ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಕೋವಿಡ್ 2ನೇ ಅಲೆಯ ಪರಿಣಾಮ ಮೇ ಮತ್ತು ಜೂನ್ ಆರಂಭದಲ್ಲಿ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ನೆಲಕಚ್ಚಿದ ಪರಿಣಾಮ ಆಟೋ ಉದ್ಯಮವು ಸಹ ಹಿನ್ನಡೆ ಅನುಭವಿಸಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನಗಳ ಮಾರಾಟದಲ್ಲಿ ತುಸು ಚೇತರಿಕೆ ಕಂಡುಬಂದಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಟಾಟಾ ಮೋಟಾರ್ಸ್ ಕಂಪನಿಯು ಕೋವಿಡ್ ಪರಿಣಾಮ ಮೇ ತಿಂಗಳ ಅವಧಿಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಕುಸಿತ ಕಂಡಿದ್ದರೂ ಜೂನ್ ಅವಧಿಯ ಕಾರು ಮಾರಾಟದಲ್ಲಿ ತುಸು ಸುಧಾರಣೆ ಕಂಡಿದ್ದು, ಟಾಟಾ ಕಂಪನಿಯ ಜೂನ್ ತಿಂಗಳ ಕಾರು ಮಾರಾಟವು ಕಳೆದ ವರ್ಷದ ಜೂನ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ. 113 ರಷ್ಟು ಬೆಳವಣಿಗೆ ಸಾಧಿಸಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಕೋವಿಡ್ ಪರಿಣಾಮ ಮಾರಾಟದಲ್ಲಿ ತೀವ್ರ ಕುಸಿತದ ನಂತರ ಇದೀಗ ಆರ್ಥಿಕ ಚಟುವಟಿಕೆಗಳು ಸುಧಾರಣೆಗೊಳ್ಳುತ್ತಿರುವ ಪರಿಣಾಮ ವಾಹನ ಮಾರಾಟದಲ್ಲಿ ಏರಿಕೆ ಕಂಡುಬಂದಿದ್ದು, ಟಾಟಾ ಮೋಟಾರ್ಸ್ ಕಂಪನಿಯು ಜೂನ್ ಅವಧಿಯಲ್ಲಿ ಒಟ್ಟು 43,704 ವಾಹನಗಳನ್ನು ಮಾರಾಟ ಮಾಡಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

43,704 ವಾಹನಗಳಲ್ಲಿ 24,110 ಪ್ರಯಾಣಿಕರ ವಾಹನಗಳು ಮತ್ತು 22,100 ಯುನಿಟ್ ವಾಣಿಜ್ಯ ವಾಹನಗಳು ಸೇರಿದ್ದು, ಪ್ರಯಾಣಿಕ ವಾಹನಗಳ ಮಾರಾಟದಲ್ಲಿ ಶೇ. 113ರಷ್ಟು ಮತ್ತು ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ. 150 ರಷ್ಟು ಬೆಳವಣಿಗೆ ಕಂಡುಬಂದಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

2020ರ ಜೂನ್‌ನಲ್ಲಿ ಕೇವಲ 19,387 ವಾಹನಗಳನ್ನು ಮಾರಾಟ ಮಾಡಿದ್ದ ಟಾಟಾ ಕಂಪನಿಯು ಇದೀಗ 43,704 ಯುನಿಟ್ ವಾಹನ ಮಾರಾಟ ಮಾಡಿ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಪ್ರಯಾಣಿಕರ ವಾಹನ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಇನ್ನು ಕೋವಿಡ್ ಭೀತಿಯಿಂದ ಗ್ರಾಹಕರು ಶೋರೂಂಗಳಿಗೆ ಭೇಟಿ ನೀಡದೆ ವಾಹನ ಖರೀದಿಗೆ ಆಸಕ್ತಿ ತೋರುವುದರ ಜೊತೆಗೆ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳಿಗೆ ಆದ್ಯತೆ ನೀಡುತ್ತಿರುವುದು ಆಟೋ ಕಂಪನಿಗಳಿಗೆ ಉತ್ತಮ ಆಯ್ಕೆಯಾಗುತ್ತಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಆಟೋ ಉದ್ಯಮವು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಬದಲಾವಣೆಗಳಿಗೆ ಸಾಕ್ಷಿಯಾಗಿದ್ದು, ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿರುತ್ತದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಆದರೆ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದ್ದು, ಇದೀಗ ಟಾಟಾ ಕಂಪನಿಯು ಸಹ ಶೋರೂಂಗಳು ಆರಂಭವಿಲ್ಲವಾದರೂ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗೆ ಹೆಚ್ಚಿನ ಒತ್ತು ನೀಡುವ ಮೂಲಕ ಒಂದಿಷ್ಟು ಬೇಡಿಕೆ ಪಡೆದುಕೊಂಡಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಸಾಕಷ್ಟು ಪ್ರಯೋಜಕಾರಿಯಾಗಿದೆ.

ಕೋವಿಡ್ ಅಬ್ಬರದ ನಡುವೆಯೂ ಭರ್ಜರಿಯಾಗಿ ಮಾರಾಟವಾದ ಟಾಟಾ ಕಾರುಗಳು

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ.

Most Read Articles

Kannada
English summary
Tata Motors June Sales In Domestic Market 24,110 Unites Cars.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X