ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆಗೊಳಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ಒಂದು ವರ್ಷ ಪೂರ್ಣಗೊಳಿಸಿದ್ದು, ಕಂಪನಿಯು ಹೊಸ ಕಾರಿನಲ್ಲಿ ಮೊದಲ ವರ್ಷದ ಸಂಭ್ರಮಕ್ಕಾಗಿ ಇತ್ತೀಚೆಗೆ ಐ-ಟರ್ಬೊ ನಂತರ ಇದೀಗ ಮತ್ತೊಂದು ಟಾಪ್ ಎಂಡ್ ಮಾದರಿಯನ್ನು ಬಿಡುಗಡೆ ಮಾಡಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಆಲ್‌ಟ್ರೊಜ್ ಆವೃತ್ತಿಯು ಬಿಡುಗಡೆಗೊಂಡ ಕೆಲವೇ ದಿನಗಳಲ್ಲಿ ಹಲವು ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಉನ್ನತ ಮಾದರಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಾಗಿದೆ. ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರಿನ ಉನ್ನತ ಮಾದರಿಯಾಗಿ ಹೊಸ ಎಕ್ಸ್‌ಜೆಡ್ ಪ್ಲಸ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಉನ್ನತ ಮಾದರಿಯಾಗಿ ಮಾರಾಟಗೊಳ್ಳಲಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದಿರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ತಿಂಗಳಿಗೆ ಒಂದು ಬಾರಿಗೆ ವೆರಿಯೆಂಟ್‌ಗಳ ಉನ್ನತೀಕರಣ ಮತ್ತು ಹೊಸ ವೆರಿಯೆಂಟ್ ಅಭಿವೃದ್ದಿಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಇದೀಗ ಆಲ್‌ಟ್ರೊಜ್ ಮಾದರಿಯ ಹೈ ಎಂಡ್ ಆವೃತ್ತಿಯಾಗಿ ಎಕ್ಸ್‌ಜೆಡ್ ಪ್ಲಸ್ ಮಾದರಿಯನ್ನು ಹೊಸದಾಗಿ ಬಿಡುಗಡೆಗೊಳಿಸಲಾಗಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಹೊಸ ಮಾದರಿಯನ್ನು ಇತ್ತೀಚೆಗೆ ಬಿಡುಗಡೆಯಾದ ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್‌ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಪೆಟ್ರೋಲ್ ಮಾದರಿಗೆ ರೂ. 8.86 ಲಕ್ಷ ಮತ್ತು ಡೀಸೆಲ್ ಮಾದರಿಗೆ ರೂ. 9.46 ಲಕ್ಷಕ್ಕೆ ನಿಗದಿಪಡಿಸಲಾಗಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಆಲ್‌ಟ್ರೊಜ್ ಕಾರು ಮಾದರಿಯು ಹೊಸದಾಗಿ ಬಿಡುಗಡೆ ಮಾಡಲಾದ ಎಕ್ಸ್‌ಜೆಡ್ ಪ್ಲಸ್ ಜೊತೆಗೆ ಎಕ್ಸ್‌ಇ, ಎಕ್ಸ್ಎಂ, ಎಕ್ಸ್ಎಂ ಪ್ಲಸ್, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌‌ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸ ವೆರಿಯೆಂಟ್ ನಂತರ ಆಲ್‌ಟ್ರೊಜ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.70 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.46 ಲಕ್ಷ ಬೆಲೆ ಹೊಂದಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಹೊಸ ಟಾಟಾ ಆಲ್‌‌ಟ್ರೊಜ್ ಐಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ ನೀಡಲಾಗಿರುವ 1.2-ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಗರಿಷ್ಠ 108-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಐ-ಟರ್ಬೊ ಮಾದರಿಯು ಸಿಟಿ ಮತ್ತು ಸ್ಟೋರ್ಟ್ ಡ್ರೈವಿಂಗ್ ಮೋಡ್‌ಗಳನ್ನು ನೀಡಲಾಗಿದ್ದು, ಸದ್ಯಕ್ಕೆ ಹೊಸ ಮಾದರಿಯಲ್ಲಿ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ನೀಡಿರುವ ಕಂಪನಿಯು ಶೀಘ್ರದಲ್ಲೇ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಸಹ ನೀಡಲಿದೆಯೆಂತೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಕಾರಿನ ಟರ್ಬೊ ಮಾದರಿಗಳಲ್ಲಿ ಮತ್ತು ಸಾಮಾನ್ಯ ಪೆಟ್ರೋಲ್ ಮಾದರಿಯ ಹೈ ಎಂಡ್ ವೆರಿಯೆಂಟ್‌ಗಳಲ್ಲಿ ಕನೆಕ್ಟೆಡ್ ಟೆಕ್ನಾಲಜಿ ಬಳಕೆ ಮಾಡಿದ್ದು, ಹೊಸ ತಂತ್ರಜ್ಞಾನವು ಕಾರಿಗೆ ಗರಿಷ್ಠ ಭದ್ರತೆ ನೀಡುತ್ತದೆ.

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಐರಾ(iRA) ಕನೆಕ್ಟೆಡ್ ಫೀಚರ್ಸ್ ಅನ್ನು ಆಲ್‌ಟ್ರೊಜ್ ಐಟರ್ಬೋ ಆವೃತ್ತಿಯಲ್ಲಿ ಜೋಡಣೆ ಮಾಡುವ ಮೂಲಕ ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕನೆಕ್ಟೆಡ್ ಫೀಚರ್ಸ್ ಹಲವು ಹೊಸ ವೈಶಿಷ್ಟ್ಯತೆಗಳೊಂದಿಗೆ ಕಾರುಗಳಿಗೆ ಗರಿಷ್ಠ ಭದ್ರತೆ ನೀಡುತ್ತದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೈ ಎಂಡ್ ವೆರಿಯೆಂಟ್ ಬಿಡುಗಡೆ

ಹೊಸ ಐರಾ ಕನೆಕ್ಟೆಡ್ ಫೀಚರ್ಸ್‌ನಲ್ಲಿ ಸುಮಾರು 70ಕ್ಕೂ ಹೆಚ್ಚು ವಾಯ್ಸ್ ಕಮಾಂಡ್ ಸೌಲಭ್ಯವಿದ್ದು, ಒಂದೇ ಸೂರಿನಡಿ ಕಾರಿನ ಬಹುತೇಕ ತಾಂತ್ರಿಕ ಅಂಶಗಳನ್ನು ನಿಯಂತ್ರಣ ಮಾಡಬಹುದಲ್ಲದೆ ತಾಂತ್ರಿಕ ದೋಷಗಳನ್ನು ಅತಿ ಸುಲಭವಾಗಿ ಪತ್ತೆ ಮಾಡಬಹುದಾಗಿದೆ.

Most Read Articles

Kannada
English summary
Tata Motors Launched A New Top-Spec XZ+ Variant For Altroz. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X