿಂಗ್ ನಿಲ್ದಾಣಗಳ ಕೊರತೆ ನಡುವೆಯೂ ಟಾಟಾ ನೆಕ್ಸಾನ್ ಇವಿ ಕಾರು ನೀರಿಕ್ಷೆ ಮೀರಿ ಬೇಡಿಕೆ ಪಡೆದುಕೊಂಡಿದೆ. ಗ್ರಾಹಕರ ಬೇಡಿಕೆಯೆಂತೆ ಇದೀಗ ಸಾರ್ವಜನಿಕ ಬಳಕೆಯ ಚಾರ್ಜಿಂಗ್ ನಿಲ್ದಾಣಗಳನ್ನು ಹೆಚ್ಚಿಸುತ್ತಿರುವುದರಿಂದ ನೆಕ್ಸಾನ್ ಇವಿ ಮಾರಾಟದಲ್ಲಿ ಕಳೆದ ಕೆಲ ತಿಂಗಳಿನಿಂದ ಸಾಕಷ್ಟು ಬೇಡಿಕೆ ಹರಿದುಬಂದಿದ್ದು, ಹೊಸ ಕಾರು ಒಂದು ವರ್ಷದ ಅವಧಿಯಲ್ಲಿ 3 ಸಾವಿರ ಯುನಿಟ್ ಮಾರಾಟಗೊಂಡಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ನೆಕ್ಸಾನ್ ಇವಿ ಕಾರು ಬಿಡುಗಡೆಯಾದ 8 ತಿಂಗಳಾದರೂ ಕೇವಲ 1 ಸಾವಿರ ಯುನಿಟ್ ಮಾರಾಟ ಮಾಡಲು ಹರಸಾಹಸಪಟ್ಟಿದ್ದ ಟಾಟಾ ಮೋಟಾರ್ಸ್ ಕಂಪನಿಯು ಕಳೆದ 4 ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಡೀಸೆಲ್ ವಾಹನ ನಿರ್ವಹಣಾ ವೆಚ್ಚವು ಹೆಚ್ಚುತ್ತಿರುವುದರಿಂದ ಹಲವು ಗ್ರಾಹಕರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ಆಸಕ್ತಿ ತೋರುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಫೀಚರ್ಸ್‌ಗಳನ್ನು ಹೊಂದಿರುವ ನೆಕ್ಸಾನ್ ಇವಿ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಬೇಡಿಕೆ ಪಡೆದುಕೊಳುತ್ತಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳಲು ಸುಧಾರಿತ ಜಿಪ್‌ಟ್ರಾನ್ ತಂತ್ರಜ್ಞಾನ ಬಳಕೆ ಮಾಡುತ್ತಿರುವುದೇ ಟಾಟಾ ಹೊಸ ಎಲೆಕ್ಟ್ರಿಕ್ ಕಾರಿನ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಮೂರು ವೆರಿಯೆಂಟ್‌ನೊಂದಿಗೆ ಖರೀದಿಗೆ ಲಭ್ಯವಿದೆ.

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯು ಎಕ್ಸ್‌ಎಂ, ಎಕ್ಸ್‌ಝಡ್ ಪ್ಲಸ್, ಎಕ್ಸ್‌ಝಡ್‍ ಪ್ಲಸ್ ಲಕ್ಸ್ ಎನ್ನುವ ಮೂರು ಪ್ರಮುಖ ವೆರೆಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಎಲೆಕ್ಟ್ರಿಕ್ ಕಾರಿನಲ್ಲಿ 95 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟಾರ್ ಅಳವಡಿಸಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ಟಾಟಾ ನೆಕ್ಸಾನ್ ಇವಿ

ಎ‍ಆರ್‌ಎಐ ಪ್ರಮಾಣ ಪತ್ರದಂತೆ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಒಂದು ಬಾರಿಗೆ ಪೂರ್ತಿಯಾಗಿ ಚಾರ್ಜ್ ಆದಲ್ಲಿ ಇಕೋ ಮೋಡ್‌ನಲ್ಲಿ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ವಿವಿಧ ಡ್ರೈವಿಂಗ್ ಮೋಡ್‌ಗಳಲ್ಲಿ ಚಾಲನೆ ಮಾಡಿದಾಗ ಕನಿಷ್ಠ 250 ಕಿ.ಮೀ ನಿಂದ 280 ಕಿ.ಮೀ ವರೆಗೂ ಮೈಲೇಜ್ ಸುಲಭವಾಗಿ ನೀಡುತ್ತದೆ.

Most Read Articles

Kannada
English summary
Tata Motors Hiked The Prices Of Nexon Electric For The Second Time.
Story first published: Saturday, January 30, 2021, 0:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X