ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ದೇಶಿಯ ಮಾರುಕಟ್ಟೆಯಲ್ಲಿ ಕಾರು ಮಾರಾಟದಲ್ಲಿ ಹೊಸ ದಾಖಲೆಗಳಿಗೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ಯಾಸೆಂಜರ್ ಕಾರು ಮಾರಾಟ ವ್ಯಾಪ್ತಿಯನ್ನು ವಿಸ್ತರಿಸುತ್ತಿದ್ದು, ನೇಪಾಳದಲ್ಲೂ ಟಾಟಾ ಮೋಟಾರ್ಸ್ ಕಂಪನಿಯು ಮೊದಲ ಬಾರಿಗೆ ಕಾರು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿದೆ.

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಪ್ಯಾಸೆಂಜರ್ ಕಾರುಗಳ ಜೊತೆಗೆ ವಾಣಿಜ್ಯ ವಾಹನ ವಾಹನಗಳ ವಿಭಾಗದಲ್ಲೂ ಈಗಾಗಲೇ ಮುಂಚೂಣಿ ಸಾಧಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ವಿವಿಧ ಮಾದರಿಯ ವಾಣಿಜ್ಯ ವಾಹನಗಳ ಮಾರಾಟದಲ್ಲಿ ಜನಪ್ರಿಯ ಹೊಂದಿದೆ. ವಿಶ್ವಾದ್ಯಂತ ಸುಮಾರು 125 ರಾಷ್ಟ್ರಗಳಲ್ಲಿ ವಾಣಿಜ್ಯ ವಾಹನಗಳ ಮಾರಾಟ ಹೊಂದಿರುವ ಟಾಟಾ ಮೋಟಾರ್ಸ್ ಕಂಪನಿಯು ಕೆಲವೇ ಕೆಲವು ರಾಷ್ಟ್ರಗಳಲ್ಲಿ ಪ್ಯಾಸೆಂಜರ್ ಕಾರು ಮಾರಾಟ ಸೌಲಭ್ಯ ಹೊಂದಿದೆ.

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ನೆರೆಯ ರಾಷ್ಟ್ರ ನೇಪಾಳದಲ್ಲಿ ಈಗಾಗಲೇ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ಕಾರುಗಳ ಮಾರಾಟ ಆರಂಭಿಸಿದ್ದು, ಬಿಎಸ್-6 ಸರಣಿಯಲ್ಲಿರುವ ಬಹುತೇಕ ಕಾರುಗಳನ್ನು ಪರಿಚಯಿಸಿದೆ.

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಟಿಯಾಗೋ ಹ್ಯಾಚ್‌ಬ್ಯಾಕ್, ಟಿಗೋರ್ ಕಂಪ್ಯಾಕ್ಟ್ ಸೆಡಾನ್, ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್, ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಹೆಚ್5(ಭಾರತದಲ್ಲಿ ಹ್ಯಾರಿಯರ್) ಮಾದರಿಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಹೊಸ ಕಾರುಗಳು ಸಂಪೂರ್ಣವಾಗಿ ಭಾರತದಿಂದಲೇ ರಫ್ತುಗೊಳ್ಳಲಿವೆ.

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಭಾರತದಿಂದ ಈಗಾಗಲೇ ಹಲವಾರು ವಾಣಿಜ್ಯ ವಾಹನಗಳನ್ನು ರೈಲ್ವೆ ಮೂಲಕವೇ ರಫ್ತು ಕೈಗೊಳ್ಳುತ್ತಿರುವ ಟಾಟಾ ಕಂಪನಿಯು ಪ್ಯಾಸೆಂಜರ್ ಕಾರುಗಳನ್ನು ಸಹ ರೈಲ್ವೆ ಮೂಲಕವೇ ರಫ್ತು ಮಾಡಲಿದ್ದು, ಟಾಟಾ ಹೊಸ ಕಾರುಗಳಿಗೆ ಈಗಾಗಲೇ ಸಾಕಷ್ಟು ಬೇಡಿಕೆ ದಾಖಲಾಗಿದೆ. ಸಿಪ್ರಡಿ ಟ್ರೇಡಿಂಗ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಜೊತೆಗೂಡಿ ಹೊಸ ಶೋರೂಂಗಳನ್ನು ತೆರೆಯಲಾಗುತ್ತಿದ್ದು, ಶೀಘ್ರದಲ್ಲೇ ಹೊಸ ಮಾರುಕಟ್ಟೆಗಾಗಿ ಮತ್ತಷ್ಟು ವಾಹನಗಳನ್ನು ಬಿಡುಗಡೆ ಮಾಡುವ ಭರವಸೆ ನೀಡಿದೆ.

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಲ್ಯಾಟಿನ್ ಅಮೆರಿಕದ ಪ್ರಮುಖ ಮಾರುಕಟ್ಟೆಗಳಿಗೆ ವಿವಿಧ ಕಾರುಗಳ ಮಾರಾಟವನ್ನು ಪರಿಚಯಿಸಿದ ನಂತರ ನೇಪಾಳದಲ್ಲೂ ಕಾರು ಮಾರಾಟಕ್ಕೆ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಹೊಸ ಮಾರುಕಟ್ಟೆಗಳಿಂದ ಉತ್ತಮ ಬೇಡಿಕೆಯನ್ನು ನೀರಿಕ್ಷಿಸಲಾಗಿದೆ.

MOST READ: ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ವಿವಿಧ ಕಾರುಗಳ ಮಾರಾಟದಲ್ಲಿನ ವಾರ್ಷಿಕ ಬೆಳವಣಿಗೆಯಲ್ಲಿ ಕಳೆದ 9 ವರ್ಷಗಳ ಅವಧಿಯಲ್ಲೇ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಕಳೆದ ಒಂದು ವರ್ಷ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳನ್ನು ಮಾರಾಟ ಮಾಡಿದೆ.

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಪ್ರಯಾಣಿಕರ ವಾಹನದ ಜೊತೆಗೆ ವಾಣಿಜ್ಯ ವಾಹನ ಮಾರಾಟದಲ್ಲೂ ಕೂಡಾ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಅತ್ಯುತ್ತಮ ದೇಶಿಯ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಬಿಡುಗಡೆಯಾಗಲಿರುವ ಹೊಸ ವಾಹನಗಳು ಟಾಟಾ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಲ್ಲಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನೇಪಾಳದಲ್ಲಿ ಮೊದಲ ಬಾರಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಿದ ಟಾಟಾ ಮೋಟಾರ್ಸ್

ಸದ್ಯ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಮತ್ತು ಹ್ಯುಂಡೈ ನಂತರ ಮೂರನೇ ಸ್ಥಾನಕ್ಕೇರಿರುವ ಟಾಟಾ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಮತ್ತಷ್ಟು ಹೊಸ ಕಾರುಗಳ ಮೂಲಕ ಪ್ರತಿ ತಿಂಗಳು 40 ಸಾವಿರ ಯುನಿಟ್ ಮಾರಾಟ ಗುರಿಹೊಂದಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಸಫಾರಿ ಮತ್ತು ಬಿಡುಗಡೆಯಾಗಲಿರುವ ಮೈಕ್ರೊ ಎಸ್‌ಯುವಿ ಕಾರು ಮಾದರಿಯು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

Most Read Articles

Kannada
English summary
Tata Motors Introduced New Range Of Passenger Vehicles In Nepal. Read in Kannada.
Story first published: Friday, March 12, 2021, 17:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X