ಟಾಟಾ ಹೊಸ ಕಾರುಗಳ ಬೆಲೆಯಲ್ಲಿ ಶೇ.1.80 ರಷ್ಟು ಹೆಚ್ಚಳ
ಟಾಟಾ ಮೋಟಾರ್ಸ್ ತನ್ನ ಪ್ರಮುಖ ಪ್ರಯಾಣಿಕ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದು, ಹೊಸ ದರವನ್ನು ಇಂದಿನಿಂದಯೇ ಅನ್ವಯವಾಗುವಂತೆ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಉತ್ಪಾದನಾ ವೆಚ್ಚ ಹೆಚ್ಚಿರುವ ಹಿನ್ನಲೆಯಲ್ಲಿ ಬೆಲೆ ಹೆಚ್ಚಳ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದು, ಕಾರುಗಳ ಬೆಲೆಗೆ ಅನುಗುಣವಾಗಿ ಶೇ.1 ರಿಂದ ಶೇ.1.80 ರಷ್ಟು ದರ ಏರಿಕೆ ಮಾಡಲಾಗಿದೆ. ಹೊಸ ದರಪಟ್ಟಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವಿವಿಧ ಕಾರುಗಳ ಬೆಲೆಯನ್ನು ಕನಿಷ್ಠ ರೂ. 10 ಸಾವಿರದಿಂದ ಗರಿಷ್ಠ ರೂ. 36 ಸಾವಿರ ತನಕ ಹೆಚ್ಚಳ ಮಾಡಲಾಗಿದೆ.

ಮೇ 8ರಿಂದ ಕಾರು ಖರೀದಿಸುವ ಗ್ರಾಹಕರಿಗೆ ಮಾತ್ರ ಹೊಸ ದರ ಅನ್ವಯವಾಗಿದೆ ಎಂಬುವುದನ್ನು ಸ್ಪಷ್ಟಪಡಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಬಿಡುಗಡೆಯಾದ ಸಫಾರಿ ಎಸ್‌ಯುವಿ ಕಾರು ಮಾದರಿಯ ಬೆಲೆಯಲ್ಲೂ ಹೆಚ್ಚಿಸಲಾಗಿದೆ.

ಕಳೆದ ಜನವರಿಯಲ್ಲಿ ವಿವಿಧ ವಾಹನ ಮಾದರಿಗಳ ಬೆಲೆ ಹೆಚ್ಚಳ ಮಾಡಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಹೆಚ್ಚಳ ಮಾಡಿದೆ.

ಗ್ರಾಹಕರ ಬೇಡಿಕೆಯೆಂತೆ ಟಾಟಾ ಮೋಟಾರ್ಸ್ ಸದ್ಯ ಟಿಯಾಗೊ, ಟಿಗೋರ್, ಆಲ್‌ಟ್ರೊಜ್, ನೆಕ್ಸಾನ್, ನೆಕ್ಸಾನ್ ಇವಿ, ಹ್ಯಾರಿಯರ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್, ಟಿಯಾಗೋ, ಹ್ಯಾರಿಯರ್ ಮತ್ತು ನ್ಯೂ ಜನರೇಷನ್ ಸಫಾರಿ ಎಸ್‌ಯುವಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಹೊಸ ದರಪಟ್ಟಿಯಲ್ಲಿ ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6.95 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.59 ಲಕ್ಷದಿಂದ ರೂ. 7.73 ಲಕ್ಷ ಬೆಲೆ ಹೊಂದಿದೆ.

ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಅತ್ಯುತ್ತಮ ಸುರಕ್ಷಾ ಫೀಚರ್ಸ್‌ಗಳೊಂದಿಗೆ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ನೆಕ್ಸಾನ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.95 ಲಕ್ಷ ಬೆಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.

ಹ್ಯಾರಿಯರ್ ಕಾರು ಮಾದರಿಯು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.29 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.81 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ದರಪಟ್ಟಿಯಲ್ಲಿ ಹ್ಯಾರಿಯರ್ ಹೆಚ್ಚಿನ ಮಟ್ಟದ ದರ ಪಡೆದುಕೊಂಡಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಬೆಲೆಯನ್ನು ರೂ. 5.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ನಿಗದಿಪಡಿಸಿದ್ದು, ಸಫಾರಿ ಎಸ್‌ಯುವಿ ಮಾದರಿಯು ಆರಂಭಿಕವಾಗಿ ರೂ. 14.99 ಲಕ್ಷದಿಂದ ರೂ. 21.81 ಲಕ್ಷ ಬೆಲೆ ಹೊಂದಿದೆ.


Click it and Unblock the Notifications








